Dívidas
As dívidas podem escravizar, mas a Bíblia nos ensina princípios de sabedoria financeira: não se endividar imprudentemente, pagar o que se deve e confiar em Deus como provedor.
O devedor é servo do credor
O rico domina sobre o pobre, e o que toma emprestado é servo do que empresta. A Bíblia convida à liberdade financeira.
ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ;
ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.
ನಿನಗೆ ಶಕ್ತಿಯಿರುವಾಗಲೇ ಇತರರಿಗೆ ಉಪಕಾರಮಾಡು
ಒಳಿತು ಮಾಡುವುದನ್ನು ನಿನ್ನಲ್ಲಿಯೇ ಇಟ್ಟುಕೊಳ್ಳಬೇಡ.
ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು;
ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.
"ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.
Princípios financeiros
Pagai a todos o que lhes é devido. Deus promete que o justo não será desamparado e que a bênção virá sobre os obedientes.
ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.
ದುಷ್ಟನು ಸಾಲ ಮಾಡಿ ಹಿಂದಿರುಗಿ ಕೊಡದೆ ಹೋಗುವನು.
ಆದರೆ ನೀತಿವಂತನು ಧಾರಾಳವಾಗಿ ಕೊಡುತ್ತಾನೆ.
"ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ?
ನಿನ್ನಿಂದ ಕೇಳುವ ಪ್ರತಿಯೊಬ್ಬರಿಗೂ ಕೊಡು, ನಿನ್ನ ಸೊತ್ತನ್ನು ತೆಗೆದುಕೊಳ್ಳುವವನಿಂದ, ಅವುಗಳನ್ನು ತಿರುಗಿ ಕೇಳಬೇಡ.
ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ,
ನಮ್ಮ ಸಾಲಗಳನ್ನು ಕ್ಷಮಿಸಿರಿ.
Contentamento
Seja o vosso viver sem ganância, contentando-vos com o que tendes. O Senhor é suficiente — não nos desamparará.
ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ,
"ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ,
ಎಂದಿಗೂ ತೊರೆಯುವುದಿಲ್ಲ!"
ನಿಶ್ಚಯವಾಗಿ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದಂತೆ ನಿನ್ನನ್ನು ಆಶೀರ್ವದಿಸುವರು. ನೀವು ಸಾಲ ತೆಗೆದುಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲ ಕೊಡುವಿರಿ. ಅನೇಕ ಜನಾಂಗಗಳನ್ನು ಆಳುವಿರಿ, ಅವರು ನಿಮ್ಮನ್ನು ಆಳುವುದಿಲ್ಲ.