Dinheiro
O dinheiro é ferramenta que pode ser usada para o bem ou para o mal. A Bíblia nos ensina a administrar recursos com sabedoria, generosidade e temor ao Senhor.
Perspectiva bíblica
Guardai-vos da avareza. A vida não consiste na abundância de bens. O dinheiro é servo, nunca senhor.
ಜನರಿಗೆ, "ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ" ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.
ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.
ನಿನ್ನ ದೃಷ್ಟಿಯು ಐಶ್ವರ್ಯದ ಮೇಲೆ ಎರಗುತ್ತದೋ?
ಐಶ್ವರ್ಯವು ಅಷ್ಟರೊಳಗೆ ಮಾಯವಾಗುವುದು,
ಆಕಾಶದ ಕಡೆಗೆ ಹಾರುವ ಹದ್ದಿನಂತೆ,
ಅದು ರೆಕ್ಕೆಗಳನ್ನು ಕಟ್ಟಿಕೊಂಡಿದೆ.
ದುಡ್ಡಿನಾಶೆಯಿಂದ ದುಡಿಯಬೇಡ,
ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ
ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ.
ಇದೂ ಸಹ ವ್ಯರ್ಥವೇ.
Administrar com sabedoria
Honra ao Senhor com as tuas primícias. O sábio administra seus recursos com prudência e visão de eternidade.
ನಿನ್ನ ಆದಾಯದಿಂದಲೂ, ಬೆಳೆಯ ಪ್ರಥಮಫಲದಿಂದಲೂ
ಯೆಹೋವನನ್ನು ಸನ್ಮಾನಿಸು.
ಯೆಹೋವನ ಆಶೀರ್ವಾದವು ಭಾಗ್ಯದಾಯಕವು,
ಅದು ವ್ಯಸನವನ್ನು ಸೇರಿಸದು.
ಅನ್ಯಾಯದ ಸಂಪತ್ತು ವ್ಯರ್ಥ,
ಧರ್ಮವು ಮೃತ್ಯುವಿನಿಂದ ರಕ್ಷಿಸುವಂತದ್ದು.
ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು,
ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು,
ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ,
ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ
ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.
ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ,
ಬಡವನಾಗಿರುವುದು ಉತ್ತಮ.
ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು,
ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.
Perigos e armadilhas
Quem quer enriquecer cai em tentação. Fuja do amor ao dinheiro e busque contentamento no Senhor.
ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.
ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. "ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ" ಎಂದು ದೇವರು ತಾನೇ ಹೇಳಿದ್ದಾನೆ.
ಧನವು ಕೋಪದ ದಿನದಲ್ಲಿ ವ್ಯರ್ಥ,
ಧರ್ಮವು ಮರಣವಿಮೋಚಕ.
ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು,
ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
Tudo vem de Deus
De ti vem tudo, e das tuas mãos to damos. Os tributos são devidos — dai a César o que é de César e a Deus o que é de Deus.
ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.
ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
ಈ ಕಾರಣದಿಂದಲೇ ನೀವು ಕಂದಾಯವನ್ನು ಕೂಡ ಕೊಡುತ್ತೀರಿ. ಯಾಕೆಂದರೆ ಕಂದಾಯ ಸಂಗ್ರಹಿಸುವವರು ದೇವರ ಸೇವಕರಾಗಿದ್ದು ಆ ಕೆಲಸದಲ್ಲಿಯೇ ನಿರತರಾಗಿರುತ್ತಾರೆ.
ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.
ದುಷ್ಟರ ತೋಳುಗಳು ಮುರಿದುಹೋಗುವವು;
ನೀತಿವಂತರನ್ನು ಯೆಹೋವನೇ ಉದ್ಧರಿಸುವನು.
ಸರ್ವಸಂಪತ್ತಿನಲ್ಲಿ ಹೇಗೋ,
ಹಾಗೆಯೇ ನಿನ್ನ ಕಟ್ಟಳೆಯ ಮಾರ್ಗದಲ್ಲಿ ಆನಂದಿಸುತ್ತೇನೆ.