Coração quebrantado
Deus está perto dos que têm o coração quebrantado. A Bíblia consola os aflitos: o sacrifício que Deus aceita é o espírito quebrantado e um coração contrito — jamais desprezará.
ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ;
ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.
ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ.
ಮುರಿದಂಥ, ಜಜ್ಜಿದಂಥ ಹೃದಯವನ್ನು
ದೇವರು ತಿರಸ್ಕರಿಸುವುದಿಲ್ಲ.
ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ,
ಅವರ ಗಾಯಗಳನ್ನು ಕಟ್ಟುತ್ತಾರೆ.
ನನ್ನ ತನುಮನಗಳು ಕುಂದುತ್ತವೆ;
ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ,
ನನ್ನ ಪಾಲೂ ಆಗಿದ್ದಾರೆ.
ಏಕೆಂದರೆ ಉನ್ನತನೂ, ಮಹೋನ್ನತನೂ,
ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ:
"ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ,
ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ.
ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ
ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.
ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ.
ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,"
ಎಂದು ಯೆಹೋವ ದೇವರು ಹೇಳುತ್ತಾರೆ.
"ನಾನು ಕಟಾಕ್ಷಿಸುವವನು ಎಂಥವನೆಂದರೆ:
ದೀನನೂ, ಮನಮುರಿದವನೂ,
ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.
ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ.
ಏಕೆಂದರೆ ಯೆಹೋವ ದೇವರು
ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ.
ಮುರಿದ ಹೃದಯಗಳನ್ನು ಕಟ್ಟುವುದಕ್ಕೂ,
ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು
ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು
ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ,
ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ,
ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,
ಚೀಯೋನಿನಲ್ಲಿ ದುಃಖಿಸುವವರಿಗೆ
ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ,
ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ,
ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು
ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ.
ಆಗ ಅವರಿಗೆ ನೀತಿವೃಕ್ಷಗಳೆಂದೂ,
ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ
ನೆಟ್ಟ ಗಿಡಗಳೆಂದೂ ಹೆಸರಾಗುವುದು.
"ಆತ್ಮದಲ್ಲಿ ಬಡವರಾಗಿರುವವರು ಧನ್ಯರು,
ಪರಲೋಕ ರಾಜ್ಯವು ಅವರದು.
ದುಃಖಿಸುವವರು ಧನ್ಯರು,
ಅವರು ಆದರಣೆ ಹೊಂದುವರು.
ಸಾತ್ವಿಕರು ಧನ್ಯರು,
ಅವರು ಭೂಮಿಗೆ ಬಾಧ್ಯರಾಗುವರು.
ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ. ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.
ಅದಕ್ಕೆ ಕರ್ತ ಯೇಸು, "ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು," ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.