Dia das crianças
As crianças são preciosas aos olhos de Deus. Jesus as acolheu, abençoou e ensinou que delas é o Reino dos Céus — modelos de fé, pureza e humildade.
Jesus e as crianças
Deixai vir a mim as crianças. Jesus abraçou, abençoou e honrou as crianças como modelo de fé para os adultos.
ಆದರೆ ಯೇಸು, "ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ" ಎಂದು ಹೇಳಿದನು.
ದೇವರ ರಾಜ್ಯದಲ್ಲಿ ದೊಡ್ಡವನು
ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, "ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?" ಎಂದು ಕೇಳಿದರು. ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ, ಅವರಿಗೆ, "ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.
ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು "ದಾವೀದನ ಕುಮಾರನಿಗೆ ಹೊಸನ್ನ" ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು. ಆತನಿಗೆ, "ಇವರು ಹೇಳುವುದನ್ನು ಕೇಳುತ್ತಿರುವೆಯಾ" ಎಂದು ಹೇಳಲು ಯೇಸು, "ಹೌದು, ಕೇಳುತ್ತಿದ್ದೇನೆ, ಆದರೆ ‘ಸಣ್ಣ ಮಕ್ಕಳ ಬಾಯಿಂದಲೂ ಮೊಲೆಕೂಸುಗಳ ಬಾಯಿಂದಲೂ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿರುವಿ’ ಎಂಬುದನ್ನು ನೀವು ಎಂದಾದರೂ ಓದಲಿಲ್ಲವೋ?" ಎಂದು ಕೇಳಿದನು.
ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ" ಎಂದು ಹೇಳಿದನು. ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ, "ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು" ಎಂದು ಹೇಳಿದನು.
Instruir e proteger
Instrui a criança no caminho de Deus. Elas são herança do Senhor — presentes sagrados que devemos educar com amor.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
ಮುಪ್ಪಿನಲ್ಲಿಯೂ ಓರೆಯಾಗರು.
ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;
ಗರ್ಭಫಲವು ಆತನ ಬಹುಮಾನವೇ.
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.
ತಂದೆತಾಯಿಗಳೂ ಮಕ್ಕಳೂ
ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, "ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ."
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ; ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.