Deus
Deus é a realidade suprema do universo — o criador, sustentador e redentor de tudo o que existe. Conhecê-lo é a essência da vida eterna e o maior privilégio da existência humana.
Quem é Deus
Não há santo como o Senhor. Tu és grande e fazes maravilhas — só tu és Deus. Sua majestade transcende toda compreensão.
"ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ.
ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ.
ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ.
"ಸಾರ್ವಭೌಮ ಯೆಹೋವ ದೇವರೇ, ನೀವು ಮಹೋನ್ನತರಾಗಿದ್ದೀರಿ. ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.
ಏಕೆಂದರೆ ಪ್ರತಿಯೊಂದು ಮನೆಯೂ ಯಾರೋ ಒಬ್ಬರಿಂದ ಕಟ್ಟಲಾಗುತ್ತದೆ. ಆದರೆ ಸಮಸ್ತವನ್ನು ಕಟ್ಟಿದವರು ದೇವರೇ.
ಯೆಹೋವ ದೇವರೇ, ನೀವೇ ನನ್ನ ದೇವರು.
ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ,
ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ,
ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ,
ನಿಮ್ಮ ನಾಮವನ್ನು ಕೊಂಡಾಡುವೆನು.
ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ.
ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ,
ಎಂದು ಯೆಹೋವ ದೇವರು ಹೇಳುತ್ತಾರೆ.
Deus é amor
Deus é amor. Quem permanece no amor permanece em Deus e Deus nele. Nós amamos porque Ele nos amou primeiro.
ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ.
ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.
ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.
ಒಬ್ಬನು, "ನಾನು ದೇವರನ್ನು ಪ್ರೀತಿಸುತ್ತೇನೆ," ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.
ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.
ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ.
ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ.
ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು.
ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ,
ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು."
Buscar a Deus
Buscareis o Senhor e o encontrareis quando o buscardes de todo o coração. Provai e vede que o Senhor é bom.
ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.
ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ;
ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.
ನಾನು ಯೆಹೋವ ದೇವರಿಗೆ, "ನೀವೇ ನನ್ನ ಕರ್ತ;
ನಿಮ್ಮನ್ನು ಬಿಟ್ಟು ನನಗಿಲ್ಲ ಒಳಿತು," ಎಂದು ಹೇಳಿದೆನು.
ಪರಲೋಕದಲ್ಲಿ ನನಗೆ ನೀವಲ್ಲದೆ ಮತ್ಯಾರಿದ್ದಾರೆ?
ಇಹಲೋಕದಲ್ಲಿ ನಿಮ್ಮನ್ನಲ್ಲದೆ ಇನ್ನಾರನ್ನೂ ನಾನು ಬಯಸುವುದಿಲ್ಲ.
ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ;
ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ನಡೆಸಿರಿ; ನನಗೆ ಮಾರ್ಗದರ್ಶಕರಾಗಿರಿ.
ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು
ಯೆಹೋವ ದೇವರ ಕೃಪೆಯನ್ನು ಹೊಂದುವನು.
Viver com Deus
Sê forte e corajoso, porque o Senhor teu Deus é contigo. Em Deus encontramos a razão de existir.
ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ," ಎಂದು ಹೇಳಿದರು.
ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.
ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು,
ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ನೀನಂತೂ ಹೆದರಬೇಡ;
ಏಕೆಂದರೆ ಯೆಹೋವ ದೇವರಾದ ನಾನೇ ನಿನಗೆ ಸಹಾಯ ಮಾಡುತ್ತೇನೆ,
ನಿನ್ನ ದೇವರಾಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ!
ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.
ಮೋಸಹೋಗಬೇಡಿರಿ, ದೇವರು ಪರಿಹಾಸ್ಯಕ್ಕೆ ಒಳಗಾಗುವವರಲ್ಲ. ಏಕೆಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.