Tomar uma decisão
Tomar decisões com sabedoria é um dos maiores desafios da vida. A Bíblia nos ensina a buscar a Deus em oração, na Palavra e no conselho, confiando que Ele dirige os nossos passos.
Buscar a Deus
Se algum de vós tem falta de sabedoria, peça a Deus. Ele dá generosamente e sem repreensão a todos os que pedem.
ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.
ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.
ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.
ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು
ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.
ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು.
ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.
ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು.
ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.
Conselho e direção
Onde não há conselho os planos se frustam. Toda Escritura é útil para nos guiar nas decisões da vida.
ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ,
ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
ಉಡಿಯಲ್ಲಿ ಚೀಟು ಹಾಕಬಹುದು,
ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.
ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ
ಸಮಸ್ತ ಸುಜ್ಞಾನಕ್ಕೂ ರೇಗುವನು.
ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ;
ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.
ದುಷ್ಟತ್ವವು ಬಂದಾಗ ತಾತ್ಸಾರವೂ,
ಅವಮಾನದೊಂದಿಗೆ ನಿಂದೆಯೂ ಬರುತ್ತವೆ.
ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ,
ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.
ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ,
ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ.
ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ
ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.
ಬುದ್ಧಿಹೀನನ ಬಾಯಿಯು ಅವನ ನಾಶನ;
ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.
ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು;
ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.
ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು,
ಕೆಡುಕನಿಗೆ ಸಹೋದರನಾಗಿದ್ದಾನೆ.
ಯೆಹೋವ ದೇವರ ನಾಮವು ಬಲವಾದ ಬುರುಜು;
ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.
ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ
ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.
ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು;
ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.
ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ
ಅದು ಮೂರ್ಖತನವೂ, ಅವಮಾನವೂ ಆಗಿದೆ.
ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು;
ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?
ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.
ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಮೂಸ್ಯದ ಸೀಮೆಯನ್ನು ತಲುಪಿದಾಗ ಬಿಥೂನ್ಯವನ್ನು ಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಅನುಮತಿಸಲಿಲ್ಲ.
ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ. ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, "ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ," ಎಂದರು. ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು.
Confiar e seguir
Seja o que for que façais, fazei tudo para a glória de Deus. O sábio ouve a Deus antes de agir.
ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.
ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,
ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿಯಲ್ಲಿ ಸ್ವಪ್ನದೊಳಗೆ ಯೆಹೋವ ದೇವರು ಸೊಲೊಮೋನನಿಗೆ ಕಾಣಿಸಿಕೊಂಡರು. ದೇವರು ಅವನಿಗೆ, "ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ," ಎಂದರು.
ಅದಕ್ಕೆ ಸೊಲೊಮೋನನು, "ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.
"ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ. ಇದಲ್ಲದೆ ನಿಮ್ಮ ಸೇವಕನಾದ ನಾನು ನೀವು ಆಯ್ದುಕೊಂಡಂಥ ಅಸಂಖ್ಯಾತ ಜನರ ಮಧ್ಯದಲ್ಲಿ ಇದ್ದೇನೆ. ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?" ಎಂದನು.
ಸೊಲೊಮೋನನು ಕೇಳಿದ ಈ ಮಾತು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದಾಗಿತ್ತು. ಆದ್ದರಿಂದ ದೇವರು ಅವನಿಗೆ, "ನೀನು ನಿನಗಾಗಿ ದೀರ್ಘಾಯುಷ್ಯ ಅಥವಾ ಸಂಪತ್ತನ್ನು ಕೇಳಲಿಲ್ಲ, ಅಥವಾ ನಿನ್ನ ಶತ್ರುಗಳ ಮರಣವನ್ನು ಕೇಳಿಲ್ಲ, ಆದರೆ ನ್ಯಾಯವನ್ನು ನಿರ್ವಹಿಸುವುದಕ್ಕಾಗಿ ನಿನಗೋಸ್ಕರ ವಿವೇಕವನ್ನು ಕೇಳಿದ್ದರಿಂದ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.
ಆಗ ಯೋಬನ ಹೆಂಡತಿಯು ಅವನಿಗೆ, "ನೀನು ಇನ್ನೂ ಯಥಾರ್ಥತ್ವವನ್ನು ಬಿಡಲಿಲ್ಲವೇ? ದೇವರನ್ನು ಶಪಿಸಿ ಸತ್ತುಹೋಗು," ಎಂದಳು.
ಆದರೆ ಯೋಬನು ಅವಳಿಗೆ, "ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?" ಎಂದನು.
ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.