Consolo
O consolo de Deus é bálsamo para a alma ferida. Ele nos conforta em todas as tribulações para que possamos consolar outros com o mesmo consolo divino.
Deus consola
Ainda que eu ande pelo vale da sombra da morte, não temerei mal algum. O Senhor consola, guia e está sempre presente.
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
ನಿನ್ನ ನುಡಿಯು ನನ್ನನ್ನು ಚೈತನ್ಯಗೊಳಿಸುತ್ತದೆ,
ಆಪತ್ಕಾಲದಲ್ಲಿ ಇದೇ ನನಗೆ ಆದರಣೆ.
ನಿನ್ನ ಸೇವಕನಿಗೆ ನುಡಿದ ಪ್ರಕಾರ,
ನನ್ನ ಸಮಾಧಾನಕ್ಕೋಸ್ಕರ ಕೃಪೆಯನ್ನು ದಯಪಾಲಿಸು.
ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಮತ್ತು ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.
Confiança na aflição
Eu sei que o meu Redentor vive. Deus é força e escudo — mesmo na tribulação, Ele nos sustenta e consola.
ನಾನಂತು ನನ್ನ ನ್ಯಾಯಸ್ಥಾಪಕನು ಜೀವಸ್ವರೂಪನೆಂದು ಬಲ್ಲೆನು,
ಕೊನೆಯಲ್ಲಿ ಆತನು ಭೂಮಿಗೆ ಇಳಿದು ಬರುವನು.
ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ,
ದೇಹಧಾರಿಯಾಗಿ ದೇವರನ್ನು ನೋಡುವೆನು.
ಇಗೋ, ದೇವರೇ ನನಗೆ ರಕ್ಷಣೆ, ನಾನು ಹೆದರದೆ ಭರವಸವಿಡುವೆನು;
ಯೆಹೋವನೇ ನನ್ನ ಬಲವೂ, ಕೀರ್ತನೆಯೂ ಆತನೇ, ನನಗೆ ರಕ್ಷಣೆಯೂ ಆಗಿದ್ದಾನೆ."
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು" ಎಂದು ಹೇಳಿದನು.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು" ಎಂದು ಹೇಳಿದನು.
ಆದ್ದರಿಂದ, "ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?" ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.
ನಾನಂತು ಯೆಹೋವನನ್ನು ಎದುರುನೋಡುವೆನು.
ನನ್ನ ರಕ್ಷಕನಾದ ದೇವರನ್ನು ನಿರೀಕ್ಷಿಸಿಕೊಂಡಿರುವೆ.
ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು.
"ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ, ನಿಮ್ಮ ಬಳಿಗೆ ಬರುತ್ತೇನೆ.