Convicção
A convicção cristã é firmeza de fé que não se abala diante da oposição. É a certeza interior que compele a proclamar a verdade com ousadia, independentemente das consequências.
Ousadia para falar
Recebereis poder e sereis minhas testemunhas. A convicção do Espírito nos equipa para proclamar com coragem e sem vergonha.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ" ಅಂದನು.
ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, "ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ. ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.
ಸುವಾರ್ತೆಯ ಶಕ್ತಿ
ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.
ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು" ಎಂದನು.
ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.
ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.
Firmeza e confiança
Não temas diante dos homens. A Palavra de Deus é fogo na boca do profeta e firmeza na vida do crente.
ಆಗ ಯೆಹೋವನು ನನಗೆ, "ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, ನೀನು ಉನ್ನತಪರ್ವತವನ್ನು ಏರು;
ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ,
ಯೆಹೂದದ ಪಟ್ಟಣಗಳಿಗೆ, "ಇಗೋ, ನಿಮ್ಮ ದೇವರು!
ಯೆಹೋವನ ಸೇವಕನ ಭರವಸೆ
ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ
ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ.
ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ.
ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಗಟ್ಟಿಯಾದ ವಜ್ರದಂತೆ ಮಾಡಿದ್ದೇನೆ; ಅವರು ತಿರುಗಿ ಬೀಳುವ ಮನೆತನದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಹೆದರದಿರು."
ನಿನ್ನ ಕಟ್ಟಳೆಗಳ ವಿಷಯವಾಗಿ,
ಅರಸುಗಳ ಮುಂದೆಯೂ ಮಾತನಾಡುವೆನು,
ನಾಚಿಕೆಪಡುವುದಿಲ್ಲ.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.
ಮನುಷ್ಯನ ಭಯ ಉರುಲು,
ಯೆಹೋವನ ಭರವಸ ಉದ್ಧಾರ.
ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.
ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಕಟ್ಟಲ್ಪಟ್ಟಿರುವ ಊರು ಮರೆಯಾಗಿರಲಾರದು. ಮತ್ತು ಯಾರೂ ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವುದಿಲ್ಲ; ದೀಪಸ್ತಂಭದ ಮೇಲೆಯೇ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವುದು. ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.