Simplicidade do Evangelho
A simplicidade do evangelho é sua força. Deus escolheu as coisas loucas do mundo para confundir os sábios. O poder está na mensagem da cruz, não na eloquência humana.
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು. ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಳ್ಳಬೇಕೆಂದು ನನ್ನ ಬೋಧನೆಯಲ್ಲಿಯೂ, ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೇ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು" ಎಂದು ಹೇಳಿದನು.