Dívidas
As dívidas podem escravizar, mas a Bíblia nos ensina princípios de sabedoria financeira: não se endividar imprudentemente, pagar o que se deve e confiar em Deus como provedor.
O devedor é servo do credor
O rico domina sobre o pobre, e o que toma emprestado é servo do que empresta. A Bíblia convida à liberdade financeira.
ಬಲ್ಲಿದನು ಬಡವನಿಗೆ ಒಡೆಯ,
ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
ಉಪಕಾರಮಾಡುವುದಕ್ಕೆ ನಿನ್ನಿಂದ ಸಾಧ್ಯವಾಗುವಾಗ
ಹೊಂದತಕ್ಕವರಿಗೆ ಅದನ್ನು ತಪ್ಪಿಸಬೇಡ.
ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು,
ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
"ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.
Princípios financeiros
Pagai a todos o que lhes é devido. Deus promete que o justo não será desamparado e que a bênção virá sobre os obedientes.
ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
ಧರ್ಮಶಾಸ್ತ್ರವೆಲ್ಲಾ ಪ್ರೀತಿಯಿಂದಲೇ ನೆರವೇರುವುದು ಎಂಬ ಬೋಧನೆ
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು;
ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?
ನಿನ್ನನ್ನು ಬೇಡುವವರೆಲ್ಲರಿಗೂ ಕೊಡು; ನಿನ್ನ ಸೊತ್ತನ್ನು ಕಸಿದುಕೊಳ್ಳುವವನನ್ನು ಹಿಂದಕ್ಕೆ ಕೊಡೆಂದು ಕೇಳಬೇಡ.
ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ
ನಮ್ಮ ತಪ್ಪುಗಳನ್ನು ಕ್ಷಮಿಸು.
Contentamento
Seja o vosso viver sem ganância, contentando-vos com o que tendes. O Senhor é suficiente — não nos desamparará.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. "ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ" ಎಂದು ದೇವರು ತಾನೇ ಹೇಳಿದ್ದಾನೆ.
ನಿಮ್ಮ ದೇವರಾದ ಯೆಹೋವನು ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ. ನೀವು ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.