Domínio próprio
O domínio próprio é fruto do Espírito e marca de maturidade espiritual. A Bíblia ensina que quem governa o próprio espírito é melhor do que quem conquista uma cidade.
Fruto do Espírito
O fruto do Espírito inclui domínio próprio. A graça de Deus nos ensina a viver de maneira sóbria e justa neste mundo.
ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು; ಅದು ಭಕ್ತಿಹೀನತೆಯನ್ನೂ, ಲೋಕದ ಆಸೆಗಳನ್ನೂ ತ್ಯಜಿಸಿ ಭಾಗ್ಯಕರವಾದ ನಿರೀಕ್ಷೆಯನ್ನು, ಅಂದರೆ ಮಹಾ ದೇವರ ಮತ್ತು ನಮ್ಮ ರಕ್ಷಕನಾದ ಯೇಸುಕ್ರಿಸ್ತನ ಮಹಿಮೆಪೂರ್ಣವಾದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇಹಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ, ನೀತಿವಂತರಾಗಿಯೂ, ಭಕ್ತಿಯುಳ್ಳವರಾಗಿಯೂ ಜೀವಿಸಬೇಕೆಂದು ನಮಗೆ ಬೋಧಿಸುತ್ತದೆ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ, ಜ್ಞಾನಕ್ಕೆ ದಮೆಯನ್ನೂ, ದಮೆಗೆ ತಾಳ್ಮೆಯನ್ನೂ, ತಾಳ್ಮೆಗೆ ಭಕ್ತಿಯನ್ನೂ, ಭಕ್ತಿಗೆ ಸಹೋದರ ಸ್ನೇಹವನ್ನೂ, ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.
Governar a si mesmo
Melhor é o que domina o seu espírito do que o que toma uma cidade. A cidade sem muros é o homem sem domínio próprio.
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ,
ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.
ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು
ಗೋಡೆ ಬಿದ್ದ ಹಾಳೂರಿಗೆ ಸಮಾನ.
ಮೂಢನು ತನ್ನ ಕೋಪವನ್ನೆಲ್ಲಾ ತೋರಿಸುವನು,
ಜ್ಞಾನಿಯು ತನ್ನ ಕೋಪವನ್ನು ತಡೆದು ಶಮನಪಡಿಸಿಕೊಳ್ಳುವನು.
ಮಾತಾಳಿಗೆ ಪಾಪ ತಪ್ಪದು,
ಮೌನಿಯು ವಿವೇಕಿ.
ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ, ಆದರೂ ಒಬ್ಬನು ಮಾತ್ರ ಜಯಮಾಲೆಯನ್ನು ಪಡೆಯುತ್ತಾನೆ ಎಂಬುದು ನಿಮಗೆ ತಿಳಿಯದೋ? ಅವರಂತೆ ನೀವೂ ಸಹ ಬಹುಮಾನವನ್ನು ಗೆಲ್ಲಬೇಕೆಂದು ಓಡಿರಿ. ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ. ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ. ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.
ಅವರು ಸಂಯಮಯಿಲ್ಲದವರಾದರೆ ಮದುವೆಮಾಡಿಕೊಳ್ಳಲಿ. ಯಾಕೆಂದರೆ ಕಾಮತಾಪಪಡುವುದಕ್ಕಿಂತ ಮದುವೆಮಾಡಿಕೊಳ್ಳುವುದು ಉತ್ತಮ.
ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
Disciplina e vigilância
Sede sóbrios e vigilantes. O diabo anda em derredor como leão rugidor. A sobriedade nos protege e fortalece.
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ.
ದೇವರ ವರಗಳ ಒಳ್ಳೆಯ ನಿರ್ವಾಹಕನು
ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ.
ಪರಿವರ್ತನೆಗೊಂಡ ಜೀವಿತಗಳು
ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ. ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು. ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು. ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ. ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು.
ದೇವರನ್ನರಿಯದ ಅನ್ಯಜನರಂತೆ ಕಾಮಾಭಿಲಾಷೆಗಳಿಗೆ ಒಳಗಾಗದೆ, ನಿಮ್ಮಲ್ಲಿ ಪ್ರತಿಯೊಬ್ಬನು ಪವಿತ್ರವಾದ ಮನಸ್ಸಿನಿಂದಲೂ ಘನತೆಯಿಂದಲೂ ಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು.
O senhorio de Cristo
Todo domínio pertence a Cristo. Ele é Senhor dos senhores e Rei dos reis — e nos capacita a viver em santidade.
ಆತನ ರಾಜ್ಯದ ಸರ್ವಸ್ಥಳಗಳಲ್ಲಿರುವ ಎಲ್ಲಾ ಸೃಷ್ಟಿಗಳೇ,
ಯೆಹೋವನನ್ನು ಕೊಂಡಾಡಿರಿ.
ನನ್ನ ಮನವೇ, ಯೆಹೋವನನ್ನು ಕೊಂಡಾಡು.
ನಿನ್ನ ರಾಜ್ಯವು ಶಾಶ್ವತವಾಗಿದೆ,
ನಿನ್ನ ಆಳ್ವಿಕೆಯು ತಲತಲಾಂತರಕ್ಕೂ ಇರುವುದು.
ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.
ಆತನ ಮಹತ್ತುಗಳು ಎಷ್ಟೋ ಅತಿಶಯ!
ಆತನ ಅದ್ಭುತಗಳು ಎಷ್ಟೋ ವಿಶೇಷ!
ಆತನ ರಾಜ್ಯವು ಶಾಶ್ವತರಾಜ್ಯ,
ಆತನ ಆಳ್ವಿಕೆಯು ತಲತಲಾಂತರಕ್ಕೂ ಸ್ಥಿರವಾಗಿ ನಿಲ್ಲುವುದು."
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು;
ಅದ್ಭುತ ಸ್ವರೂಪನು, ಆಲೋಚನಾ ಕರ್ತನು,
ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ,
ಸಮಾಧಾನದ ಪ್ರಭು ಎಂಬುದು ಆತನ ಹೆಸರು.
ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು.
ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ
ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು.
ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು. ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.
ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ. ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.
ನಮಗೆ ತಿಳಿದಿರುವಂತೆ, ಕ್ರಿಸ್ತನು ಸತ್ತ ಮೇಲೆ ಜೀವಿತನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ, ಮರಣವು ಆತನ ಮೇಲೆ ಆಳ್ವಿಕೆ ನಡಿಸುವುದಿಲ್ಲ.
ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು. ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.
ಆದಾಮನಿಂದ ಹೇಗೆ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಯೇಸು ಕ್ರಿಸ್ತನಿಂದ ಎಲ್ಲರೂ ಬದುಕುವವರಾದರು. ಆದರೆ ಪ್ರತಿಯೊಬ್ಬನು ತನ್ನ ಕ್ರಮದಲ್ಲಿ ಎದ್ದುಬರುವನು. ಕ್ರಿಸ್ತನು ಪ್ರಥಮಫಲವಾದನು; ತರುವಾಯ ಕ್ರಿಸ್ತನಿಗೆ ಸೇರಿದವರು ಆತನ ಬರೋಣದಲ್ಲಿ ಜೀವವುಳ್ಳವರಾಗಿ ಎದ್ದು ಬರುವರು. ಅನಂತರ ಆತನು ಎಲ್ಲಾ ದೊರೆತನವನ್ನೂ, ಎಲ್ಲಾ ಅಧಿಕಾರವನ್ನೂ ಮತ್ತು ಬಲವನ್ನೂ ನಿರ್ಮೂಲಗೊಳಿಸಿ ತಂದೆ ದೇವರಿಗೆ ರಾಜ್ಯವನ್ನು ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು. ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.
"ಆತನಲ್ಲಿ ಪ್ರಭುತ್ವವೂ ಭೀಕರತ್ವವೂ ಉಂಟು,
ತನ್ನ ಉನ್ನತ ಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವನು ಆತನೇ.