Corpo é o templo de Deus
O corpo do cristão é templo de Deus. Ele habita em nós pelo Espírito Santo, fazendo do crente morada viva e sagrada do Altíssimo.
Templo do Deus vivo
Vós sois o templo do Deus vivo. Deus disse: habitarei neles e entre eles andarei. O criador mora em sua criação redimida.
ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ? ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ.
ನೀವು ನಿಮ್ಮ ಸ್ವಂತ ಸೊತ್ತಲ್ಲವೆಂದು ಮತ್ತು ದೇವರಿಂದ ದಾನವಾಗಿ ಲಭಿಸಿದ ಪವಿತ್ರಾತ್ಮನು ನಿಮ್ಮೊಳಗೆ ನೆಲೆಗೊಂಡಿರುವುದರಿಂದ ನಿಮ್ಮ ದೇಹವು ದೇವರ ಪವಿತ್ರಾಲಯವಾಗಿದೆಂಬುದು ನಿಮಗೆ ತಿಳಿಯದೋ? ನೀವು ಕ್ರಯಕ್ಕೆ ಕೊಳ್ಳಲ್ಪಟ್ಟವರು ಆದಕಾರಣ ನಿಮ್ಮ ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ.
ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, "ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು" ಎಂದು ಹೇಳಿದ್ದಾನೆ.
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.
ಪ್ರತಿಯೊಂದು ಮನೆಯನ್ನು ಯಾರೊಬ್ಬನು ಕಟ್ಟಿರುವನು, ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ. ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ. ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ. ಆದರೆ ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ. ನಾವು ನಮ್ಮ ಭರವಸೆಯನ್ನೂ, ನಿರೀಕ್ಷೆಯ ಮಹತ್ವವನ್ನೂ, ಕಡೆ ತನಕ ಗಟ್ಟಿಯಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.
Cristo em nós
Já não sou eu quem vive, mas Cristo vive em mim. A presença de Deus no crente é privilégio e responsabilidade sagrada.
ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
ಯೇಸು ಅವನಿಗೆ, "ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.
ಯೇಸುವಿನ ಮೂಲಕ ದೇವಸನ್ನಿಧಾನವನ್ನು ಯೋಗ್ಯರಾಗಿ ಸೇರೋಣ
ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ. ಮತ್ತು ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠ ಯಾಜಕನು ನಮಗಿದ್ದಾನೆ. ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.