Confissão
A confissão é caminho de libertação e restauração. Quando confessamos nossos pecados, Deus é fiel e justo para nos perdoar e nos purificar de toda injustiça.
Confessar e receber perdão
Se confessarmos os nossos pecados, Ele é fiel e justo para nos perdoar. A confissão abre a porta da graça restauradora.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ನನ್ನ ಪಾಪವನ್ನು ನಿಮಗೆ ತಿಳಿಸಿ,
ನನ್ನ ಅನ್ಯಾಯವನ್ನು ಮರೆಮಾಡದೆ,
"ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ
ಅರಿಕೆ ಮಾಡುವೆನು," ಎಂದು ಹೇಳಿದೆನು;
ಆಗ, ನೀವು
ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.
ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ,
ದಿನವೆಲ್ಲಾ ನರಳುವುದರಿಂದ
ನನ್ನ ಎಲುಬುಗಳು ಸವೆದು ಹೋದವು.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ.
ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.
ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.
ಅವನು ಇವುಗಳೊಂದರಲ್ಲಿ ಅಪರಾಧಿಯಾಗಿದ್ದು, ತಾನು ಅದರಲ್ಲಿ ಪಾಪಮಾಡಿದ್ದೇನೆಂದು ಅರಿಕೆ ಮಾಡುವುದಾದರೆ,
Confissão como fé
Se com a boca confessares que Jesus é Senhor e creres, serás salvo. A confissão de fé é alicerce da vida cristã.
ನೀನು, "ಯೇಸುವೇ ಕರ್ತ," ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.
ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.
ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ. ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ.
ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?
ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.
ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.
ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.