Dificuldades
As dificuldades são parte da vida, mas Deus é refúgio certo em todo tempo de angústia. A Bíblia promete que nenhuma adversidade pode separar os filhos de Deus do seu amor.
Deus é refúgio
Deus é nosso refúgio e fortaleza, socorro bem presente nas angústias. Nada poderá nos separar do amor de Cristo.
ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ;
ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.
ಆದ್ದರಿಂದ ಭೂಮಿಯು ಕಂಪಿಸಿದರೂ
ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,
ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ,
ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು.
"ನನ್ನ ಆಶ್ರಯವೂ, ನನ್ನ ಕೋಟೆಯೂ,
ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು."
ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ.
ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ.
ದೇವರು ನಮಗೆ ಆಶ್ರಯವಾಗಿದ್ದಾರೆ.
ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು,
ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು.
ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು,
ಏಕೆಂದರೆ ಯೆಹೋವ ದೇವರೇ,
ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.
ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ.
ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ.
ಮಹಾಸಾಗರದ ಶಬ್ದಕ್ಕಿಂತಲೂ,
ಸಮುದ್ರದ ಬಲವಾದ ಅಲೆಗಳಿಗಿಂತಲೂ
ಉನ್ನತದಲ್ಲಿರುವ ಯೆಹೋವ ದೇವರು ಬಲಿಷ್ಠರಾಗಿದ್ದಾರೆ.
ದೇವರು ಬಿರುಗಾಳಿಯನ್ನು ಶಾಂತ ಮಾಡಿದರು.
ಅದರ ತೆರೆಗಳು ನಿಂತುಹೋದವು.
ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು. ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ:
"ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ;
ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ."
ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ. ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ, ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.
Provisão nas dificuldades
O Senhor provê mesmo nos tempos mais difíceis. Ele sustentou Elias, protegeu Israel e cuida dos seus com fidelidade eterna.
ಯೆಹೋವ ದೇವರು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ, ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.
ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ,
ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಏರ್ಪಡಿಸಿದರು.
ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ,
ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು.
ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು;
ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.
ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ;
ಆದರೆ ನೀತಿವಂತನು ಕೈಬಿಟ್ಟಿರುವುದನ್ನಾಗಲಿ
ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆ ಬೇಡುವುದನ್ನಾಗಲಿ ಎಂದೂ ನಾನು ನೋಡಲಿಲ್ಲ.
ನಿರ್ದೋಷಿಗಳು ತಮ್ಮ ದಿವಸಗಳನ್ನು ಯೆಹೋವ ದೇವರ ಪರಾಮರಿಕೆಯಲ್ಲಿ ಕಳೆಯುವರು.
ನಿರಪರಾಧಿಯ ಬಾಧ್ಯತೆಯು ಯುಗಯುಗಕ್ಕೂ ಇರುವುದು.
ಆಪತ್ಕಾಲದಲ್ಲಿ ಅವರು ಕುಂದುವುದಿಲ್ಲ;
ಕ್ಷಾಮದ ದಿವಸಗಳಲ್ಲಿ ಸಮೃದ್ಧಿಯನ್ನು ಅನುಭವಿಸುವರು.
ಏಕೆಂದರೆ ನಾನು ಬಾಯಾರಿದ
ಭೂಮಿಯ ಮೇಲೆ ನೀರನ್ನು ಸುರಿಸುವೆನು.
ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ,
ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.
ನೀವು ದೀನರಿಗೆ ಕೋಟೆಯೂ,
ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ,
ಭೀಕರರ ಶ್ವಾಸವು ಬಿಸಿಲಿಗೆ ನೆರಳೂ,
ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ
ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.
ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು.
ನೀನು ಜಲರಾಶಿಯನ್ನು ದಾಟಿಹೋಗುವಾಗ,
ನಾನು ನಿನ್ನೊಂದಿಗಿರುವೆನು;
ನದಿಗಳನ್ನು ನೀನು ದಾಟುವಾಗ,
ಅವು ನಿನ್ನನ್ನು ಮುಳುಗಿಸುವುದಿಲ್ಲ;
ಬೆಂಕಿಯಲ್ಲಿ ನಡೆಯುವಾಗ,
ನೀನು ಸುಟ್ಟುಹೋಗುವುದಿಲ್ಲ;
ಜ್ವಾಲೆಯು ನಿನ್ನನ್ನು ದಹಿಸದು.
Força nas provas
Em tudo somos atribulados, mas não esmagados. O Senhor é bom e é fortaleza no dia da angústia — Ele conhce os seus.
ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಜಜ್ಜಿಹೋಗಲಿಲ್ಲ, ನಾವು ಚಂಚಲರಾಗಿದ್ದರೂ ನಿರಾಶರಾಗಲಿಲ್ಲ. ಹಿಂಸೆಗೆ ಒಳಪಟ್ಟರೂ ಕೈಬಿಟ್ಟವವರಲ್ಲ, ದಬ್ಬಿದವರಾದಾಗ್ಯೂ ನಾಶವಾಗಲಿಲ್ಲ.
ಯೆಹೋವ ದೇವರು ಒಳ್ಳೆಯವರು.
ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ.
ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.
ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ;
ಆದರೂ ಮೋಡವು ಅದರ ಭಾರದಿಂದ ಒಡೆದುಹೋಗುವುದಿಲ್ಲ.
ದೇವರು ತಮ್ಮ ಪೂರ್ಣಚಂದ್ರ ಸಿಂಹಾಸನವನ್ನು ಮರೆಮಾಡುತ್ತಾರೆ.
ಅದರ ಮುಂದೆ ಮೋಡವನ್ನು ಕವಿಸುತ್ತಾರೆ.
ಬೆಳಕು ಮತ್ತು ಕತ್ತಲುಗಳ ಸಂಧಿಸುವ ಸ್ಥಾನದಲ್ಲಿ,
ಸಮುದ್ರದ ಮೇಲೆ ಸುತ್ತಲೂ ವೃತ್ತ ಮೇರೆಯನ್ನು ಹಾಕಿದ್ದಾರೆ.
ನೀನು ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ;
ನಾಶ ಬಂದಾಗ ನೀನು ಭಯಪಡುವುದಿಲ್ಲ.
ಆಗ ಯೇಸು ಅವರಿಗೆ, "ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?" ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.
ಆದರೆ ಶಿಷ್ಯರು ಆಶ್ಚರ್ಯದಿಂದ, "ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!" ಎಂದರು.
ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ? ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ.
ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು.
ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವುದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವುದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡಲಾರದು.