Conversão
A conversão é o ato de se voltar para Deus — arrependendo-se do pecado e abraçando a graça. É o início de uma vida nova, transformada pelo amor de Cristo.
Arrependei-vos
Arrependei-vos e convertei-vos para que os vossos pecados sejam apagados. A conversão começa com a mudança de mente e coração.
ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.
ಅದಕ್ಕೆ ಪೇತ್ರನು, "ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.
ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.
ಅಂದಿನಿಂದ ಯೇಸು, "ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ," ಎಂದು ಬೋಧಿಸತೊಡಗಿದರು.
ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.
"ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ," ಎಂದು ಹೇಳಿದರು.
O amor de Deus converte
Céu se alegra por um pecador que se arrepende. Deus não deseja a morte do ímpio, mas que se converta e viva.
ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.
ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ," ಎಂದರು.
ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು," ಎಂದರು.
ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ.
"ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು, ನ್ಯಾಯವನ್ನೂ, ನೀತಿಯನ್ನೂ ನಡೆಸಿದರೆ, ಅವನು ಸಾಯದೆ ಖಂಡಿತವಾಗಿ ಬದುಕುವನು.
ಯೆಹೋವ ದೇವರ ವಾಕ್ಯವು ನನಗೆ ಬಂದಿತು: "ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಈ ಗಾದೆಯನ್ನು ಉಲ್ಲೇಖಿಸುವುದರ ಅರ್ಥವೇನು:
" ‘ಪಿತೃಗಳು ಹುಳಿದ್ರಾಕ್ಷಿಗಳನ್ನು ತಿಂದರು,
ಮಕ್ಕಳ ಹಲ್ಲು ಚಳಿತು ಹೋಯಿತು.’
"ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವುದಿಲ್ಲ. ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.
"ಆದರೆ ಒಬ್ಬ ಮನುಷ್ಯನು ನೀತಿವಂತನಾಗಿದ್ದು,
ನೀತಿಯನ್ನೂ ನ್ಯಾಯವನ್ನೂ ನಡೆಸಿ,
ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ,
ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ,
ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ,
ಯಾರನ್ನೂ ಉಪದ್ರವಪಡಿಸದೆ,
ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು,
ಹಿಂಸೆ ಸುಲಿಗೆ ಮಾಡದೆ,
ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು
ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,
ಬಡ್ಡಿಗೆ ಸಾಲ ಕೊಡದೆ,
ಲಾಭವನ್ನು ತೆಗೆದುಕೊಳ್ಳದೆ,
ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು
ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,
ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು,
ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ,
ಅವನು ನೀತಿವಂತನು ಮತ್ತು
ನಿಶ್ಚಯವಾಗಿ ಬದುಕುವನು,"
ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.
"ಒಂದು ವೇಳೆ ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ, ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ,
"ಪರ್ವತಗಳ ಪೂಜಾಸ್ಥಳಗಳಲ್ಲಿ ತಿಂದು
ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,
ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ,
ಹಿಂಸಿಸಿ, ಸುಲಿಗೆ ಮಾಡಿ,
ಒತ್ತೆಗಳನ್ನು ಹಿಂದೆ ಕೊಡದೆ,
ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ
ಅಸಹ್ಯವಾದವುಗಳನ್ನು ಮಾಡಿ,
ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ,
ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.
"ಒಂದು ವೇಳೆ ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಆಲೋಚಿಸಿ, ಇಂಥಾ ಕಾರ್ಯಗಳನ್ನು ನಡೆಸದೆ,
"ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ,
ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ,
ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,
ಯಾರನ್ನೂ ಹಿಂಸಿಸದೆ,
ಒತ್ತೆಯನ್ನು ಕೇಳದೆ,
ಹಿಂಸೆಯಿಂದ ಸುಲಿಗೆ ಮಾಡದೆ,
ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು
ಮತ್ತು ಬೆತ್ತಲೆಯಾದವನಿಗೆ ವಸ್ತ್ರವನ್ನು ಹೊದಿಸಿ,
ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ,
ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ,
ನನ್ನ ನಿಯಮಗಳಲ್ಲಿ ನಡೆದರೆ,
ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು. ಇವನ ತಂದೆಯಾದರೊ ಸ್ವಜನರನ್ನು ಬಲಾತ್ಕಾರ ಮಾಡಿದ್ದರಿಂದಲೂ, ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ, ತನ್ನ ಜನರ ಮಧ್ಯದಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದಲೂ ಅವನು ತನ್ನ ಅಕ್ರಮದಲ್ಲಿ ಸಾಯುವನು.
"ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು. ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು.
"ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು, ನ್ಯಾಯವನ್ನೂ, ನೀತಿಯನ್ನೂ ನಡೆಸಿದರೆ, ಅವನು ಸಾಯದೆ ಖಂಡಿತವಾಗಿ ಬದುಕುವನು. ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು. ದುಷ್ಟನು ಸಾಯುವುದರಲ್ಲಿ ನನಗೆ ಸ್ವಲ್ಪ ಸಂತೋಷವಿರುವುದೋ?" ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. "ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ಬದುಕಿದರೆ ನನಗೆ ಸಂತೋಷವಲ್ಲವೇ?
"ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು.
"ಆದರೆ ನೀವು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತೀರಿ. ಇಸ್ರಾಯೇಲ್ ಜನರೇ, ಈಗ ಕೇಳಿರಿ, ನನ್ನ ಮಾರ್ಗವು ಸರಿಯಲ್ಲವೇ? ನಿಜಕ್ಕೂ ನಿಮ್ಮ ಮಾರ್ಗಗಳೇ ಸರಿಯಲ್ಲ. ಒಬ್ಬ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಪಾಪವನ್ನು ಮಾಡಿದರೆ, ಅವನು ಅದಕ್ಕಾಗಿ ಸಾಯಬೇಕು; ಹೌದು, ಅವನು ಮಾಡಿದ ಪಾಪದಿಂದಲೇ ಅವನು ಸಾಯಬೇಕು. ಒಬ್ಬ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ, ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು. ಏಕೆಂದರೆ ಅವನು ತಾನು ಮಾಡಿದ ದುಷ್ಕೃತ್ಯಗಳನ್ನು ಯೋಚಿಸಿ, ಅವುಗಳನ್ನು ಬಿಟ್ಟು ತಿರುಗಿಕೊಳ್ಳುವುದರಿಂದ ಸಾಯದೆ ನಿಶ್ಚಯವಾಗಿ ಬದುಕುವನು. ಆದರೆ ಇಸ್ರಾಯೇಲ್ ಜನರು, ‘ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಎನ್ನುತ್ತಾರೆ. ಇಸ್ರಾಯೇಲ್ ಜನರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಅನೀತಿಯ ಮಾರ್ಗಗಳಲ್ಲವೇ?
"ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ. ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ? ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ.
ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.
Transformação
Voltai-vos para mim e sereis salvos! Rasgai o coração e não as vestes. A verdadeira conversão transforma o interior.
ದುಷ್ಟನು ತನ್ನ ದುರ್ಮಾರ್ಗವನ್ನೂ,
ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು,
ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು.
ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.
ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ.
ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ.
ನನ್ನ ಕಡೆಗೆ ತಿರುಗಿಕೋ.
ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ."
ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, "ಈಗಲಾದರೂ
ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ
ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ."
ನಿಮ್ಮ ಬಟ್ಟೆಗಳನ್ನಲ್ಲ,
ನಿಮ್ಮ ಹೃದಯಗಳನ್ನು ಹರಿದುಕೊಂಡು,
ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ.
ಅವರು ದಯೆಯೂ ಕರುಣೆಯೂ,
ದೀರ್ಘಶಾಂತಿಯೂ ಮಹಾ ಪ್ರೀತಿಯೂ
ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.
ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.
ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು. ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು. ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು. ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು. ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.
ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ,
"ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು. ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು. ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು. ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ," ಎಂದು ಹೇಳಿದರು.
ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು. ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು. ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.
ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು. ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.
ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು. ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು. ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, "ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ, ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ," ಎಂದು ವಿಜ್ಞಾಪನೆ ಮಾಡಿದನು. ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.
ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.
ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.
ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು. ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು. ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು. ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ. ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.
ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:
"ಯೆಹೋವ ದೇವರು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿದ್ದಾರೆ. ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ. ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ?
"ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು."
ದಾರ್ಯಾವೆಷನ ಎರಡನೆಯ ವರ್ಷದಲ್ಲಿ, ಹನ್ನೊಂದನೆಯ ತಿಂಗಳಾದ ಶೇಬಾಟ್ ಎಂಬ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:
ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.
ಆಗ ನಾನು, "ನನ್ನ ಒಡೆಯನೇ, ಇವೇನು?" ಎಂದೆನು.
ಆಗ ನನ್ನ ಸಂಗಡ ಮಾತನಾಡಿದ ದೇವದೂತನು, "ಇವೇನೆಂದು ನಿನಗೆ ತೋರಿಸುತ್ತೇನೆ," ಎಂದನು.
ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು, "ಇವರು ಭೂಮಿಯ ಸುತ್ತಲೂ ನಡೆದಾಡುವುದಕ್ಕೆ ಯೆಹೋವ ದೇವರಿಂದ ಕಳುಹಿಸಲಾದವರು," ಎಂದನು.
ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಯೆಹೋವ ದೇವರ ದೂತನಿಗೆ, "ಭೂಮಿಯ ಸುತ್ತಲೂ ನಡೆದಾಡಿದ್ದೇವೆ. ಇಗೋ, ಭೂಮಿಯೆಲ್ಲಾ ನಿಶ್ಚಿಂತೆಯಿಂದ ಶಾಂತವಾಗಿದೆ," ಎಂದನು.
ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: "ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?" ಎಂದನು. ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.
ನನ್ನ ಸಂಗಡ ಮಾತನಾಡಿದ ದೂತನು ನನಗೆ, "ಇದನ್ನು ಸಾರಿ ಹೇಳು: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿಗಾಗಿಯೂ, ಚೀಯೋನಿಗಾಗಿಯೂ ಮಹಾ ರೋಷವುಳ್ಳವನಾಗಿದ್ದೇನೆ. ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.
"ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ. ನನ್ನ ಆಲಯವು ಅದರಲ್ಲಿ ಕಟ್ಟಲಾಗುವುದು. ಯೆರೂಸಲೇಮಿನ ಮೇಲೆ ಅಳತೆಯ ನೂಲು ಚಾಚಲಾಗುವುದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
"ಪುನಃ ನೀನು ಸಾರಿ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವುವು. ಯೆಹೋವ ದೇವರು ಚೀಯೋನನ್ನು ಆದರಿಸುವರು. ಯೆರೂಸಲೇಮನ್ನು ಆರಿಸಿಕೊಳ್ಳುವರು, ಎಂದು ಹೇಳಿದನು."
ನಾನು ನನ್ನ ಕಣ್ಣುಗಳನ್ನು ಎತ್ತಿದಾಗ, ನಾಲ್ಕು ಕೊಂಬುಗಳನ್ನು ನೋಡಿದೆನು. ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ ನಾನು, "ಇದೇನು?" ಎಂದೆನು.
ಅದಕ್ಕೆ ಅವನು ನನಗೆ ಉತ್ತರಕೊಟ್ಟು, "ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನೂ ಚದರಿಸಿದ ಕೊಂಬುಗಳು," ಎಂದನು.
ಆಗ ಯೆಹೋವ ದೇವರು ನನಗೆ ನಾಲ್ಕು ಕಮ್ಮಾರರನ್ನು ತೋರಿಸಿದರು. ನಾನು, "ಇವರು ಏನು ಮಾಡುವುದಕ್ಕೆ ಬರುತ್ತಾರೆ?" ಎಂದೆನು.
ಅದಕ್ಕೆ ಅವರು, "ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಆದರೆ ಇವರು ಯೆಹೂದ ದೇಶವನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೇ ಚದರಿಸಿ, ಅದರ ಕೊಂಬುಗಳನ್ನು ಕೆಡವಿ ಹಾಕುವುದಕ್ಕೆ ಬಂದಿದ್ದಾರೆ," ಎಂದು ಹೇಳಿದರು.
ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.
ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.
ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.
ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.