Deus é nosso refúgio
Deus é nosso refúgio e fortaleza, socorro bem presente nas angústias. Quando o mundo treme, o crente encontra paz sob as asas do Altíssimo.
Refúgio e fortaleza
Deus é nosso refúgio e fortaleza. Quem habita no abrigo do Altíssimo descansa à sombra do Todo-Poderoso.
ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ;
ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ದೇವಾಶ್ರಿತನು ಸುರಕ್ಷಿತನು
ಅತ್ಯುನ್ನತನಾದ ದೇವರ ಮೊರೆಹೊಕ್ಕವನು,
ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
ನಾನು ಯೆಹೋವನಿಗೆ, "ನೀನೇ ನನ್ನ ಶರಣನು, ನನ್ನ ದುರ್ಗವು,
ನಾನು ಭರವಸವಿಟ್ಟಿರುವ ನನ್ನ ದೇವರು" ಎಂದು ಹೇಳುವೆನು.
ನನ್ನನ್ನು ಬೇಟೆಗಾರನ ಬಲೆಯಿಂದಲೂ,
ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು;
ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ.
ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.
ಜಯಪ್ರದನಾದ ಯೆಹೋವನ ಸ್ತುತಿ
ನನ್ನ ಬಲವಾಗಿರುವ ಯೆಹೋವನೇ,
ನಿನ್ನಲ್ಲಿಯೇ ಮಮತೆಯಿಡುತ್ತೇನೆ.
ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು,
ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು,
ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
ಯೆಹೋವನು ಸ್ತೋತ್ರಕ್ಕೆ ಅರ್ಹನು;
ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
ಯೆಹೋವನ ಸೇವೆಯು ಪೂರ್ಣಾನಂದಕರವಾದದ್ದು
ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.
ಗಂಡಾಂತರದಲ್ಲಿ ಭಕ್ತನ ನಂಬಿಕೆ
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು
ನನ್ನನ್ನು ನುಂಗಿಬಿಡಬೇಕೆಂದು ಬಂದು,
ತಾವೇ ನೆಲಕ್ಕೆ ಬಿದ್ದುಹೋದರು.
ನನಗೆ ವಿರುದ್ಧವಾಗಿ ದಂಡು ಬಂದಿಳಿದರೂ ನನಗೇನೂ ಭಯವಿಲ್ಲ;
ಚತುರಂಗಬಲವು ಯುದ್ಧಸನ್ನದ್ಧವಾಗಿ ನಿಂತರೂ,
ಭರವಸವುಳ್ಳವನಾಗಿಯೇ ಇರುವೆನು.
ಕಷ್ಟದಲ್ಲಿರುವವರ ವಿಶ್ವಾಸದ ಪ್ರಾರ್ಥನೆ
ಯೆಹೋವನೇ, ನಿನ್ನ ಮೊರೆಹೊಕ್ಕಿದ್ದೇನೆ;
ನನ್ನನ್ನು ಎಂದಿಗೂ ಅವಮಾನಕ್ಕೆ ಗುರಿಪಡಿಸಬೇಡ.
ನಿನ್ನ ನೀತಿಗನುಸಾರವಾಗಿ ನನ್ನನ್ನು ರಕ್ಷಿಸು.
ಕಿವಿಗೊಟ್ಟು ಕೇಳಿ ಬೇಗನೆ ನನ್ನನ್ನು ಬಿಡಿಸು;
ನನ್ನನ್ನು ರಕ್ಷಿಸುವ ಆಶ್ರಯಗಿರಿಯೂ, ದುರ್ಗಸ್ಥಾನವೂ ಆಗಿರು.
ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ;
ಆದುದರಿಂದ ನಿನ್ನ ಹೆಸರಿನ ನಿಮಿತ್ತ ದಾರಿತೋರಿಸಿ ನನ್ನನ್ನು ನಡೆಸು.
ಶತ್ರುಗಳು ನನಗೆ ರಹಸ್ಯವಾಗಿ ಹಾಕಿದ ಬಲೆಯೊಳಗೆ
ಸಿಕ್ಕಿಬೀಳದಂತೆ ನನ್ನನ್ನು ಕಾಪಾಡು;
ನೀನೇ ನನಗೆ ಆಧಾರವಲ್ಲವೇ;
ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದೇನೆ.
ಯೆಹೋವನೇ, ನಂಬಿಗಸ್ತನಾದ ದೇವರೇ, ನನ್ನನ್ನು ವಿಮೋಚಿಸಿದ್ದೀ.
ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು;
ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ.
ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.
Proteção e segurança
O Senhor é a minha rocha e a minha fortaleza. Melhor é confiar no Senhor do que confiar no homem.
ಮನುಷ್ಯರಲ್ಲಿ ಭರವಸವಿಡುವುದಕ್ಕಿಂತ,
ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
ಪ್ರಭುಗಳಲ್ಲಿ ಭರವಸವಿಡುವುದಕ್ಕಿಂತ,
ಯೆಹೋವನನ್ನು ಆಶ್ರಯಿಸುವುದು ಒಳ್ಳೆಯದು.
ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು.
ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ;
ನಾನು ಕದಲುವುದಿಲ್ಲ.
ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ;
ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
ಜನರೇ, ಯಾವಾಗಲೂ ಆತನನ್ನೇ ನಂಬಿ,
ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ;
ದೇವರು ನಮ್ಮ ಆಶ್ರಯವು. ಸೆಲಾ
ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು,
ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.
ದೇವರ ಮನುಷ್ಯನಾದ ಮೋಶೆಯ ಪ್ರಾರ್ಥನೆ.
ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.
ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ,
ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ,
ಯುಗಯುಗಾಂತರಗಳಲ್ಲಿಯೂ ನೀನೇ ದೇವರು.
ಯೆಹೋವನು ಕುಗ್ಗಿದವರಿಗೆ ಆಶ್ರಯವೂ,
ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು
ನಿನ್ನಲ್ಲಿ ಭರವಸವಿಡುವರು;
ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು;
ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
Em todo tempo
O Senhor é bom e é fortaleza no dia da angústia. A torre forte do nome do Senhor protege os seus em toda circunstância.
ಯೆಹೋವನು ತನ್ನ ಪ್ರಜೆಯನ್ನು ಬಾಧಿಸುವವರಿಗೆ ಮಾಡುವ ದಂಡನೆ
ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.
ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ,
ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು
ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.
ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ,
ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
ಯೆಹೋವನು ಸನ್ಮಾರ್ಗಿಗೆ ಆಶ್ರಯ,
ಕೆಡುಕನಿಗೆ ನಾಶನ.
Este artigo te tocou? Faça uma oração!
+581 estão orando agora.
Junte-se à corrente de oração.