Dar
Dar é princípio do Reino de Deus. Jesus deu tudo — até a própria vida. A Bíblia nos ensina que é mais bem-aventurado dar do que receber, e que Deus ama ao que dá com alegria.
Dar com alegria
Deus ama ao que dá com alegria. Dai e dar-se-vos-á. O generoso prospera e quem abençoa será abençoado.
ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.
ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.
ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.
ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಇದಲ್ಲದೆ ನಿಮ್ಮ ದಾನಗಳು ನಮ್ಮ ಕೈಯಿಂದ ಮತ್ತೊಬ್ಬರಿಗೆ ಸೇರಿದಾಗ ಅದು ದೇವರಿಗೆ ಕೃತಜ್ಞತಾಸ್ತುತಿಯನ್ನು ಉಂಟುಮಾಡುತ್ತದೆ.
ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.
ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು" ಅಂದನು.
Princípios de generosidade
Honra ao Senhor com as tuas primícias. Não negues o bem a quem o merece. A alma generosa prosperará.
ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ
ಯೆಹೋವನನ್ನು ಸನ್ಮಾನಿಸು.
ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ
ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.
ಉದಾರಿಯು ಪುಷ್ಟನಾಗುವನು,
ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.
ಕಾಣಿಕೆಯು ಅನುಕೂಲತೆಗೂ,
ಶ್ರೀಮಂತರ ಸಾನ್ನಿಧ್ಯ ಪ್ರವೇಶಕ್ಕೂ ಸಾಧನ.
ಧರ್ಮಿಯು ಹಿಂತೆಗೆಯದೆ ಕೊಡುವನು,
ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.
ಬಾಯನ್ನು ತೆರೆದು ನ್ಯಾಯವನ್ನು ತೀರಿಸು,
ದೀನದರಿದ್ರರ ವ್ಯಾಜ್ಯ ಮಾಡು.
ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.
O ensino de Jesus
Quando deres esmola, não toque a trombeta. A generosidade do coração importa mais que a grandeza do donativo.
"ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
ಯೇಸು ಅವನಿಗೆ, "ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು" ಎಂದು ಹೇಳಿದನು.
ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
ನೀನು ಯೆಹೋವನಲ್ಲಿ ಸಂತೋಷಿಸು;
ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು;
ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.
ಇದಲ್ಲದೆ ನೆಹೆಮೀಯನು ಅವರಿಗೆ, "ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ" ಎಂದನು.
ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.