Encorajamento
O encorajamento é uma das vocações mais lindas do cristão. A Bíblia transborda de palavras de ânimo: não temas, levanta-te, Eu sou contigo. Deus nos encoraja para encorajarmos outros.
Não temas
Deus diz repetidamente: não temas, Eu sou contigo. Ele fortalece, sustenta e caminha ao nosso lado em cada desafio.
ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು.
ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.
ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು,
ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ,
ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.
ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ;
ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.
"ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು;
ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.
"ವಿಜ್ಞಾಪಿಸಿಕೊಳ್ಳದವರಿಗೂ ಪ್ರಸನ್ನನಾಗಿದ್ದೆನು, ನನ್ನನ್ನು ಹುಡುಕದವರಿಗೂ ಸಿಕ್ಕಿದೆನು,
ನನ್ನ ನಾಮವನ್ನೆತ್ತಿ ಪ್ರಾರ್ಥಿಸದ ಜನಾಂಗಕ್ಕೂ, ‘ಇಗೋ, ನಾನಿದ್ದೇನೆ! ನಾನಿದ್ದೇನೆ’ ಎನ್ನುತ್ತಿದ್ದೆನು.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
ಅವರು ಓಡಿ ದಣಿಯರು, ನಡೆದು ಬಳಲರು.
ಆಗ, "ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?" ಎಂಬ ಕರ್ತನ ನುಡಿಯನ್ನು ಕೇಳಿ, "ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು" ಎಂದೆನು.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು" ಎಂದು ಹೇಳಿದನು.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು" ಎಂದು ಹೇಳಿದನು.
ಅದಕ್ಕೆ ಜನರು, "ಯೆಹೋವನ ಸೇವೆಯನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವುದು ನಮಗೆ ದೂರವಾಗಿರಲಿ. ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನು ನಮ್ಮ ಪೂರ್ವಿಕರನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ, ನಾವೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನಲ್ಲವೇ.
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ" ಎಂದು ಹೇಳಿದನು.
ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು" ಎಂದು ಹೇಳಿದನು.
Deus está conosco
Se Deus é por nós, quem será contra nós? Tudo posso naquele que me fortalece. Ele nos encoraja pela sua presença.
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.
ಆ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮ್ಮನ್ನು ಆಶೀರ್ವದಿಸಲಿ.
ನನ್ನ ಮುಖಾಂತರ ನಿಮಗೆ ಆತ್ಮೀಕ ವರವೇನಾದರೂ ದೊರಕಿ ನೀವು ದೃಢವಾಗುವುದಕ್ಕೋಸ್ಕರ ಅಂದರೆ ನಾನು ನಿಮ್ಮ ನಂಬಿಕೆಯಿಂದ ಮತ್ತು ನೀವು ನನ್ನ ನಂಬಿಕೆಯಿಂದ ಸಹಾಯ ಹೊಂದಿ ಈ ಪ್ರಕಾರ ನಿಮ್ಮೊಂದಿಗೆ ನಾನು ಧೈರ್ಯಗೊಳ್ಳುವುದಕ್ಕೋಸ್ಕರ ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
ಹೇಗೆಂದರೆ ಕ್ಷಣಮಾತ್ರವಿರುವ ನಮ್ಮ ಈ ಸ್ವಲ್ಪ ಸಂಕಟವು ಅತ್ಯಂತಾಧಿಕವಾಗಿ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಅತಿಶ್ರೇಷ್ಟ ತೇಜಸ್ಸನ್ನು ದೊರಕಿಸುತ್ತದೆ.
ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ. ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ. ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ. ನಾವು ನಮ್ಮನ್ನು ಮತ್ತೆ, ಮತ್ತೆ ನಿಮ್ಮೆದುರು ಹೊಗಳಿಕೊಳ್ಳುವುದಿಲ್ಲ; ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಯನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ. ನಮಗೆ ಬುದ್ಧಿಭ್ರಮಣೆಯಾಗಿದ್ದರೆ ಅದು ದೇವರ ಮಹಿಮೆಗಾಗಿಯೇ; ಹಾಗೂ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ಪ್ರಯೋಜನಕ್ಕಾಗಿಯೇ. ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ. ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು. ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ. ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು. ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ; ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.
ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ. ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.
ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವ ದೇವರೂ ಆಗಿದ್ದು, ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲ್ಲಿ ನಮ್ಮನ್ನು ಸಂತೈಸುವವನಾಗಿದ್ದಾನೆ. ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಬಿದ್ದಿರುವವರನ್ನು ಸಂತೈಸುವುದಕ್ಕೆ ಶಕ್ತರಾಗುತ್ತೇವೆ.
Ânimo nas lutas
No mundo tereis aflições, mas tende bom ânimo — Eu venci o mundo. O Senhor é refúgio seguro em toda tribulação.
ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಎಂದು ಹೇಳಿದನು.
ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ" ಎಂದು ಹೇಳಿದನು.
"ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
"ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
Promessas de conforto
Vinde a mim os cansados e sobrecarregados. Lança sobre Ele tuas ansiedades, pois Ele cuida de ti.
"ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.
ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.
ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು;
ಆತನು ನಿನ್ನನ್ನು ಉದ್ಧಾರಮಾಡುವನು.
ನೀತಿವಂತನನ್ನು ಎಂದಿಗೂ ಕದಲಗೊಡಿಸನು.
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ,
ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು;
ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ;
ನಾನು ಯಾರಿಗೆ ಭಯಪಟ್ಟೆನು?
ಯೆಹೋವನು ನನ್ನ ಪ್ರಾಣದ ಆಧಾರವು;
ನಾನು ಯಾರಿಗೆ ಹೆದರೇನು?
ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು;
ನಿನ್ನ ಹೃದಯವು ಧೈರ್ಯದಿಂದಿರಲಿ;
ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
ಯೆಹೋವನನ್ನು ನಿರೀಕ್ಷಿಸುವವರೇ, ದೃಢವಾಗಿರ್ರಿ;
ನಿಮ್ಮ ಹೃದಯವು ಧೈರ್ಯದಿಂದಿರಲಿ.
ಯೆಹೋವನು, "ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು;
ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು" ಎಂದು ಅನ್ನುತ್ತಾನಲ್ಲಾ.
ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ;
ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಆದುದರಿಂದ ಭೂಮಿಯು ಮಾರ್ಪಟ್ಟರೂ,
ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ,
ನಮಗೇನೂ ಭಯವಿಲ್ಲ.
ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು?
ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ
ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.
ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು;
ದೇವರನ್ನು ನಂಬಿ ನಿರ್ಭಯದಿಂದಿರುವೆನು.
ನರಪ್ರಾಣಿಗಳು ನನಗೆ ಏನು ಮಾಡಾರು?
ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ.
ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು;
ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.
ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ;
ನನ್ನ ಸಹಾಯವು ಎಲ್ಲಿಂದ ಬರುವುದು?
ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ,
ನನ್ನ ಸಹಾಯವು ಬರುತ್ತದೆ.
ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ;
ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.
ಯೆಹೋವನು ಕುಗ್ಗಿದವರಿಗೆ ಆಶ್ರಯವೂ,
ಆಪತ್ಕಾಲದಲ್ಲಿ ದುರ್ಗವೂ ಆಗಿರುವನು.
ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು
ನಿನ್ನಲ್ಲಿ ಭರವಸವಿಡುವರು;
ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ.
ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ.
Encorajar uns aos outros
Encorajai-vos mutuamente e edificai-vos uns aos outros. Não desanimemos — a bondade do Senhor é nova a cada manhã.
ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುತ್ತಿರಬೇಕೆಂತಲೂ ಸತ್ಕಾರ್ಯಮಾಡಬೇಕೆಂತಲೂ ಒಬ್ಬರನ್ನೊಬ್ಬರು ಹುರಿದುಂಬಿಸೋಣ. ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. "ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ" ಎಂದು ದೇವರು ತಾನೇ ಹೇಳಿದ್ದಾನೆ. ಆದ್ದರಿಂದ, "ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?" ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.
ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, "ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.
ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು;
ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು;
ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು;
ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.
ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.
ಶ್ರಮೆಯಿಂದ ಸಮೃದ್ಧಿ,
ಹರಟೆಯಿಂದ ಕೊರತೆ.
ಯೇಸು ಅವರಿಗೆ, "ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು" ಎಂದು ಹೇಳಿದನು. ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
Deus chama pelo nome
Ao longo da Bíblia, Deus chamou seus servos pelo nome — Abraão, Moisés, Samuel, Paulo — encorajando cada um pessoalmente.
ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, "ಯಾಕೋಬನೇ, ಯಾಕೋಬನೇ" ಎಂದು ಕರೆಯಲು, ಅವನು, "ಇಗೋ ಇದ್ದೇನೆ" ಎಂದನು.
ಆ ಕನಸಿನಲ್ಲಿ ದೇವದೂತನು, ‘ಯಾಕೋಬನೇ’ ಎಂದು ಕರೆಯಲು ನಾನು, ‘ಇದ್ದೇನೆ’ ಎಂದು ಹೇಳಿದಾಗ
ಆಗ ಯೆಹೋವನ ದೂತನು ಆಕಾಶದೊಳಗಿನಿಂದ, "ಅಬ್ರಹಾಮನೇ, ಅಬ್ರಹಾಮನೇ" ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು, "ಇಗೋ, ಇದ್ದೇನೆ" ಎಂದನು.
ಅವನು ಅದನ್ನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವನು ಕಂಡನು. ಆಗ ದೇವರು ಆ ಪೊದೆಯೊಳಗಿಂದ "ಮೋಶೆಯೇ, ಮೋಶೆಯೇ" ಎಂದು ಅವನನ್ನು ಕರೆದನು. ಅದಕ್ಕೆ ಮೋಶೆ, "ಇಗೋ ಇದ್ದೇನೆ" ಅಂದನು.
ಆದರೆ ಏಲಿಯು, "ನನ್ನ ಮಗನೇ, ಸಮುವೇಲನೇ" ಎಂದು ಕರೆಯಲು ಅವನು, "ಇಗೋ, ಇದ್ದೇನೆ" ಎಂದನು.
ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ; "ಅನನೀಯನೇ," ಎಂದು ಅವನನ್ನು ಕರೆಯಲು, ಅವನು; "ಕರ್ತನೇ, ಇಗೋ, ಇದ್ದೇನೆ" ಅಂದನು.
ಆಗ ಮರಿಯಳು "ಇಗೋ, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗಾಗಲಿ" ಅಂದಳು. ಆ ಮೇಲೆ ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
ಐದು ಗುಬ್ಬಿಗಳನ್ನು ಎರಡು ದುಡ್ಡಿಗೆ ಮಾರುತ್ತಾರಲ್ಲ? ಆದಾಗ್ಯೂ ಅವುಗಳಲ್ಲಿ ಒಂದನ್ನೂ ದೇವರು ಮರೆತುಹೋಗುವುದಿಲ್ಲ. ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.