Crianças
As crianças ocupam lugar especial no coração de Deus. A Bíblia instrui a educá-las, protegê-las e ensiná-las nos caminhos do Senhor desde cedo — formando gerações que temem a Deus.
Herança do Senhor
Os filhos são herança do Senhor. Eles são presentes de Deus — cada criança é um milagre e uma responsabilidade sagrada.
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;
ಗರ್ಭಫಲವು ಆತನ ಬಹುಮಾನವೇ.
ಯೌವನಸ್ಥರಾದ ನಮ್ಮ ಗಂಡುಮಕ್ಕಳು
ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು,
ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,
ನಿನ್ನನ್ನು ಕೊಂಡಾಡುತ್ತೇನೆ.
ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,
ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
ಉಪದೇಶಯುಕ್ತವಾದ ಯೆಹೋವನ ಕಟ್ಟಳೆಗಳು
ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ?
ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
ಉಪದೇಶಯುಕ್ತವಾದ ಯೆಹೋವನ ಕಟ್ಟಳೆಗಳು
ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ?
ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
ಮಕ್ಕಳಿರಾ, ಬನ್ನಿರಿ, ನನ್ನ ಮಾತನ್ನು ಕೇಳಿರಿ;
ನಾನು ಯೆಹೋವನ ಭಯವನ್ನು ನಿಮಗೆ ಕಲಿಸುವೆನು.
Instruir as crianças
Instrui a criança no caminho em que deve andar. A educação cristã é mandamento repetido através de toda a Escritura.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
ಮುಪ್ಪಿನಲ್ಲಿಯೂ ಓರೆಯಾಗರು.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
ಮುಪ್ಪಿನಲ್ಲಿಯೂ ಓರೆಯಾಗರು.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
ಮುಪ್ಪಿನಲ್ಲಿಯೂ ಓರೆಯಾಗರು.
ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ,
ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ,
ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು,
ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು,
ಧರ್ಮನಿಂದಕನೋ ಗದರಿಕೆಯನ್ನು ಕೇಳನು.
ಯೆಹೋವನಲ್ಲಿ ಭರವಸವಿಡು
ಕಂದಾ, ನನ್ನ ಉಪದೇಶವನ್ನು ಮರೆಯಬೇಡ,
ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
ಅವು ನಿನ್ನ ದಿನಗಳನ್ನು ಹೆಚ್ಚಿಸಿ, ನಿನ್ನ ಆಯುಷ್ಯವನ್ನು ವೃದ್ಧಿಗೊಳಿಸಿ,
ನಿನಗೆ ಸುಕ್ಷೇಮವನ್ನು ಉಂಟುಮಾಡುವವು.
ಯೆಹೋವನಲ್ಲಿ ಭರವಸವಿಡು
ಕಂದಾ, ನನ್ನ ಉಪದೇಶವನ್ನು ಮರೆಯಬೇಡ,
ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
ತಂದೆಯು ತನ್ನ ಮುದ್ದುಮಗನನ್ನು ಗದರಿಸುವಂತೆ
ಯೆಹೋವನು ತಾನು ಪ್ರೀತಿಸುವವನನ್ನೇ ಗದರಿಸುತ್ತಾನೆ.
ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು,
"ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ,
ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
ಜ್ಞಾನವನ್ನು ಪಡೆ, ವಿವೇಕವನ್ನು ಸಂಪಾದಿಸು, ಮರೆಯಬೇಡ,
ನನ್ನ ಮಾತುಗಳಿಗೆ ಅಸಡ್ಡೆ ತೋರಿಸಬೇಡ.
Disciplinar com amor
A vara e a repreensão dão sabedoria. A disciplina produz o fruto pacífico da justiça nos que são exercitados por ela.
ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು,
ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.
ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ,
ಅವನು ಬೆತ್ತದ ಏಟಿಗೆ ಸಾಯನು.
ಹೆತ್ತ ತಂದೆಯ ಮಾತಿಗೆ ಕಿವಿಗೊಡು,
ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.
ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ,
ಮಾರಿ ಬಿಡಬೇಡ.
ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು,
ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
ಕಪಟವಾಗಿ ಮಾತನಾಡುವ ಮೂಢನಿಗಿಂತಲೂ,
ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು,
ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.
ಒಬ್ಬ ಹುಡುಗನಾದರೂ ಶುದ್ಧವೂ, ಸತ್ಯವೂ ಆದ ನಡತೆಯಿಂದಲೇ,
ತನ್ನ ಗುಣವನ್ನು ತೋರ್ಪಡಿಸಿಕೊಳ್ಳುವನು.
ಜ್ಞಾನಹೀನನಾದ ಮಗನು ತಂದೆಗೆ ಕಿರಿಕಿರಿ,
ತಾಯಿಗೆ ಕರಕರೆ.
ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ,
ತಂದೆತಾಯಿಗಳು ಮಕ್ಕಳಿಗೆ ಭೂಷಣ.
ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ,
ತಂದೆತಾಯಿಗಳು ಮಕ್ಕಳಿಗೆ ಭೂಷಣ.
ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು,
ಗದರಿಕೆಯನ್ನು ಗಮನಿಸುವವನು ಜಾಣನು.
ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು,
ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.
ಧರ್ಮೋಪದೇಶವನ್ನು ಕೈಕೊಳ್ಳುವವನು ವಿವೇಕಿಯಾದ ಮಗನು,
ಹೊಟ್ಟೆಬಾಕರ ಗೆಳೆಯನು ತಂದೆಯ ಮಾನವನ್ನು ಕಳೆಯುವನು.
ಪಾಪಿಗಳ ಕುರಿತು ಎಚ್ಚರಿಕೆಗಳು
ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು,
ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ,
ಕೊರಳಿಗೆ ಹಾರದಂತಿರುವುದು.
ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ,
ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೇ ಸರಿ.
ನನ್ನ ಉಪದೇಶವನ್ನು ಕೇಳಿರಿ,
ಅದನ್ನು ಬಿಡದೆ ಜ್ಞಾನವಂತರಾಗಿರಿ.
Obediência e promessa
Filhos, obedecei a vossos pais no Senhor. Honra a teu pai e tua mãe para que viva muito tempo sobre a terra.
ತಂದೆತಾಯಿಗಳೂ ಮಕ್ಕಳೂ
ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, "ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ."
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ಪ್ರೀತಿಯಲ್ಲಿ ನಡೆಯಿರಿ
ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.
ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ, ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.
ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿ, ನಿಮ್ಮ ದೇವರಾದ ಯೆಹೋವನಿಗೆ ಒಳ್ಳೆಯದೂ ಹಾಗು ಯುಕ್ತವೂ ಆಗಿರುವುದನ್ನು ಮಾಡಿದರೆ ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು.
ಅವರಿಗೆ, "ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ. ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ" ಎಂದು ಹೇಳಿದನು.
Crianças e o reino
Deixai vir a mim as crianças. Jesus honrou as crianças como modelo de fé e humildade para todo o seu povo.
ಆದರೆ ಯೇಸು, "ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ" ಎಂದು ಹೇಳಿದನು.
ಆದರೆ ಯೇಸು, "ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ" ಎಂದು ಹೇಳಿದನು.
ದೇವರ ರಾಜ್ಯದಲ್ಲಿ ದೊಡ್ಡವನು
ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, "ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?" ಎಂದು ಕೇಳಿದರು. ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ, ಅವರಿಗೆ, "ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.
ಅವರಿಗೆ, "ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು. ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.
ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, "ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.
ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು. ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, "ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ, "ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು" ಎಂದು ಹೇಳಿದನು.
ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.
ಅವರ ಊಟವಾದ ಮೇಲೆ ಯೇಸು ಸೀಮೋನ್ ಪೇತ್ರನಿಗೆ, "ಯೋಹಾನನ ಮಗನಾದ ಸೀಮೋನನೇ, ನೀನು ಇವರಿಗಿಂತ ಹೆಚ್ಚಾಗಿ ನನ್ನನ್ನು ಪ್ರೀತಿಸುತ್ತಿಯೋ?" ಎಂದು ಕೇಳಲು ಅವನು "ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ" ಎಂದನು. ಆತನು ಅವನಿಗೆ, "ನನ್ನ ಕುರಿಮರಿಗಳನ್ನು ಮೇಯಿಸು" ಎಂದು ಹೇಳಿದನು.
Identidade e crescimento
Somos filhos de Deus pelo Espírito de adoção. Crescer em Cristo é amadurecer em fé, obediência e amor ao próximo.
ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು.
ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ.
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.
ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.
ಈ ಪತ್ರಿಕೆಯನ್ನು ಸಭೆಯವರೆಲ್ಲರಿಗೋಸ್ಕರ ಬರೆದಿರುವುದಕ್ಕೆ ಕಾರಣ
ಪ್ರಿಯ ಮಕ್ಕಳೇ, ಕ್ರಿಸ್ತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವುದರಿಂದ ನಾನು ನಿಮಗೆ ಬರೆಯುತ್ತಿದ್ದೇನೆ.
ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.
ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು, ಸ್ವಂತ ಮನೆಯವರನ್ನು ಚೆನ್ನಾಗಿ ನಡೆಸುವವನಾಗಿರಬೇಕು.
ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ,
"ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ.
ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ."
ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ.
ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.
ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?
ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋರದೆ, ದುಃಖಕರವಾಗಿ ತೋರುತ್ತದೆ. ಆದರೆ ಶಿಸ್ತಿನ ಅಭ್ಯಾಸವನ್ನು ಹೊಂದಿದವರು, ಮುಂದೆ ಸಮಾಧಾನವುಳ್ಳ ನೀತಿಯ ಫಲವನ್ನು ಪಡೆಯುತ್ತಾರೆ.
ಅವರು; "ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು" ಎಂದು ಹೇಳಿ,
ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು.
Transmitir a fé
Contaremos à geração vindoura os louvores do Senhor. O legado de fé é o maior presente que damos aos nossos filhos.
ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು.
ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.
ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ?
ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.
ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
ಆಗ ನಾನು ಅವರನ್ನು ಸಂದರ್ಶಿಸಿ ಅವರ ಮುಂದೆ ನಿಂತು ಶ್ರೀಮಂತರನ್ನೂ, ಅಧಿಕಾರಿಗಳನ್ನೂ, ಉಳಿದ ಜನರನ್ನೂ ಉದ್ದೇಶಿಸಿ, "ನಿಮ್ಮ ಹಗೆಗಳಿಗೆ ಹೆದರಬೇಡಿರಿ; ಮಹೋನ್ನತನೂ, ಭಯಂಕರನೂ ಆಗಿರುವ ಕರ್ತನನ್ನು ನೆನಪುಮಾಡಿಕೊಂಡು ನಿಮ್ಮ ಸಹೋದರರಿಗಾಗಿಯೂ, ಗಂಡು ಹೆಣ್ಣು ಮಕ್ಕಳಿಗಾಗಿಯೂ, ಹೆಂಡತಿಯರಿಗಾಗಿಯೂ, ನಿಮ್ಮ ಮನೆಗಳಿಗೋಸ್ಕರವೂ ಹೋರಾಡಿರಿ" ಎಂದು ಹೇಳಿದೆನು.
ಸಮುವೇಲನಿಗಾದ ದೈವೋಕ್ತಿ
ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನು. ಆ ಕಾಲದಲ್ಲಿ ದೈವೋಕ್ತಿಗಳು ವಿರಳವಾಗಿದ್ದವು; ದೇವದರ್ಶನಗಳು ಅಪರೂಪವಾಗಿದ್ದವು.
ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು,
ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.
ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು,
ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು,
ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, "ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;
ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ,
ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.
ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ,
ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,