Desejos
Os desejos revelam o que há no coração. A Bíblia nos ensina a purificar nossos desejos, submeter a carne ao espírito e buscar as coisas que são de cima.
Desejos da carne
A carne milita contra o espírito. O cristão é chamado a vigiar, resistir e não satisfazer os desejos da natureza pecaminosa.
ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.
ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.
ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ," ಎಂದು ಹೇಳಿದರು.
ನಮ್ಮನ್ನು ಶೋಧನೆಗೆ ಸೇರಿಸದೆ,
ಕೇಡಿನಿಂದ ತಪ್ಪಿಸಿರಿ.
ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ
ಸದಾಕಾಲ ನಿಮ್ಮದೇ. ಆಮೆನ್.’
ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.
ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.
ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.
Purificar os desejos
Guarda o teu coração. Das profundezas do interior do homem saem os desejos — bons ou maus, conforme o coração.
"ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು
ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು.
ಒಬ್ಬನು ಧಗಧಗಿಸುವ ಕೆಂಡದ ಮೇಲೆ ನಡೆದರೆ,
ಅವನ ಪಾದಗಳು ಸುಡುವುದಿಲ್ಲವೋ?
ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ;
ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.
ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ.
ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು
ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.
ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
"ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೂ ಹಕ್ಕಿದೆ" ಎಂದು ನೀವು ಹೇಳುತ್ತೀರಿ. ಆದರೆ ಎಲ್ಲವೂ ನನಗೆ ಪ್ರಯೋಜನಕರವಾಗಿರುವುದಿಲ್ಲ. ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಹಕ್ಕಿದೆ; ಆದರೆ ನಾನು ಯಾವುದಕ್ಕೂ ಗುಲಾಮನಾಗಿರುವುದಿಲ್ಲ.
ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ.
ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.
Desejos santos
Como a corça deseja as correntes de água, minha alma suspira por ti, ó Deus. Os desejos do Espírito produzem vida e paz.
ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ,
ಹಾಗೆಯೇ ನನ್ನ ಪ್ರಾಣವು ನಿಮ್ಮನ್ನು ಬಯಸುತ್ತದೆ.
ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ
ನಾವು ನಿಮಗೋಸ್ಕರ ಕಾದುಕೊಂಡಿದ್ದೇವೆ,
ನಿಮ್ಮ ನಾಮಸ್ಮರಣೆಯೇ
ನಮ್ಮ ಹೃದಯದ ಬಯಕೆ.
ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.
ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
ಯಾರಿಗಾದರೂ ಶೋಧನೆ ಬಂದಾಗ, "ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು," ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ.
ಹಾಗಾದರೆ ನಾವು ಏನು ಹೇಳೋಣ? ನಿಯಮವೇ ಪಾಪವಾಗಿದೆಯೋ? ಎಂದಿಗೂ ಇಲ್ಲ. ಆದರೂ ನಿಯಮವನ್ನು ಬಿಟ್ಟು ಬೇರಾವುದರ ಮೂಲಕವೂ ಪಾಪವೆಂದರೆ ಏನೆಂದು ನನಗೆ ತಿಳಿದುಕೊಳ್ಳಲು ಸಾಧ್ಯವಿರಲಿಲ್ಲ. ನಿಯಮವು, "ದುರಾಶೆ ಪಡಬೇಡ," ಎಂದು ಹೇಳದೆ ಇರುತ್ತಿದ್ದರೆ ದುರಾಶೆ ಎಂದರೆ ಏನೆಂದು ನಾನು ತಿಳಿಯಲು ಸಾಧ್ಯವಿರಲಿಲ್ಲ.
ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.
ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು.