Dia dos pais
O Dia dos Pais celebra o amor e o sacrifício paterno. A Bíblia honra os pais como provedores, protetores e guias espirituais que moldam as próximas gerações.
O pai que educa
Instrui a criança no caminho em que deve andar. O pai justo educa com amor, firmeza e o exemplo de uma vida íntegra.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು;
ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.
ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ;
ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.
ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ;
ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.
ನೀತಿವಂತನ ತಂದೆಯು ಬಹಳವಾಗಿ ಸಂತೋಷಪಡುವನು;
ಜ್ಞಾನಿಯಾದ ಮಗುವನ್ನು ಪಡೆದವನಿಗೆ ಅವನಿಂದ ಆನಂದವಾಗುವುದು.
ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ.
ಆತನ ಮಕ್ಕಳಿಗೆ ಆಶ್ರಯವು ಇರುವುದು.
Honra e alegria
Honra a teu pai e tua mãe. Os filhos são herança do Senhor, e a família que serve a Deus junta é inabalável.
ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.
ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು.
ಗರ್ಭಫಲವು ದೇವರ ಬಹುಮಾನ.
ಯೌವನದಲ್ಲಿ ಹುಟ್ಟಿದ ಮಕ್ಕಳು,
ಯುದ್ಧವೀರನ ಕೈಯಲ್ಲಿಯ ಬಾಣಗಳಂತಿದ್ದಾರೆ.
ಬಾಣಗಳನ್ನು ಬತ್ತಳಿಕೆಯಿಂದ
ತುಂಬಿಸಿಕೊಂಡಿರುವವರು ಧನ್ಯರು,
ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ
ಅವರು ನಾಚಿಕೆಪಡರು.
ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು," ಎಂದನು.
ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.
ಎದ್ದು ತನ್ನ ತಂದೆಯ ಬಳಿಗೆ ಹೋದನು.
"ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ, ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು, ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
"ಆದರೂ ಮಗನು ತಂದೆಗೆ, ‘ಅಪ್ಪಾ, ನಾನು ಪರಲೋಕಕ್ಕೆ ವಿರೋಧವಾಗಿಯೂ ನಿಮ್ಮ ಮುಂದೆಯೂ ಪಾಪಮಾಡಿದ್ದೇನೆ. ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಯಿಸಿಕೊಳ್ಳಲು ಯೋಗ್ಯನಲ್ಲ,’ ಎಂದನು.
"ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ. ಇದಲ್ಲದೆ ವಿಶೇಷ ಆಹಾರವನ್ನು ತಂದು ಕೊಯ್ದು ವಿಶೇಷ ಔತಣವನ್ನು ಬೇಗ ಸಿದ್ಧಮಾಡಿರಿ. ನಾವು ಉಂಡು ಸಂತೋಷಪಡೋಣ.