Evangelização
A evangelização é a missão suprema da Igreja. Jesus mandou: ide por todo o mundo e pregai o evangelho a toda criatura. O evangelho é poder de Deus para a salvação de todo aquele que crê.
A Grande Comissão
Ide, fazei discípulos de todas as nações. Jesus confiou a seus seguidores a missão de levar a boa notícia ao mundo inteiro.
ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ, ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ," ಎಂದರು.
ಯೇಸು ಅವರಿಗೆ, "ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.
ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ," ಎಂದರು.
"ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.
ಉಪ್ಪು ಮತ್ತು ಬೆಳಕು
"ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.
ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ. ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.
ಅಂದಿನಿಂದ ಯೇಸು, "ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ," ಎಂದು ಬೋಧಿಸತೊಡಗಿದರು.
O poder do evangelho
O evangelho é poder de Deus para a salvação. A fé vem pelo ouvir, e o ouvir pela Palavra de Cristo.
ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.
ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.
ಶಿಲುಬೆಗೆ ಹಾಕಲಾದ ಯೇಸು ಕ್ರಿಸ್ತನನ್ನೇ ಹೊರತು ನಿಮ್ಮಲ್ಲಿ ಬೇರೆ ಯಾವುದನ್ನೂ ತಿಳಿಯದವನಾಗಿರುವೆನೆಂದು ತೀರ್ಮಾನಿಸಿಕೊಂಡೆನು.
ಕ್ರಿಸ್ತನ ಪುನರುತ್ಥಾನ
ಪ್ರಿಯರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನೂ, ನೀವು ಅದನ್ನು ಸ್ವೀಕರಿಸಿದ್ದನ್ನೂ, ಅದರಲ್ಲಿ ನಿಂತಿರುವುದನ್ನೂ, ಈಗ ನಿಮಗೆ ನೆನಪಿಸುತ್ತೇನೆ. ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.
ನಾವು ನಿಮಗೆ ತಿಳಿಸಿದ ಸುವಾರ್ತೆಯ ಮೂಲಕವಾಗಿ, ನೀವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಿಮ್ಮನ್ನು ಈ ಆಯ್ಕೆಗಾಗಿ ಕರೆದರು.
Testemunhar e proclamar
Estai sempre preparados para responder com mansidão a todo aquele que pedir razão da vossa esperança.
ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ "ಕರ್ತದೇವರು" ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.
ನಿಮಗೆ ಪರಸ್ಪರ ಪ್ರೀತಿಯಿದ್ದರೆ, ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು," ಎಂದು ಹೇಳಿದರು.
ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.
ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ:
" ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ
ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ "
ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.
"ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ,
ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ.
ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ,
ಕುರುಡರಿಗೆ ದೃಷ್ಟಿ ಕೊಡುವುದಕ್ಕೂ,
ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,
ಅದಕ್ಕೆ ಯೇಸು, "ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ ಬಿಟ್ಟುಬಿಟ್ಟರೆ, ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು.
ತಮ್ಮ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವರು ಅದನ್ನು ಕಳೆದುಕೊಳ್ಳುವರು. ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಉಳಿಸಿಕೊಳ್ಳುವರು.
Fazer conhecer
Dai graças ao Senhor, invocai o seu nome, fazei conhecidas as suas obras entre os povos.
ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ;
ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.
ಆ ದಿನದಲ್ಲಿ ನೀವು ಹೀಗೆ ಹೇಳುವಿರಿ,
"ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ
ಅವರ ಕ್ರಿಯೆಗಳನ್ನು ಪ್ರಕಟಿಸಿರಿ.
ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.
ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.
ಸುವಾರ್ತೆಗಾಗಿ ಒಳ್ಳೆಯದನ್ನು ಮಾಡುವುದು
ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಿಸು.
ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’