Esperar em Deus
Esperar em Deus não é passividade — é confiança ativa no Senhor que age no tempo perfeito. Os que esperam nele não serão confundidos nem envergonhados.
Esperança em Deus
Descanse somente em Deus, ó minha alma, pois dele vem a minha esperança. Ele é rocha e salvação — não serei abalado.
ಹೌದು, ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ.
ನನ್ನ ನಿರೀಕ್ಷೆಯು ದೇವರಿಂದಲೇ.
ಯೆಹೋವ ದೇವರ ಮುಂದೆ ಶಾಂತನಾಗಿರು;
ಮೌನವಾಗಿದ್ದು ಅವರಿಗಾಗಿ ಎದುರು ನೋಡು;
ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ.
ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.
ಏಕೆಂದರೆ, ದುರ್ಮಾರ್ಗಿಗಳು ನಾಶವಾಗುವರು;
ಯೆಹೋವ ದೇವರನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು.
ಯೆಹೋವ ದೇವರನ್ನು ನಿರೀಕ್ಷಿಸು;
ಅವರ ಮಾರ್ಗದಲ್ಲಿ ನಡೆ;
ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು;
ದುಷ್ಟರ ವಿನಾಶವನ್ನು ನೀವು ಕಾಣುವಿರಿ.
ನಾನು ಯೆಹೋವ ದೇವರಿಗಾಗಿ ತಾಳ್ಮೆಯಿಂದ ಕಾದಿದ್ದೆನು;
ಅವರು ನನ್ನ ಕಡೆಗೆ ತಿರುಗಿ, ನನ್ನ ಮೊರೆಯನ್ನು ಕೇಳಿದರು.
ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ;
ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ.
ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ
ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ.
ನಿಮ್ಮನ್ನು ನಿರೀಕ್ಷಿಸುವವರಲ್ಲಿ
ಯಾರೂ ನಾಚಿಕೆಪಡದಿರಲಿ;
ನಿಷ್ಕಾರಣವಾಗಿ ವಂಚನೆ
ಮಾಡುವವರು ನಾಚಿಕೆಪಡಲಿ.
ಯೆಹೋವ ದೇವರೇ, ನಿಮ್ಮನ್ನೇ ಎದುರು ನೋಡುತ್ತೇನೆ;
ನನ್ನ ದೇವರಾದ ಯೆಹೋವ ದೇವರೇ, ನೀವು ಉತ್ತರ ಕೊಡುವಿರಿ.
ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು;
ಅವರು ನಿನ್ನ ಹೃದಯವನ್ನು ದೃಢಪಡಿಸುವರು;
ಯೆಹೋವ ದೇವರಿಗಾಗಿ ಕಾದಿರು.
Confiança na espera
O Senhor é bom para os que esperam nele. O olho não viu o que Deus preparou para os que o amam e o aguardam.
ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ
ಹೊಸ ಬಲವನ್ನು ಹೊಂದುವರು.
ಅವರು ಹದ್ದುಗಳಂತೆ
ರೆಕ್ಕೆಗಳಿಂದ ಬೆಟ್ಟವನ್ನು ಏರುವರು.
ಅವರು ಓಡಿ ದಣಿಯರು. ನಡೆದು ಬಳಲರು.
ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ.
ನಿನಗೋಸ್ಕರ ನಾವು ಕಾದಿದ್ದೇವೆ.
ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ,
ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು
ಲೋಕದ ಉತ್ಪತ್ತಿಗೆ ಮುಂಚೆ ದೇವರೇ ನಿನ್ನ ಹೊರತಾಗಿ ಯಾರೂ ಕೇಳಲಿಲ್ಲ.
ಯಾರ ಕಿವಿಯೂ ಕೇಳಲಿಲ್ಲ.
ಯಾರ ಕಣ್ಣೂ ಕಾಣಲಿಲ್ಲ.
ನೀನು, "ಕೇಡಿಗೆ ಮುಯ್ಯಿತೀರಿಸುವೆನು," ಎಂದು ಹೇಳಬೇಡ;
ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.
ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು. ನೀವೂ ದೀರ್ಘಶಾಂತಿಯಿಂದಿರಿ. ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ. ಏಕೆಂದರೆ ಕರ್ತ ಯೇಸುವಿನ ಪುನರಾಗಮನ ಹತ್ತಿರವಾಯಿತು.
ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.
ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.