Falar
A Bíblia tem muito a ensinar sobre a arte de falar. As palavras têm poder de vida e de morte — podem edificar ou destruir, curar ou ferir, aproximar ou afastar.
O poder das palavras
A morte e a vida estão no poder da língua. A palavra branda desvia a ira, mas a palavra dura suscita o furor.
ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ;
ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ.
ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.
ಹಿತವಾದ ನಾಲಿಗೆಯು ಜೀವವೃಕ್ಷ.
ಆದರೆ ವಕ್ರ ನಾಲಿಗೆಯು ಆತ್ಮಚೈತನ್ಯವನ್ನು ನಾಶಮಾಡುವುದು.
ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ.
ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.
ಸಲಹೆಯ ಕೊರತೆಯಿಂದ ಯೋಜನೆಗಳು ವಿಫಲಗೊಳ್ಳುತ್ತವೆ.
ಆದರೆ ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸಫಲಗೊಳ್ಳುವುವು.
Falar com sabedoria
No muito falar não falta transgressão. A boca do justo fala sabedoria, e quem guarda os lábios guarda a si mesmo.
ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ.
ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು.
ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ;
ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.
ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು;
ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು.
ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ,
ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ.
ತಮಗಾಗಿ ಮಾತನಾಡಲು ಸಾಧ್ಯವಾಗದವರಿಗಾಗಿ ಮಾತನಾಡು,
ಅನಾಥರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಟ್ಟು ಮಾತನಾಡು.
ಜ್ಞಾನಿಯ ಮಾತುಗಳು ಹಿತಕರ.
ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.
Falar a verdade
Cada palavra ociosa será pesada no dia do juízo. Fale a verdade, edifique com a boca e confesse Cristo com os lábios.
ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
"ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.
ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.
ಆದ್ದರಿಂದ ನೀವು ಕತ್ತಲೆಯಲ್ಲಿ ಯಾವುದನ್ನು ಹೇಳಿದ್ದೀರೋ ಅದು ಬೆಳಕಿನಲ್ಲಿ ಕೇಳಲಾಗುವುದು, ಕೋಣೆಗಳೊಳಗೆ ನೀವು ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.
ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.
ನೀನು, "ಯೇಸುವೇ ಕರ್ತ," ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.
ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.
Edificar com palavras
Não saia da boca nenhuma palavra torpe. Sejam prontos para ouvir, tardios para falar, e tardios para a ira.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.
ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.
ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.
ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.
ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ;
ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.
ನನ್ನ ಬಾಯಿ ನಿಮ್ಮ ಸ್ತೋತ್ರದಿಂದ ತುಂಬಿರಲಿ.
ನಾನು ದಿನವೆಲ್ಲಾ ನಿಮ್ಮ ವೈಭವವನ್ನೇ ಸಾರುತ್ತಿರುವೆ.