Dinheiro
O dinheiro é ferramenta que pode ser usada para o bem ou para o mal. A Bíblia nos ensina a administrar recursos com sabedoria, generosidade e temor ao Senhor.
Perspectiva bíblica
Guardai-vos da avareza. A vida não consiste na abundância de bens. O dinheiro é servo, nunca senhor.
ಅನಂತರ ಯೇಸು ಜನರಿಗೆ, "ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ," ಎಂದರು.
ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು.
"ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.
ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ.
ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು
ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.
ಐಶ್ವರ್ಯವಂತನಾಗುವುದಕ್ಕೆ ಪ್ರಯಾಸಪಡಬೇಡ;
ಅದಕ್ಕಾಗಿ ಸ್ವಬುದ್ಧಿಯನ್ನೇ ಆಶ್ರಯಿಸಬೇಡ.
ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು.
ಆಸ್ತಿಯನ್ನು ಪ್ರೀತಿಸುವವನು ತನ್ನ ಆದಾಯದಿಂದ ತೃಪ್ತಿಗೊಳ್ಳುವುದಿಲ್ಲ.
ಇದೂ ಸಹ ವ್ಯರ್ಥವೇ.
Administrar com sabedoria
Honra ao Senhor com as tuas primícias. O sábio administra seus recursos com prudência e visão de eternidade.
ನಿನ್ನ ಆಸ್ತಿಯಿಂದಲೂ
ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.
ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು;
ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.
ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ,
ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ.
ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು;
ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.
ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು!
ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.
ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ;
ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.
ತೊಂದರೆಯಿಂದ ಕೂಡಿದ ದೊಡ್ಡ ಸಂಪತ್ತಿಗಿಂತ
ಯೆಹೋವ ದೇವರ ಭಯದಿಂದ ಕೂಡಿದ ಅಲ್ಪವೇ ಮೇಲು.
ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ.
ಬಡವನು ಸುಳ್ಳುಗಾರನಿಗಿಂತ ಲೇಸು.
ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ.
ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ.
ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ.
Perigos e armadilhas
Quem quer enriquecer cai em tentação. Fuja do amor ao dinheiro e busque contentamento no Senhor.
ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ.
ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.
ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ,
"ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ,
ಎಂದಿಗೂ ತೊರೆಯುವುದಿಲ್ಲ!"
ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ;
ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.
ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ
ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.
Tudo vem de Deus
De ti vem tudo, e das tuas mãos to damos. Os tributos são devidos — dai a César o que é de César e a Deus o que é de Deus.
"ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.
ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.
ಇದರ ನಿಮಿತ್ತವಾಗಿಯೇ ನೀವು ತೆರಿಗೆಯನ್ನು ಪಾವತಿ ಮಾಡುತ್ತೀರಿ. ಏಕೆಂದರೆ, ಅಧಿಕಾರಿಗಳು ಇದರಲ್ಲಿಯೇ ನಿರತರಾಗಿರುವ ದೇವರ ಸೇವಕರಾಗಿರುತ್ತಾರೆ.
ದುಷ್ಟರ ಐಶ್ವರ್ಯಕ್ಕಿಂತ
ನೀತಿವಂತರ ಅಲ್ಪವೇ ಲೇಸು.
ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು,
ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.
ಮಹಾ ಸಂಪತ್ತಿನಲ್ಲಿ ಒಬ್ಬ ವ್ಯಕ್ತಿ ಆನಂದಿಸುವ ಹಾಗೆ
ನಾನು ನಿಮ್ಮ ಶಾಸನಗಳನ್ನು ಅನುಸರಿಸುವುದರಲ್ಲಿ ಆನಂದಿಸುವೆನು.