Coração
O coração é o centro do ser humano — sede dos pensamentos, emoções e decisões. A Bíblia ensina a guardar, purificar e render o coração a Deus como oferta viva.
Guardar o coração
Sobre tudo o que se deve guardar, guarda o teu coração, porque dele procedem as fontes da vida e de toda decisão.
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ;
ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ;
ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.
ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು
ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.
ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು
ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.
ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು.
ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.
ಮಗನೇ, ನನ್ನ ಉಪದೇಶವನ್ನು ಮರೆಯಬೇಡ;
ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.
ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು,
ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.
ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ;
ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ,
ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.
ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ,
ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.
ಶಾಂತ ಹೃದಯವು ದೇಹಕ್ಕೆ ಜೀವ;
ಆದರೆ ಮತ್ಸರವು ಎಲುಬುಗಳಿಗೆ ಕ್ಷಯ.
ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು;
ಆದರೆ ಹರಟೆಯ ಮೂರ್ಖನು ಬೀಳುವನು.
Coração puro
Cria em mim um coração puro, ó Deus. Ensina-me a contar meus dias para que tenha um coração sábio.
ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ,
ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.
ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ,
ನಮ್ಮ ದಿನಗಳನ್ನು ಲೆಕ್ಕಿಸುವುದಕ್ಕೆ ನಮಗೆ ಕಲಿಸಿಕೊಡಿರಿ.
ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ,
ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ
ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ.
ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ;
ನಿಮ್ಮ ಹೃದಯವು ಧೈರ್ಯದಿಂದ ಇರಲಿ.
ಯೆಹೋವ ದೇವರಲ್ಲಿ ಆನಂದವಾಗಿರು;
ಆಗ ಅವರು ನಿನ್ನ ಹೃದಯದ ಅಪೇಕ್ಷೆಗಳನ್ನು ಈಡೇರಿಸುವರು.
ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ;
ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.
ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ
ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು
ನಾನು ನಿಮ್ಮ ನೀತಿಯುಳ್ಳ ನಿಯಮಗಳನ್ನು ಕಲಿಯುತ್ತಿರುವಾಗೆಲ್ಲಾ,
ಯಥಾರ್ಥ ಹೃದಯದಿಂದ ನಿಮ್ಮನ್ನು ಕೊಂಡಾಡುವೆನು.
ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ;
ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.
Buscar a Deus de coração
Amarás ao Senhor teu Deus de todo o coração. A busca sincera leva ao encontro; o coração dividido leva à ruína.
ಯೇಸು ಅವನಿಗೆ, " ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’
ಯೇಸು ಅವನಿಗೆ, " ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’
ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು.
ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು.
ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ
ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ.
ಅದನ್ನು ತಿಳಿಯುವವನ್ಯಾರು?
ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ
ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ.
ಅದನ್ನು ತಿಳಿಯುವವನ್ಯಾರು?
"ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ.
ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ.
ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ,
ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ."
ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.
ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ," ಎಂದು ಹೇಳಿದನು.
ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.
ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.
Conhecer o coração
O homem olha para a aparência, mas o Senhor olha para o coração. Deus conhece os segredos mais profundos.
ಆದರೆ ಯೆಹೋವ ದೇವರು ಸಮುಯೇಲನಿಗೆ, "ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು," ಎಂದನು.
ಆದರೆ ಯೆಹೋವ ದೇವರು ಸಮುಯೇಲನಿಗೆ, "ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು," ಎಂದನು.
ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು
ಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ.
ಹರ್ಷಹೃದಯವು ಒಳ್ಳೆಯ ಔಷಧ;
ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು,
ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
ವಿಚಿತ್ರವಾಗಿ ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವುದೂ ಇಲ್ಲವೆ ತುಂಬಾ ಬೆಲೆಯ ಉಡಿಗೆಗಳನ್ನು ಧರಿಸಿಕೊಳ್ಳುವುದೂ ಇವೇ ನಿಮ್ಮ ಅಲಂಕಾರವಾಗಿರಬಾರದು. ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.
ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ.
ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.
ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!
ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ
ದಿನದಲ್ಲಿ ಕೋಪಕ್ಕೆ ಈಡುಮಾಡಿದಂತೆ,
ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.