Esperar em Deus
Esperar em Deus não é passividade — é confiança ativa no Senhor que age no tempo perfeito. Os que esperam nele não serão confundidos nem envergonhados.
Esperança em Deus
Descanse somente em Deus, ó minha alma, pois dele vem a minha esperança. Ele é rocha e salvação — não serei abalado.
ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು.
ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು;
ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
ಕೆಡುಕರು ತೆಗೆದುಹಾಕಲ್ಪಡುವರು;
ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು;
ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು;
ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
ರಕ್ಷಣೆಗಾಗಿ ಪ್ರಾರ್ಥಿಸುವುದು
ನಾನು ಯೆಹೋವನಿಗಾಗಿ ನಿರೀಕ್ಷಿಸಿಯೇ ನಿರೀಕ್ಷಿಸಿದೆನು;
ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.
ನಾನು ಯೆಹೋವನನ್ನು ಎದುರುನೋಡುತ್ತೇನೆ;
ನನ್ನ ಪ್ರಾಣವು ಆತನನ್ನು ಕಾದುಕೊಂಡಿದೆ;
ಆತನ ನುಡಿಯನ್ನು ನಿರೀಕ್ಷಿಸಿಕೊಂಡಿದ್ದೇನೆ.
ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುತ್ತಾರಲ್ಲಾ;
ಕಾವಲುಗಾರರು ಬೆಳಗಾಗುವುದನ್ನು ಮುನ್ನೋಡುವುದಕ್ಕಿಂತ ವಿಶೇಷವಾಗಿ,
ನನ್ನ ಅಂತರಾತ್ಮವು ಕರ್ತನನ್ನು ಮುನ್ನೋಡುತ್ತದೆ.
ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು,
ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ;
ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.
ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು;
ನಿನ್ನ ಹೃದಯವು ಧೈರ್ಯದಿಂದಿರಲಿ;
ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.
Confiança na espera
O Senhor é bom para os que esperam nele. O olho não viu o que Deus preparou para os que o amam e o aguardam.
ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು;
ಅವರು ಓಡಿ ದಣಿಯರು, ನಡೆದು ಬಳಲರು.
ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ.
ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು.
ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ,
ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.
ಕೇಡಿಗೆ ಮುಯ್ಯಿತೀರಿಸುವೆನು ಅನ್ನಬೇಡ,
ಯೆಹೋವನನ್ನು ನಿರೀಕ್ಷಿಸಿಕೊಂಡಿರು, ಆತನೇ ನಿನ್ನನ್ನು ಉದ್ಧರಿಸುವನು.
ಹಿಂಸೆಪಡುವ ಕ್ರೈಸ್ತರಿಗೆ ಪ್ರೋತ್ಸಾಹವು
ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು. ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.
ನಿತ್ಯ ಜೀವಕ್ಕಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಕರುಣೆಯನ್ನು ಎದುರುನೋಡುತ್ತಾ, ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
ನಾವಾದರೋ ಪರಲೋಕದ ಪ್ರಜೆಗಳು, ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವುದನ್ನು ಎದುರುನೋಡುತ್ತಾ ಇದ್ದೇವೆ.