Deus nos chamou
Deus nos chamou antes da fundação do mundo. Ele nos conhece pelo nome, nos predestinou para sermos conforme a imagem de Cristo e nos capacita para o chamado.
Chamados por Deus
Os que Deus predestinou, também os chamou. O Seu chamado é irrevogável — fundamentado no propósito eterno e na graça abundante.
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಒಳ್ಳೆಯದಕ್ಕಾಗಿಯೇ ಆಗುವುದೆಂದು ನಮಗೆ ತಿಳಿದಿದೆ. ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು. ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.
ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ, ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.
ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು. ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ, ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.
ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು.
"ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ" ಎಂಬ ವಾಕ್ಯವನ್ನು ದಯಪಾಲಿಸಿದನು.
A resposta ao chamado
Ninguém pode vir a mim se o Pai não o atrair. Deus escolheu os fracos para confundir os fortes — e nos chamou para a luz.
"ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ. ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.
ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು. ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
ಪೇತ್ರನು ಅವರಿಗೆ, "ನಿಮ್ಮ ಪಾಪಗಳು ಕ್ಷಮಿಸಲ್ಪಡುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಳ್ಳಲಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ. ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ" ಎಂದು ಹೇಳಿದನು.
Confirmando o chamado
Procurai tornar cada vez mais firme a vossa vocação. Deus começou a boa obra e a completará até o dia de Cristo.
ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ. ಹೀಗಿರುವುದರಿಂದ ನಮ್ಮ ಕರ್ತನೂ, ರಕ್ಷಕನೂ ಆಗಿರುವ ಯೇಸುಕ್ರಿಸ್ತನ ನಿತ್ಯ ರಾಜ್ಯದಲ್ಲಿ ನಿಮಗೆ ಧಾರಾಳವಾಗಿ ಪ್ರವೇಶವು ದೊರೆಯುವುದು.
ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ" ಅಂದನು.