Dependência
A dependência de Deus é o caminho da verdadeira liberdade. Sem Cristo, nada podemos fazer. Mas em Deus encontramos sustento, direção e força para todo desafio.
Sem Ele nada podemos
Sem mim nada podeis fazer. O cristão que se desconecta da videira seca — mas o que permanece dá muito fruto.
ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.
ಯೆಹೋವನ ಸೇವೆಯು ಪೂರ್ಣಾನಂದಕರವಾದದ್ದು
ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.
ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ;
ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
ಯೆಹೋವನ ಕೃಪೆಯಿಂದಲೇ ಕೃತಾರ್ಥರಾಗುವೆವು
ಯೆಹೋವನು ಮನೆಯನ್ನು ಕಟ್ಟದಿದ್ದರೆ,
ಅದನ್ನು ಕಟ್ಟುವವರು ಕಷ್ಟಪಡುವುದು ವ್ಯರ್ಥ;
ಯೆಹೋವನು ಪಟ್ಟಣವನ್ನು ಕಾಯದಿದ್ದರೆ,
ಕಾವಲುಗಾರರು ಅದನ್ನು ಕಾಯುವುದು ವ್ಯರ್ಥ.
ನಮ್ಮ ಪೂರ್ವಿಕರಿಗೆ ಕತ್ತಿಯೇ ಈ ದೇಶವನ್ನು ಸ್ವಾಧೀನಮಾಡಿಕೊಡಲಿಲ್ಲ;
ನಿನ್ನ ಭುಜಬಲ, ಬಲಗೈ ಮತ್ತು ಪ್ರಸನ್ನತೆ ಅವರಿಗೆ ಜಯವನ್ನು ಉಂಟುಮಾಡಿದವು;
ನಿನ್ನ ಸಹಾಯ ಸದಾಕಾಲ ಅವರಿಗಿತ್ತಲ್ಲಾ.
ಯೆಹೋವನೇ ನಿಮಗಾಗಿ ಯುದ್ಧಮಾಡುವನು. ನೀವಂತು ಸುಮ್ಮನೇ ನಿಂತುಕೊಂಡಿರಿ" ಎಂದು ಹೇಳಿದನು.
Depender do Senhor
Confia no Senhor de todo o coração e não te estribes no teu próprio entendimento. Em todos os caminhos o reconhece.
ಸ್ವಬುದ್ಧಿಯನ್ನೇ ಆಧಾರಮಾಡಿಕೊಳ್ಳದೆ
ಪೂರ್ಣಮನಸ್ಸಿನಿಂದ ಯೆಹೋವನಲ್ಲಿ ಭರವಸವಿಡು.
ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು;
ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ,
ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.
ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ,
ಯೆಹೋವನ ಸಂಕಲ್ಪವೇ ಈಡೇರುವುದು.
ಯೆಹೋವನ ಆಶೀರ್ವಾದವು ಭಾಗ್ಯದಾಯಕವು,
ಅದು ವ್ಯಸನವನ್ನು ಸೇರಿಸದು.
ತನುಮನಗಳು ಕ್ಷಯಿಸಿದರೂ
ನನ್ನ ಆತ್ಮಕ್ಕೆ ಬಲವು
ನನ್ನ ಶಾಶ್ವತವಾದ ಪಾಲೂ ದೇವರೇ.
ಸೇನಾಧೀಶ್ವರನಾದ ಯೆಹೋವ ದೇವರೇ,
ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು;
ಆಗ ಉದ್ಧಾರವಾಗುವೆವು.
ಯೆಹೋವನ ಭಕ್ತಪಾಲನೆ
ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ;
ನನ್ನ ಸಹಾಯವು ಎಲ್ಲಿಂದ ಬರುವುದು?
ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ,
ನನ್ನ ಸಹಾಯವು ಬರುತ್ತದೆ.
ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ;
ನಿನ್ನನ್ನು ಕಾಯುವವನು ತೂಕಡಿಸದಿರಲಿ.
ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದುಕೊಂಡಾಗಲೇ,
ನಿನ್ನ ಕೃಪೆಯು ನನಗೆ ಆಧಾರವಾಯಿತು.
ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು;
ಆತನು ಸದುತ್ತರವನ್ನು ದಯಪಾಲಿಸಿ, ನನ್ನನ್ನು ವಿಶಾಲವಾದ ಸ್ಥಳದಲ್ಲಿ ನೆಲೆಸುವಂತೆ ಮಾಡಿದನು.
ಭಕ್ತರೆಂಬ ಕುರಿಗಳಿಗೆ ಒಳ್ಳೆಯ ಕುರುಬನಾದ ಯೆಹೋವನು
ಯೆಹೋವನು ನನಗೆ ಕುರುಬನು; ಕೊರತೆಪಡೆನು.
ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ;
ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
Contentamento e confiança
Aprendi a viver contente em toda situação. A dependência de Deus nos livra da ansiedade e nos firma na paz.
ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.
ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ.
"ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ.
ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.
ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.
ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.
ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.