Corpo de Cristo
A Igreja é o Corpo de Cristo — organismo vivo onde cada membro tem função única e indispensável. Cristo é a cabeça; nós somos seus membros.
Um corpo, muitos membros
Assim como o corpo é um e tem muitos membros, assim é Cristo. Nós somos o corpo de Cristo e individualmente seus membros.
ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ.
ನೀವು ಕ್ರಿಸ್ತನ ದೇಹವು ಮತ್ತು ಒಬ್ಬೊಬ್ಬರಾಗಿ ಅದಕ್ಕೆ ಅಂಗಗಳಾಗಿದ್ದೀರಿ.
ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು
ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.
ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,
ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.
Cristo, a cabeça
Ele é a cabeça do corpo, que é a igreja. O corpo cresce e se edifica em amor quando cada parte faz o seu trabalho.
ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.
ಸಭೆಗಾಗಿ ಪೌಲನ ಸೇವೆ
ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.
ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ. ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.