Simplicidade do Evangelho
A simplicidade do evangelho é sua força. Deus escolheu as coisas loucas do mundo para confundir os sábios. O poder está na mensagem da cruz, não na eloquência humana.
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿರುವುದಿಲ್ಲ.
ದೀಕ್ಷಾಸ್ನಾನ ಕೊಡುವುದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಕಳುಹಿಸದೆ ಸುವಾರ್ತೆಯನ್ನು ಸಾರುವುದಕ್ಕಾಗಿ ನನ್ನನ್ನು ಕಳುಹಿಸಿದ್ದಾರೆ. ಸುವಾರ್ತೆ ಸಾರುವಂಥದ್ದು ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರುತ್ತಿದ್ದರೆ ಕ್ರಿಸ್ತ ಯೇಸುವಿನ ಶಿಲುಬೆಯ ಶಕ್ತಿಯು ಬರಿದಾಗಿಬಿಡುತಿತ್ತು.
ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು.
ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ," ಎಂದರು.
Este artigo te tocou? Faça uma oração!
+581 estão orando agora.
Junte-se à corrente de oração.