Desejos
Os desejos revelam o que há no coração. A Bíblia nos ensina a purificar nossos desejos, submeter a carne ao espírito e buscar as coisas que são de cima.
Desejos da carne
A carne milita contra o espírito. O cristão é chamado a vigiar, resistir e não satisfazer os desejos da natureza pecaminosa.
ಆತ್ಮನ ಫಲವು ಮತ್ತು ದೇಹದ ದುಷ್ಫಲಗಳು
ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಪರಸ್ಪರ ಭಾರವನ್ನು ಹೊತ್ತುಕೊಳ್ಳಿರಿ
ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ" ಎಂದು ಹೇಳಿದನು.
ನಮ್ಮನ್ನು ಶೋಧನೆಯೊಳಗೆ ಸೇರಿಸದೆ
ಕೆಡುಕನಿಂದ; ನಮ್ಮನ್ನು ತಪ್ಪಿಸು
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಬದುಕುಬಾಳಿನ ಗರ್ವ, ಇವು ತಂದೆಗೆ ಸಂಬಂಧಪಟ್ಟವುಗಳಲ್ಲ. ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ.
ಲೋಕವೂ ಅದರ ಆಸೆಯೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಸದಾಕಾಲಕ್ಕೂ ಇರುವನು.
ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
Purificar os desejos
Guarda o teu coração. Das profundezas do interior do homem saem os desejos — bons ou maus, conforme o coração.
ಯೋಬನು ತನ್ನ ನಿರ್ದೋಷದ ಬಗ್ಗೆ ಮಾತನಾಡಿದ್ದು
"ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು
ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,
ಧಗಧಗಿಸುವ ಕೆಂಡದ ಮೇಲೆ ನಡೆದರೆ
ಕಾಲು ಬೇಯುವುದಿಲ್ಲವೋ?
ಧರ್ಮಿಯು ಹಿಂತೆಗೆಯದೆ ಕೊಡುವನು,
ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.
ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ?
ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು,
ಆಕಾಶದ ಕಡೆಗೆ ಹಾರುವ ಹದ್ದಿನಂತೆ,
ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
ದೇಹದ ಮೂಲಕ ದೇವರನ್ನು ಮಹಿಮೆಪಡಿಸಿರಿ
"ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು," ಆದರೆ ಎಲ್ಲವು ಪ್ರಯೋಜನಕರವಲ್ಲ. "ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಹಕ್ಕುವುಂಟು" ಆದರೆ ನಾನು ಯಾವುದಕ್ಕೂ ಅಧೀನನಲ್ಲ.
ಆದರೆ ಜಾರತ್ವದ ಶೋಧನೆಗೆ ಅವಕಾಶ ಕೊಡದಿರಲು ಪ್ರತಿಯೊಬ್ಬನಿಗೂ ಸ್ವಂತ ಹೆಂಡತಿಯು ಇರಲಿ ಮತ್ತು ಪ್ರತಿಯೊಬ್ಬಳಿಗೆ ಸ್ವಂತ ಗಂಡನು ಇರಲಿ.
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
Desejos santos
Como a corça deseja as correntes de água, minha alma suspira por ti, ó Deus. Os desejos do Espírito produzem vida e paz.
ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ,
ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.
ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ;
ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.
ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.
ನೀವು ಬಯಸಿದ್ದು ಹೊಂದದೆ ಇದ್ದೀರಿ. ನೀವು ಕೊಲೆ ಮಾಡಿದರೂ, ಹೊಟ್ಟೆಕಿಚ್ಚುಪಟ್ಟರೂ ಬಯಸಿದ್ದನ್ನು ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಜಗಳವಾಡುತ್ತೀರಿ. ಅದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ಪಡೆದುಕೊಳ್ಳಲಾಗುತ್ತಿಲ್ಲ.
ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ "ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು" ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.
ಪಾಪದಿಂದ ಬಿಡಿಸಲು ಧರ್ಮಶಾಸ್ತ್ರಕ್ಕೆ ಶಕ್ತಿ ಸಾಲದು.
ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ "ದುರಾಶೆ ಪಾಪವೆಂದು" ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.