Consequências dos nossos atos
Toda ação tem consequências. A Bíblia ensina que colhemos o que semeamos — para o bem e para o mal. Deus pesará cada palavra e ato no dia do juízo.
Colher o que semear
Cada um prestará contas de si mesmo a Deus. O Senhor julgará as obras e os segredos dos homens com justiça perfeita.
ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.
ದೇವರು, "ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು." ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು. ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ. ಕೆಟ್ಟದ್ದನ್ನು ನಡೆಸುವ ಪ್ರತಿ ಮನುಷ್ಯನಿಗೆ ಕಷ್ಟವೂ ಸಂಕಟವೂ ಬರುತ್ತವೆ, ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ. ಆದರೆ ಒಳ್ಳೆಯದನ್ನು ನಡೆಸುವ ಪ್ರತಿಯೊಬ್ಬನಿಗೆ ಮಹಿಮೆಯೂ ಗೌರವವೂ ಸಮಾಧಾನವೂ ಉಂಟಾಗುತ್ತವೆ. ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ. ದೇವರಲ್ಲಿ ಪಕ್ಷಪಾತವಿಲ್ಲ.
ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಪಲ ಬಂದಂತೆ ಈ ವರವು ಬರಲಿಲ್ಲ. ಹೇಗೆಂದರೆ, ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ದಂಡನಾತೀರ್ಪು ಉಂಟಾಯಿತು. ಆದರೆ ದೇವರ ಕೃಪೆಯು ಅನೇಕರ ಅಪರಾಧಗಳಿಂದ ಅವರನ್ನು ನೀತಿವಂತರೆಂದು ನಿರ್ಣಯಿಸುವುದಾಗಿದೆ. ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!
ತೀರ್ಪು ಮಾಡುವುದು
"ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ. ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.
ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ. ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.
Responsabilidade pessoal
Quem é sábio prevê o perigo e se esconde. A Palavra examina os pensamentos e intenções do coração.
ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ;
ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.
ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು;
ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ.
ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು
ಆಮೇಲೆ ವಿಚಾರಿಸುವುದು ಉರುಲಾಗಿದೆ.
" ‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
"ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.
" ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.
Consequências inevitáveis
A terra deu seu fruto conforme as obras dos que nela habitam. Ninguém escapa do juízo — Deus pesa cada ação.
ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ
ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು.
ನಿಮ್ಮ ದುಷ್ಕರ್ಮದ ಫಲವನ್ನು ನೀವೇ ಅನುಭವಿಸುವಂತೆ ಮಾಡುವೆ. ನೀವು ನಿಮ್ಮ ವಿಗ್ರಹಗಳ ಆರಾಧನೆಯಿಂದಾದ ಪಾಪಗಳನ್ನು ಹೊರುವಿರಿ. ಆಗ ಸಾರ್ವಭೌಮ ಯೆಹೋವ ದೇವರು ನಾನೇ ಎಂದು ತಿಳಿದುಕೊಳ್ಳುವಿರಿ."
ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು.
ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ?
"ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ," ಎಂದು
ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?
ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ;
ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ.
ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ;
ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.