Doença
A doença é realidade humana que a Bíblia confronta com compaixão e poder. Jesus curou toda enfermidade e prometeu ouvir a oração da fé pelos enfermos.
Jesus, o curador
Jesus percorreu toda a Galileia curando toda enfermidade e doença entre o povo. Pelo seu nome, curas continuam acontecendo.
ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.
ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.
ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.
ಸಂಜೆಯಾದಾಗ, ದೆವ್ವಹಿಡಿದ ಅನೇಕರನ್ನು ಜನರು ಯೇಸುವಿನ ಬಳಿಗೆ ಕರೆತಂದರು. ಯೇಸು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ, ಎಲ್ಲಾ ರೋಗಪೀಡಿತರನ್ನೂ ಸ್ವಸ್ಥಪಡಿಸಿದರು. ಹೀಗೆ,
"ಅವರು ತಾವೇ ನಮ್ಮ ಬಲಹೀನತೆಗಳನ್ನು ತೆಗೆದುಕೊಂಡು,
ನಮ್ಮ ರೋಗಗಳನ್ನು ಹೊತ್ತುಕೊಂಡರು,"
ಎಂದು ಯೆಶಾಯ ಪ್ರವಾದಿಯು ಹೇಳಿದ್ದು ನೆರವೇರಿತು.
ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.
"ಆಗ ಆ ನೀತಿವಂತರು ಉತ್ತರವಾಗಿ ನನಗೆ, ‘ಕರ್ತನೇ, ನೀನು ಯಾವಾಗ ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವುದಕ್ಕೆ ಕೊಟ್ಟೆವು? ನೀನು ಪರದೇಶಿಯಾಗಿರುವುದನ್ನು ನಾವು ಯಾವಾಗ ಕಂಡು ನಿನಗೆ ಆಶ್ರಯ ಕೊಟ್ಟೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನ ಬಳಿಗೆ ಬಂದೆವು?’ ಎಂದು ಕೇಳುವರು.
"ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.
ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, "ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ," ಎಂದು ಹೇಳಿದರು.
ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.
ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು, ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.
Promessas de cura
Eu sou o Senhor que te sara. As Escrituras prometem cura para o corpo e para a alma aos que confiam em Deus.
ದೇವರು, "ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ," ಎಂದು ಪ್ರಕಟಪಡಿಸಿದರು.
ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.
ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.
ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು.
ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು.
ಏಕೆಂದರೆ, ನೀವೇ ನನಗೆ ಸ್ತುತ್ಯರು.
ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ.
ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.
ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ,
ಅವರ ಗಾಯಗಳನ್ನು ಕಟ್ಟುತ್ತಾರೆ.
ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ.
ಅವರು ದೀನರನ್ನು ಎತ್ತುತ್ತಾರೆ.
ನೀತಿವಂತರನ್ನು ಪ್ರೀತಿಸುತ್ತಾರೆ.
ಬಡವರನ್ನು ಪರಾಮರಿಸುವವರು ಧನ್ಯರು;
ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.
ಯೆಹೋವ ದೇವರು ಅವರನ್ನು ಕಾಪಾಡಿ ಸುರಕ್ಷಿತವಾಗಿಡುವರು;
ಅವರು ಭೂಮಿಯಲ್ಲಿ ಧನ್ಯರಾಗಿರುವರು;
ದೇವರು ಅವರ ಶತ್ರುಗಳ ಇಚ್ಛೆಗೆ ಅವರನ್ನು ಒಪ್ಪಿಸಿಕೊಡರು.
ಬಡವರನ್ನು ಪರಾಮರಿಸುವವರನ್ನು ಯೆಹೋವ ದೇವರು ವ್ಯಾಧಿಯ ಮಂಚದಲ್ಲಿ ಬಲಪಡಿಸುವರು;
ಅವರ ಅಸ್ವಸ್ಥತೆಯನ್ನು ಯೆಹೋವ ದೇವರು ಹೋಗಲಾಡಿಸಿ ಮರುಸ್ಥಾಪಿಸುವರು.
ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ನೀನು ಆರೋಗ್ಯವೂ ಅಭಿವೃದ್ಧಿಯೂ ಹೊಂದಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
Oração pelos doentes
A oração da fé salvará o enfermo. Confessai as ofensas uns aos outros e orai uns pelos outros para serdes curados.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.
ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ. ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.
ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.
ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು. ಅದು ನನ್ನಿಂದ ತಗೆದುಹಾಕಬೇಕೆಂದು ನಾನು ಮೂರು ಸಾರಿ ಕರ್ತ ಯೇಸುವನ್ನು ಬೇಡಿಕೊಂಡೆನು. ಅದಕ್ಕೆ ಕರ್ತ ಯೇಸು, "ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು," ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು. ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.
Esperança na aflição
Ele tomou sobre si as nossas enfermidades. Mesmo na doença, o coração alegre serve de bom remédio e Deus dá esperança.
ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು;
ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು.
ಆದರೂ ನಾವು ಆತನನ್ನು ಪೆಟ್ಟು ತಿಂದವನು,
ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.
ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು;
ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು.
ಆದರೂ ನಾವು ಆತನನ್ನು ಪೆಟ್ಟು ತಿಂದವನು,
ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.
ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ,
ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು.
ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು.
ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.
ಹರ್ಷಹೃದಯವು ಒಳ್ಳೆಯ ಔಷಧ;
ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು;
ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?
ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ;
ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.
ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ,
ದಿನವೆಲ್ಲಾ ನರಳುವುದರಿಂದ
ನನ್ನ ಎಲುಬುಗಳು ಸವೆದು ಹೋದವು.
ನಾನು ಮುಂಚೆ ನಿಮಗೆ ಸುವಾರ್ತೆ ಸಾರಿದ್ದು, ನನ್ನ ಶರೀರದ ಬಲಹೀನತೆಯಿಂದ ಎಂದು ನೀವು ಬಲ್ಲಿರಿ. ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ.
ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು.
‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!" ಎಂದು ಹೇಳಿತು.