Confiar no Senhor
Confiar no Senhor é a base de toda vida espiritual. A confiança em Deus nos livra do medo, nos dá paz e nos posiciona para receber as promessas divinas.
Confiar de todo coração
Confia no Senhor de todo o coração. Não te apoies em teu próprio entendimento — em todos os caminhos o reconheça.
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ
ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು;
ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ದೇವಾಶ್ರಿತನು ಸುರಕ್ಷಿತನು
ಅತ್ಯುನ್ನತನಾದ ದೇವರ ಮೊರೆಹೊಕ್ಕವನು,
ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
ನಾನು ಯೆಹೋವನಿಗೆ, "ನೀನೇ ನನ್ನ ಶರಣನು, ನನ್ನ ದುರ್ಗವು,
ನಾನು ಭರವಸವಿಟ್ಟಿರುವ ನನ್ನ ದೇವರು" ಎಂದು ಹೇಳುವೆನು.
ನನ್ನನ್ನು ಬೇಟೆಗಾರನ ಬಲೆಯಿಂದಲೂ,
ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು;
ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ.
ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.
ಯೆಹೋವನೇ ವಿಶ್ವಾಸಿಗಳ ಆಶ್ರಯ
ಯೆಹೋವನಲ್ಲಿ ಭರವಸೆ ಇಡುವವರು,
ಚೀಯೋನ್ ಪರ್ವತದ ಹಾಗೆ ಇದ್ದಾರೆ;
ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ,
ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
ಅವನಿಗೆ ಕೆಟ್ಟ ಸುದ್ದಿಯ ಭಯವಿರುವುದಿಲ್ಲ;
ಯೆಹೋವನಲ್ಲಿ ಭರವಸವಿಟ್ಟಿರುವುದರಿಂದ,
ಅವನ ಮನಸ್ಸು ಸ್ಥಿರವಾಗಿರುವುದು.
ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು;
ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
ನೀನು ಯೆಹೋವನಲ್ಲಿ ಸಂತೋಷಿಸು;
ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು;
ಆತನೇ ಅದನ್ನು ಸಾಗಿಸುವನು.
ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ,
ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು
ನಿನ್ನಲ್ಲಿ ಭರವಸವಿಡುವರು;
ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
Segurança em Deus
Bem-aventurado o homem que confia no Senhor. Ele é como árvore plantada junto às águas — não temerá quando vier o calor.
ಯಾರು ಯೆಹೋವನಲ್ಲಿ ನಂಬಿಕೆಯಿಟ್ಟಿದ್ದಾರೋ, ಯಾರಿಗೆ ಯೆಹೋವನು ಭರವಸೆಯಾಗಿದ್ದಾನೋ ಅವರೇ ಧನ್ಯರು.
ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ,
ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು."
ಯೆಹೋವನಲ್ಲಿ ಸದಾ ಭರವಸವಿಡಿರಿ; ಏಕೆಂದರೆ ಯೆಹೋವನೇ ಶಾಶ್ವತವಾದ ಆಶ್ರಯಗಿರಿಯಾಗಿದ್ದಾನೆ.
ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು;
ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ."
ಸೇನಾಧೀಶ್ವರನಾದ ಯೆಹೋವನೇ,
ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಕೆಲವರು ರಥಬಲದಲ್ಲಿ, ಕೆಲವರು ಅಶ್ವಬಲದಲ್ಲಿ ಹೆಚ್ಚಳಪಡುತ್ತಾರೆ;
ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ ಹೆಚ್ಚಳಪಡುತ್ತೇವೆ.
ಅವರು ಬಿದ್ದುಹೋಗಿದ್ದಾರೆ;
ನಾವಾದರೋ ಎದ್ದು ನಿಂತಿದ್ದೇವೆ.
ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ,
ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ,
ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
Não confiar no homem
Não temas — em ti confiarei. Melhor é confiar no Senhor do que confiar no homem ou nos príncipes.
ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
ಯೆಹೋವನ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.
ದೇವರನ್ನು ನಂಬಿ ನಿರ್ಭಯದಿಂದಿರುವೆನು;
ನರಪ್ರಾಣಿಗಳು ನನಗೆ ಏನು ಮಾಡಾರು?
ನಾನಂತೂ ನಿನ್ನ ಕೃಪೆಯಲ್ಲಿ ಭರವಸವಿಟ್ಟಿದ್ದೇನೆ;
ನೀನು ನನ್ನನ್ನು ರಕ್ಷಿಸಿದ್ದರಿಂದ ನನ್ನ ಹೃದಯವು ಹರ್ಷಗೊಳ್ಳುವುದು.
ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ;
ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ.
ಯಾರು ಅಹಂಕಾರಿಗಳ ಜೊತೆಯಲ್ಲಿಯೂ,
ಸುಳ್ಳುದೇವರನ್ನು ಹಿಂಬಾಲಿಸುವವರಲ್ಲಿಯೂ ಸೇರದೆ,
ಯೆಹೋವನನ್ನೇ ನಂಬುತ್ತಾನೋ, ಅವನೇ ಧನ್ಯನು.
"ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.