Consequências dos nossos atos
Toda ação tem consequências. A Bíblia ensina que colhemos o que semeamos — para o bem e para o mal. Deus pesará cada palavra e ato no dia do juízo.
Colher o que semear
Cada um prestará contas de si mesmo a Deus. O Senhor julgará as obras e os segredos dos homens com justiça perfeita.
ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು, ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು. ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು. ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು. ದೇವರಲ್ಲಿ ಪಕ್ಷಪಾತವಿಲ್ಲ.
ದೇವರ ವರವು ಒಬ್ಬ ಮನುಷ್ಯನ ಪಾಪದ ಫಲದಂತಿರುವುದಿಲ್ಲ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ಅಪರಾಧಿಗಳಾಗಿದ್ದಾರೆಂದು ನಿರ್ಣಯಿಸಲ್ಪಟ್ಟಿತು. ಆದರೆ ದೇವರ ಕೃಪಾದಾನವು ಅನೇಕರ ಪಾಪಗಳನ್ನು ವಿಮೋಚಿಸಿ ಅವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಕಾರಣವಾಯಿತು. ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಮರಣವು ಆಳುವುದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ, ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವುದು ಮತ್ತೂ ನಿಶ್ಚಯವಲ್ಲವೇ.
ಇತರರ ಬಗ್ಗೆ ನ್ಯಾಯತೀರ್ಪು ಮಾಡಬೇಡಿ
"ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ. ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.
ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.
ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
Responsabilidade pessoal
Quem é sábio prevê o perigo e se esconde. A Palavra examina os pensamentos e intenções do coração.
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು,
ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
ನೀನು ಜ್ಞಾನವಂತನಾದರೆ ನಿನ್ನ ಜ್ಞಾನವು ನಿನಗೇ ಲಾಭಕರ,
ಧರ್ಮನಿಂದಕನಾದರೆ ನೀನೇ ಅದರ ಫಲವನ್ನು ಅನುಭವಿಸುವಿ.
"ಇದು ದೇವರಿಗಾಗಿ" ಎಂದು ದುಡುಕಿ ಹರಕೆಮಾಡುವುದು,
ಹರಕೆಯನ್ನು ಹೊತ್ತಮೇಲೆ ವಿಚಾರಮಾಡುವುದು ಮನುಷ್ಯನಿಗೆ ಉರುಲು.
ಅಶುದ್ಧತೆಗೆ ಕಾರಣವಾಗುವ ಸಂಗತಿಗಳು
"‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
"ಯಾವನಾದರೂ ಯೆಹೋವನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ಮಾಡಿ ದೋಷಕ್ಕೆ ಒಳಗಾದರೆ, ಅದು ಅವನಿಗೆ ತಿಳಿಯದೆ ಹೋದರೂ ಅವನು ಅದರಿಂದ ಅಪರಾಧಿಯಾಗಿ ತನ್ನ ಪಾಪಫಲವನ್ನು ಅನುಭವಿಸಬೇಕು.
"‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
Consequências inevitáveis
A terra deu seu fruto conforme as obras dos que nela habitam. Ninguém escapa do juízo — Deus pesa cada ação.
ಆದರೆ ಅಷ್ಟರೊಳಗೆ ಈ ದೇಶವು
ತನ್ನ ನಿವಾಸಿಗಳ ನಿಮಿತ್ತ ಅವರ ದುಷ್ಕೃತ್ಯಗಳ ಫಲವಾಗಿ ಹಾಳುಬಿದ್ದಿರುವುದು.
ನಿಮ್ಮ ದುಷ್ಕರ್ಮದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪವನ್ನು ನೀವು ಅನುಭವಿಸುವಿರಿ. ನಾನೇ ಕರ್ತನಾದ ಯೆಹೋವನು" ಎಂದು ತಿಳಿದುಕೊಳ್ಳುವಿರಿ.
ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
"ದೇವರು ವಿಚಾರಿಸುವುದೇ ಇಲ್ಲ" ಎಂದು ಹೇಳುತ್ತಾ,
ದುಷ್ಟನು ನಿನ್ನನ್ನು ಏಕೆ ಅಲಕ್ಷ್ಯಮಾಡಬೇಕು?
ನೀನು ಅವರ ಅನ್ಯಾಯ ಹಾಗು ಬಲಾತ್ಕಾರಗಳನ್ನು ನೋಡಿದ್ದಿ;
ಅವುಗಳನ್ನು ವಿಚಾರಿಸುತ್ತೀ, ಗತಿಯಿಲ್ಲದವನು ತನ್ನನ್ನು ನಿನಗೇ ಒಪ್ಪಿಸುವನು;
ದಿಕ್ಕಿಲ್ಲದವನಿಗೆ ನೀನೇ ದಿಕ್ಕು.