Coração puro
Bem-aventurados os puros de coração, porque verão a Deus. A pureza de coração é alvo, privilégio e busca constante do cristão que deseja contemplar a face do Senhor.
Coração puro
Bem-aventurados os puros de coração. A pureza interior precede toda transformação externa e abre os olhos para ver a Deus.
ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.
ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು?
ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?
ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ,
ಮೋಸ ಪ್ರಮಾಣಮಾಡದೆ,
ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,
ಅವನೇ ಯೆಹೋವನಿಂದ ಶುಭವನ್ನು ಹೊಂದುವನು;
ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.
ನನ್ನ ದೋಷಕ್ಕೆ ವಿಮುಖನಾಗು;
ನನ್ನ ಪಾಪಗಳನ್ನೆಲ್ಲಾ ಅಳಿಸಿಬಿಡು.
ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು;
ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ;
ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.
ದೇವರು ನಿರ್ಮಲಚಿತ್ತರಾದ ಇಸ್ರಾಯೇಲರಿಗೆ ದಯಾಪರನೇ ಹೌದು.
Purificar-se
Todo o que tem essa esperança em Cristo se purifica. O amor procede de coração puro, boa consciência e fé sincera.
ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.
ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.
ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.
ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ. ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ, ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.
ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ನಿರ್ದೋಷಿಗಳೂ ಹಾಗೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖ ಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.
ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.
ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧವಾಗಿದೆ,
ಯೆಹೋವನು ಅಂತರಂಗವನ್ನೇ ಪರೀಕ್ಷಿಸುವನು.