Encorajamento
O encorajamento é uma das vocações mais lindas do cristão. A Bíblia transborda de palavras de ânimo: não temas, levanta-te, Eu sou contigo. Deus nos encoraja para encorajarmos outros.
Não temas
Deus diz repetidamente: não temas, Eu sou contigo. Ele fortalece, sustenta e caminha ao nosso lado em cada desafio.
ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು,
ನಾನು ನಿನ್ನನ್ನು ಬಲಪಡಿಸುತ್ತೇನೆ.
ನಾನು ನಿನಗೆ ಸಹಾಯ ಮಾಡುತ್ತೇನೆ.
ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.
ನೀನು ಜಲರಾಶಿಯನ್ನು ದಾಟಿಹೋಗುವಾಗ,
ನಾನು ನಿನ್ನೊಂದಿಗಿರುವೆನು;
ನದಿಗಳನ್ನು ನೀನು ದಾಟುವಾಗ,
ಅವು ನಿನ್ನನ್ನು ಮುಳುಗಿಸುವುದಿಲ್ಲ;
ಬೆಂಕಿಯಲ್ಲಿ ನಡೆಯುವಾಗ,
ನೀನು ಸುಟ್ಟುಹೋಗುವುದಿಲ್ಲ;
ಜ್ವಾಲೆಯು ನಿನ್ನನ್ನು ದಹಿಸದು.
ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ,
ಪ್ರಿಯನೂ ಆಗಿರುವುದರಿಂದ
ನಾನು ನಿನಗೋಸ್ಕರ ಮನುಷ್ಯರನ್ನೂ,
ನಿನ್ನ ಪ್ರಾಣಕ್ಕೆ ಜನಾಂಗಗಳನ್ನೂ ಕೊಡುವೆನು.
ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ.
ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು.
ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
"ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ.
ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ.
ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು
ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.
"ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ.
ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು.
ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ,
‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.
ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ
ಹೊಸ ಬಲವನ್ನು ಹೊಂದುವರು.
ಅವರು ಹದ್ದುಗಳಂತೆ
ರೆಕ್ಕೆಗಳಿಂದ ಬೆಟ್ಟವನ್ನು ಏರುವರು.
ಅವರು ಓಡಿ ದಣಿಯರು. ನಡೆದು ಬಳಲರು.
ಆಗ, "ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?" ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ,
"ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ," ಎಂದೆನು.
ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ," ಎಂದು ಹೇಳಿದರು.
ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ," ಎಂದು ಹೇಳಿದರು.
ಜನರು ಯೆಹೋಶುವನಿಗೆ ಉತ್ತರವಾಗಿ, "ನಾವು ಯೆಹೋವ ದೇವರನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು.
ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ."
ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ," ಎಂದು ಹೇಳಿದನು.
Deus está conosco
Se Deus é por nós, quem será contra nós? Tudo posso naquele que me fortalece. Ele nos encoraja pela sua presença.
ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?
ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುತ್ತೇವೆ.
ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಭಕ್ತಿವೃದ್ಧಿಯ ಹಿತಕ್ಕಾಗಿ ಅವರನ್ನು ಸುಖವನ್ನು ನೋಡಿಕೊಳ್ಳಲಿ.
ಸಹನೆಯನ್ನೂ ಉತ್ತೇಜನವನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವಂತೆ ನಿಮಗೆ ಒಂದೇ ಆತ್ಮವನ್ನು ಕೊಡಲಿ.
ನಿಮ್ಮನ್ನು ದೃಢಪಡಿಸುವುದಕ್ಕಾಗಿ ನಾನು ನಿಮಗೆ ಕೆಲವು ಆತ್ಮಿಕ ವರಗಳನ್ನು ಕೊಡಲು ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಹೀಗೆ ನಾವು ಒಬ್ಬರಿಂದೊಬ್ಬರ ನಂಬಿಕೆಯಿಂದ ಪರಸ್ಪರ ಪ್ರೋತ್ಸಾಹಗೊಳ್ಳಬೇಕು.
ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.
ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.
ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.
ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.
ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ. ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಜಜ್ಜಿಹೋಗಲಿಲ್ಲ, ನಾವು ಚಂಚಲರಾಗಿದ್ದರೂ ನಿರಾಶರಾಗಲಿಲ್ಲ. ಹಿಂಸೆಗೆ ಒಳಪಟ್ಟರೂ ಕೈಬಿಟ್ಟವವರಲ್ಲ, ದಬ್ಬಿದವರಾದಾಗ್ಯೂ ನಾಶವಾಗಲಿಲ್ಲ. ಯೇಸುವಿನ ಜೀವವು ನಮ್ಮ ಶರೀರದಲ್ಲಿ ಪ್ರಕಟವಾಗುವಂತೆ, ನಾವು ಯಾವಾಗಲೂ ನಮ್ಮ ಶರೀರದಲ್ಲಿ ಯೇಸುವಿನ ಮರಣವನ್ನು ಧರಿಸುವವರಾಗಿರುತ್ತೇವೆ. ಏಕೆಂದರೆ ಜೀವಂತವಾಗಿರುವ ನಾವು ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಪ್ರಕಟಿಸುವಂತೆ, ನಮ್ಮನ್ನು ಯಾವಾಗಲೂ ಯೇಸುವಿಗಾಗಿ ಮರಣಕ್ಕೆ ಒಪ್ಪಿಸಿಕೊಟ್ಟವರಾಗಿದ್ದೇವೆ.
ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ. ಮತ್ತೊಮ್ಮೆ ನಮ್ಮನ್ನು ನಾವೇ ಹೊಗಳಿಕೊಳ್ಳುತ್ತೇವೆಂದು ನೀವು ಭಾವಿಸಬೇಡಿ. ನಮ್ಮನ್ನು ಕುರಿತು ನೀವು ಹೆಮ್ಮೆ ಪಡುವಂತೆ ಒಂದು ಅವಕಾಶವನ್ನು ನಾವು ನಿಮಗೆ ಒದಗಿಸುತ್ತೇವೆ ಅಷ್ಟೇ. ಹೀಗೆ ಮನುಷ್ಯರ ಹೃದಯವನ್ನಲ್ಲಾ, ಹೊರತೋರಿಕೆಯನ್ನು ಕಂಡು ಹೆಮ್ಮೆ ಪಡುವವರಿಗೆ ನೀವು ಉತ್ತರ ಕೊಡುವಿರಿ. ನಮಗೆ ಬುದ್ಧಿ ಭ್ರಮಣೆಯಾಗಿದ್ದರೆ, ಅದು ದೇವರಿಗಾಗಿಯೇ. ನಾವು ಸ್ವಸ್ಥಬುದ್ಧಿಯುಳ್ಳವರಾಗಿದ್ದರೆ, ಅದು ನಿಮಗಾಗಿಯೇ. ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು. ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ, ತಮಗಾಗಿ ಸತ್ತು ಪುನರುತ್ಥಾನವಾಗಿ ಬಂದ ಕ್ರಿಸ್ತ ಯೇಸುವಿಗೋಸ್ಕರವೇ ಜೀವಿಸಬೇಕೆಂದು ಕ್ರಿಸ್ತ ಯೇಸು ಎಲ್ಲರಿಗೋಸ್ಕರ ಸತ್ತರು.
ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ. ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು. ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ: ಹೇಗೆಂದರೆ, ದೇವರು ಮನುಷ್ಯರ ಪಾಪಗಳನ್ನು ಅವರಿಗೆ ವಿರೋಧವಾಗಿ ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಂದಿಗೆ ಸಮಾಧಾನಪಡಿಸುತ್ತಿದ್ದಾರೆ. ಈ ಸಮಾಧಾನದ ಸಂದೇಶವನ್ನೇ ದೇವರು ನಮಗೊಪ್ಪಿಸಿ ಕೊಟ್ಟಿದ್ದಾರೆ. ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ. ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.
ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.
ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ. ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.
Ânimo nas lutas
No mundo tereis aflições, mas tende bom ânimo — Eu venci o mundo. O Senhor é refúgio seguro em toda tribulação.
"ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ," ಎಂದರು.
"ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ," ಎಂದರು.
ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.
ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.
ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.
Promessas de conforto
Vinde a mim os cansados e sobrecarregados. Lança sobre Ele tuas ansiedades, pois Ele cuida de ti.
"ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.
ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ.
ಅವರು ನಿಮಗೆ ಆಧಾರವಾಗಿರುವರು.
ದೇವರು ಎಂದೆಂದಿಗೂ
ನೀತಿವಂತನನ್ನು ಕದಲಗೊಡಿಸುವುದಿಲ್ಲ.
ನಾನು ಕಾರ್ಗತ್ತಲಿನ
ಕಣಿವೆಯಲ್ಲಿ ನಡೆಯುವಾಗಲೂ,
ನೀವು ನನ್ನೊಂದಿಗಿರುವುದರಿಂದ
ನಾನು ಕೇಡಿಗೆ ಹೆದರೆನು;
ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ
ನನ್ನನ್ನು ಸಂತೈಸುತ್ತವೆ.
ನಾನು ಕಾರ್ಗತ್ತಲಿನ
ಕಣಿವೆಯಲ್ಲಿ ನಡೆಯುವಾಗಲೂ,
ನೀವು ನನ್ನೊಂದಿಗಿರುವುದರಿಂದ
ನಾನು ಕೇಡಿಗೆ ಹೆದರೆನು;
ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ
ನನ್ನನ್ನು ಸಂತೈಸುತ್ತವೆ.
ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ.
ನಾನು ಯಾರಿಗೂ ಭಯಪಡೆನು?
ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ.
ನಾನು ಯಾರಿಗೂ ಹೆದರೆನು?
ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು;
ಅವರು ನಿನ್ನ ಹೃದಯವನ್ನು ದೃಢಪಡಿಸುವರು;
ಯೆಹೋವ ದೇವರಿಗಾಗಿ ಕಾದಿರು.
ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ;
ನಿಮ್ಮ ಹೃದಯವು ಧೈರ್ಯದಿಂದ ಇರಲಿ.
ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ,
ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು;
ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.
ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ;
ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.
ಆದ್ದರಿಂದ ಭೂಮಿಯು ಕಂಪಿಸಿದರೂ
ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,
ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ,
ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು.
ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು.
ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ.
ಸಾಯುವ ಮನುಷ್ಯನು ನನಗೇನು ಮಾಡಬಲ್ಲ?
ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ.
ನಮ್ಮ ಕೈಗಳ ಕೆಲಸವನ್ನು ಸ್ಥಿರಪಡಿಸಿರಿ.
ಹೌದು, ನಮ್ಮ ಕೈಗಳ ಕೆಲಸವನ್ನು ಸ್ಥಾಪಿಸಿರಿ.
ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ;
ನನ್ನ ಸಹಾಯವು ಎಲ್ಲಿಂದ ಬರುವುದು?
ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ
ಯೆಹೋವ ದೇವರಿಂದಲೇ ನನ್ನ ಸಹಾಯವು ಬರುತ್ತದೆ.
ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ.
ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.
ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು,
ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು.
ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು,
ಏಕೆಂದರೆ ಯೆಹೋವ ದೇವರೇ,
ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.
ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.
ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.
ನೀವು ಒಳ್ಳೆಯದನ್ನು ಅನುಸರಿಸಲು ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.
Encorajar uns aos outros
Encorajai-vos mutuamente e edificai-vos uns aos outros. Não desanimemos — a bondade do Senhor é nova a cada manhã.
ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.
ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.
ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ. ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.
ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ,
"ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ,
ಎಂದಿಗೂ ತೊರೆಯುವುದಿಲ್ಲ!"
ಆದ್ದರಿಂದ,
"ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು.
ಮನುಷ್ಯನು ನನಗೆ ಏನು ಮಾಡಬಲ್ಲನು?"
ಎಂದು ನಾವು ಧೈರ್ಯವಾಗಿ ಹೇಳುವೆವು.
ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.
ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.
ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.
ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.
ದಾವೀದನು ತನ್ನ ಮಗ ಸೊಲೊಮೋನನಿಗೆ, "ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.
ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ.
ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ.
ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು.
ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ,
ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು."
ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.
ಎಲ್ಲಾ ಪ್ರಯಾಸದಲ್ಲಿ ಲಾಭವಿದೆ,
ಹರಟೆ ಮಾತು ಬಡತನಕ್ಕೆ ಮಾತ್ರ ದಾರಿ.
ಯೇಸು ಅವರಿಗೆ, "ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು," ಎಂದು ಹೇಳಿದರು. ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.
Deus chama pelo nome
Ao longo da Bíblia, Deus chamou seus servos pelo nome — Abraão, Moisés, Samuel, Paulo — encorajando cada um pessoalmente.
ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, "ಯಾಕೋಬನೇ, ಯಾಕೋಬನೇ," ಎಂದರು.
ಅದಕ್ಕವನು, "ಇಗೋ, ಇದ್ದೇನೆ," ಎಂದನು.
ದೇವದೂತನು ಸ್ವಪ್ನದಲ್ಲಿ ನನಗೆ, ‘ಯಾಕೋಬನೇ’ ಎಂದನು. ಅದಕ್ಕೆ ನಾನು, ‘ಇಲ್ಲಿ ಇದ್ದೇನೆ,’ ಎಂದೆನು.
ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, "ಅಬ್ರಹಾಮನೇ, ಅಬ್ರಹಾಮನೇ," ಎಂದು ಅವನನ್ನು ಕರೆದನು.
ಅವನು, "ಇಲ್ಲಿ ಇದ್ದೇನೆ," ಎಂದನು.
ಅವನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವ ದೇವರು ನೋಡಿದಾಗ, ದೇವರು ಪೊದೆಯೊಳಗಿಂದ ಅವನಿಗೆ, "ಮೋಶೇ, ಮೋಶೇ," ಎಂದು ಕರೆದರು.
ಆಗ ಅವನು, "ನಾನು ಇಲ್ಲಿ ಇದ್ದೇನೆ," ಎಂದನು.
ಆಗ ಏಲಿಯು ಸಮುಯೇಲನನ್ನು ಕರೆದು ಅವನಿಗೆ, "ನನ್ನ ಮಗನಾದ ಸಮುಯೇಲನೇ," ಎಂದನು.
ಅದಕ್ಕವನು, "ಇಗೋ, ಇದ್ದೇನೆ," ಎಂದನು.
ದಮಸ್ಕದಲ್ಲಿ ಅನನೀಯ ಎಂಬ ಹೆಸರಿನ ಶಿಷ್ಯನಿದ್ದನು. ದರ್ಶನದಲ್ಲಿ ಕರ್ತ ಯೇಸುವು ಅವನನ್ನು, "ಅನನೀಯಾ!" ಎಂದು ಕರೆದರು.
"ಇಗೋ, ಇದ್ದೇನೆ ಸ್ವಾಮಿ," ಎಂದು ಅವನು ಉತ್ತರಕೊಟ್ಟನು.
ಮರಿಯಳು, "ಇಗೋ ನಾನು ಕರ್ತದೇವರ ದಾಸಿ, ನಿನ್ನ ತಕ್ಕ ಮಾತಿನಂತೆ ನನಗಾಗಲಿ," ಎಂದಳು. ಆಗ ದೇವದೂತನು ಆಕೆಯ ಬಳಿಯಿಂದ ಹೊರಟುಹೋದನು.
ಎರಡು ರೂಪಾಯಿಗಳಿಗೆ ಐದು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ. ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.