Tomar uma decisão
Tomar decisões com sabedoria é um dos maiores desafios da vida. A Bíblia nos ensina a buscar a Deus em oração, na Palavra e no conselho, confiando que Ele dirige os nossos passos.
Buscar a Deus
Se algum de vós tem falta de sabedoria, peça a Deus. Ele dá generosamente e sem repreensão a todos os que pedem.
ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
ಮತ್ತು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಭರವಸೆಯು ಆತನಲ್ಲಿ ನಮಗುಂಟು.
ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ
ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು;
ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು;
ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
Conselho e direção
Onde não há conselho os planos se frustam. Toda Escritura é útil para nos guiar nas decisões da vida.
ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು,
ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.
ಮಡಲಿನಲ್ಲಿ ಚೀಟು ಹಾಕಬಹುದು,
ಅದರ ತೀರ್ಪು ಯೆಹೋವನದೇ.
ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ,
ಸಮಸ್ತ ಸುಜ್ಞಾನಕ್ಕೂ ರೇಗುವನು.
ಮೂಢನಿಗೆ ವಿವೇಕವು ಅನಿಷ್ಟ;
ಸ್ವಭಾವವನ್ನು ಹೊರಪಡಿಸಿಕೊಳ್ಳುವುದೇ ಅವನಿಗಿಷ್ಟ.
ದುರಾಚಾರವಿದ್ದಲ್ಲಿ ತಾತ್ಸಾರ;
ಅವಮಾನವಿದ್ದಲ್ಲಿ ಧಿಕ್ಕಾರ.
ಸತ್ಪುರುಷನ ನುಡಿಯು ಆಳವಾದ ನೀರು,
ಜ್ಞಾನದ ಬುಗ್ಗೆ, ಹರಿಯುವ ತೊರೆ.
ದುಷ್ಟನಿಗೆ ಪ್ರಸನ್ನನಾಗಿ
ಶಿಷ್ಟನಿಗೆ ನ್ಯಾಯತಪ್ಪಿಸುವುದು ಅಧರ್ಮ.
ಜ್ಞಾನಹೀನನ ತುಟಿಗಳು ಜಗಳವನ್ನು ಉಂಟುಮಾಡುತ್ತವೆ,
ಅವನ ಬಾಯಿ ಪೆಟ್ಟುತಿನ್ನುವುದಕ್ಕೆ ಕೂಗಿಕೊಳ್ಳುತ್ತದೆ.
ಜ್ಞಾನಹೀನನಿಗೆ ಬಾಯಿ ನಾಶ,
ತುಟಿಗಳು ಪಾಶ.
ಚಾಡಿಕೋರನ ಮಾತುಗಳು ರುಚಿಯಾದ ತುತ್ತುಗಳು,
ಹೊಟ್ಟೆಯೊಳಕ್ಕೇ ಇಳಿಯುವವು.
ಕೆಲಸಗಳ್ಳನು ಕೆಡುಕನಿಗೆ ತಮ್ಮ.
ಯೆಹೋವನ ನಾಮವು ಬಲವಾದ ಬುರುಜು,
ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.
ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು,
ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
ಭಂಗಕ್ಕೆ ಮೊದಲು ಗರ್ವದ ಹೃದಯ,
ಮಾನಕ್ಕೆ ಮುಂಚೆ ದೀನತೆ.
ಗಮನಿಸದೆ ಉತ್ತರಕೊಡುವವನು,
ಮೂರ್ಖನೆಂಬ ಅವಮಾನಕ್ಕೆ ಗುರಿಯಾಗುವನು.
ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು,
ಆತ್ಮವೇ ನೊಂದರೆ ಸಹಿಸುವವರು ಯಾರು?
ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.
ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
ಸುವಾರ್ತೆ ಸಾರುವುದಕ್ಕೆ ಪೌಲನು ಮಾಡಿದ ಮೊದಲನೆಯ ಪ್ರಯಾಣ (13:1, 14:28)
ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ. ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; "ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ" ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
Confiar e seguir
Seja o que for que façais, fazei tudo para a glória de Deus. O sábio ouve a Deus antes de agir.
ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
ದೇವರು ನಮ್ಮ ತಂದೆ
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.
ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, "ನಿನಗೆ ಯಾವ ವರ ಬೇಕು ಕೇಳಿಕೋ" ಎಂದು ಹೇಳಲು ಸೊಲೊಮೋನನು, "ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ. ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು. ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ. ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?" ಎಂದು ಬೇಡಿಕೊಂಡನು.
ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು. ಆಗ ದೇವರು ಅವನಿಗೆ, "ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.
ಹೀಗಿರುವಲ್ಲಿ ಅವನ ಹೆಂಡತಿ ಅವನಿಗೆ, "ನಿನ್ನ ಯಥಾರ್ಥತ್ವವನ್ನು ಇನ್ನೂ ಬಿಡಲಿಲ್ಲವೋ? ಇದೆಲ್ಲವನ್ನು ಕೊಟ್ಟ ದೇವರನ್ನು ದೂಷಿಸಿ ಸಾಯಿ" ಎಂದು ಹೇಳಿದಳು. ಆಗ ಯೋಬನು ಆಕೆಗೆ, "ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?" ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.