Confiança
A confiança em Deus é âncora da alma em tempos de tempestade. Quem confia no Senhor não será abalado — porque o Deus fiel sustenta, protege e guia os que nele esperam.
Confiança inabalável
Tudo posso naquele que me fortalece. O meu Deus suprirá toda necessidade. Quem confia não será confundido.
ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.
ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.
ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?
ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.
ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು
ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.
"ನನ್ನ ಆಶ್ರಯವೂ, ನನ್ನ ಕೋಟೆಯೂ,
ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು."
ದೇವರು ನನ್ನ ರಕ್ಷಣೆಗೂ ನನ್ನ ಗೌರವಕ್ಕೂ ಆಧಾರವಾಗಿದ್ದಾರೆ.
ದೇವರು ನನ್ನ ಬಲವಾದ ಬಂಡೆಯೂ ನನ್ನ ಆಶ್ರಯವೂ ಆಗಿದ್ದಾರೆ.
ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು.
ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ.
ಸಾಯುವ ಮನುಷ್ಯನು ನನಗೇನು ಮಾಡಬಲ್ಲ?
Fundamento de confiança
Deus não é homem para que minta. Todas as suas promessas são firmes. Confiar em Deus é segurança absoluta.
ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ.
ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ.
ಅವರು ನುಡಿದದ್ದನ್ನು ಮಾಡದಿರುವರೇ?
ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?
ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ,
"ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ,
ಎಂದಿಗೂ ತೊರೆಯುವುದಿಲ್ಲ!"
ಆದ್ದರಿಂದ,
"ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು.
ಮನುಷ್ಯನು ನನಗೆ ಏನು ಮಾಡಬಲ್ಲನು?"
ಎಂದು ನಾವು ಧೈರ್ಯವಾಗಿ ಹೇಳುವೆವು.
ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ.
ಆದ್ದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲಗೊಂಡವನಾಗಿರು.
ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು
ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.
ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು.
ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.
ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು
ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.
ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು.
ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.
ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು,
ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು.
ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು.
ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು;
ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.
Confiar em todas as coisas
Não pertenço ao mundo — minha cidadania é do céu. A confiança cristã repousa na fidelidade de Deus, não nas circunstâncias.
ಪರಲೋಕದ ಕಾರ್ಯಗಳ ಮೇಲೆಯೇ ನಿಮ್ಮ ಮನಸ್ಸಿಡಿರಿ, ಭೂಸಂಬಂಧವಾದವುಗಳ ಮೇಲೆ ಮನಸ್ಸಿಡಬೇಡಿರಿ.
ಆಗ ಯೇಸು ಅವನಿಗೆ, "ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ," ಎಂದು ಹೇಳಿದರು.
ಅದಕ್ಕೆ ಯೇಸು, "ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ," ಎಂದು ಹೇಳಿದರು.
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?
"ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ," ಎಂದರು.
"ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ,
ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು.
ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ,
ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು.
ಬಿಸಿಲಿನ ಧಗೆಗೆ ಭಯಪಡದೆ,
ಹಸುರೆಲೆಯನ್ನು ಚಿಗುರಿಸುತ್ತಾ.
ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ
ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು."
ನೀನು ಜಲರಾಶಿಯನ್ನು ದಾಟಿಹೋಗುವಾಗ,
ನಾನು ನಿನ್ನೊಂದಿಗಿರುವೆನು;
ನದಿಗಳನ್ನು ನೀನು ದಾಟುವಾಗ,
ಅವು ನಿನ್ನನ್ನು ಮುಳುಗಿಸುವುದಿಲ್ಲ;
ಬೆಂಕಿಯಲ್ಲಿ ನಡೆಯುವಾಗ,
ನೀನು ಸುಟ್ಟುಹೋಗುವುದಿಲ್ಲ;
ಜ್ವಾಲೆಯು ನಿನ್ನನ್ನು ದಹಿಸದು.
ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.
ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.
ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ.
ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.
ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
Esperar com confiança
O Senhor está perto de todos os que o invocam. Na espera confiante encontramos descanso e direção divina.
ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ,
ಅವರು ಅವರಿಗೆ ಸಮೀಪವಾಗಿದ್ದಾರೆ.
ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ;
ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ;
ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ,
ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ.
ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ;
ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ.
ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು;
ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.
ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ;
ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ,
ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ
ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.
ಪರಲೋಕದಲ್ಲಿ ನನಗೆ ನೀವಲ್ಲದೆ ಮತ್ಯಾರಿದ್ದಾರೆ?
ಇಹಲೋಕದಲ್ಲಿ ನಿಮ್ಮನ್ನಲ್ಲದೆ ಇನ್ನಾರನ್ನೂ ನಾನು ಬಯಸುವುದಿಲ್ಲ.
ಆ ದೃಢ ನಿಷ್ಠೆಯು ನಿಮ್ಮಲ್ಲಿ ಪೂರ್ಣ ಕ್ರಿಯೆಯನ್ನು ಉಂಟುಮಾಡಿದಾಗ, ಆಗ ನೀವು ಪರಿಪಕ್ವತೆಗೆ ಬಂದವರೂ ಪರಿಪೂರ್ಣರೂ ಯಾವ ಕೊರತೆಯೂ ಇಲ್ಲದವರೂ ಆಗಿರುವಿರಿ.
ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು.
ನಾವು ನೋಡುವವರಾಗಿ ಜೀವಿಸದೆ, ನಂಬುವವರಾಗಿ ಜೀವಿಸುತ್ತಿದ್ದೇವೆ.