Família de Deus
A família de Deus transcende laços de sangue. Em Cristo, somos adotados como filhos, irmãos uns dos outros e membros de uma família eterna — a Igreja.
Adotados por Deus
Recebemos o espírito de adoção pelo qual clamamos: Abba, Pai! Se filhos, também herdeiros — herdeiros de Deus e co-herdeiros com Cristo.
ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ. ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾಗಿದ್ದರೆ ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು. ನೀವು ಪುತ್ರರಾಗಿರುವುದರಿಂದ ದೇವರು, "ಅಪ್ಪಾ ತಂದೆಯೇ" ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ.
ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ. ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು. ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
ಎಫೆಸದವರಿಗಾಗಿ ಪ್ರಾರ್ಥನೆ
ಹೀಗಿರಲಾಗಿ ಯಾವ ತಂದೆಯಿಂದ ಭೂಪರಲೋಕಗಳಲ್ಲಿರುವ ಪ್ರತಿ ಜನವೂ ಹೆಸರುಗೊಂಡಿರುವುದೋ ಆ ತಂದೆಯ ಮುಂದೆ ನಾನು ಮೊಣಕಾಲೂರಿಕೊಂಡು,
ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
A comunidade de fé
Não abandonem a congregação. Somos um corpo em Cristo, membros uns dos outros, chamados a amar e a servir.
ಸಭೆಯಾಗಿ ಸೇರುವ ರೂಢಿಯನ್ನು ಕೆಲವರು ಬಿಟ್ಟಂತೆ ನಾವು ಬಿಟ್ಟು ಬಿಡದೆ, ಆ ದಿನವು ಸಮೀಪಿಸುತ್ತಾ ಬರುತ್ತದೆಂದು ನೀವು ತಿಳಿದುಕೊಂಡಿರುವುದರಿಂದ ಒಬ್ಬರನ್ನೊಬ್ಬರು ಮತ್ತಷ್ಟು ಹೆಚ್ಚಾಗಿಯೇ ಪ್ರೋತ್ಸಾಹಿಸುತ್ತಿರೋಣ.
ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ? ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.
ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಡಿಪಾಯದ ಮೇಲೆ ನೀವೂ ಮಂದಿರದೋಪಾದಿಯಲ್ಲಿ ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು. ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ. ಆತನಲ್ಲಿ ನೀವೂ ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ವಾಸಸ್ಥಾನವಾಗುವುದಕ್ಕೆ ನಮ್ಮ ಜೊತೆಯಲ್ಲಿ ಕಟ್ಟಲ್ಪಡುತ್ತಾ ಇದ್ದೀರಿ.
Quem é minha família?
Jesus disse: quem faz a vontade de Deus, esse é meu irmão e irmã. A família de Deus inclui todos os que creem.
ಅದಕ್ಕೆ ಆತನು ಅವರಿಗೆ, "ನನಗೆ ತಾಯಿಯೂ, ತಮ್ಮಂದಿರೂ ಯಾರು?" ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ, "ಇಗೋ, ನನ್ನ ತಾಯಿ, ನನ್ನ ತಮ್ಮಂದಿರು. ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ" ಅಂದನು.
ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ.
ಯೇಸು ಅವರಿಗೆ, "ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.
ವಿಶ್ವಾಸಿಗಳೊಂದಿಗಿನ ಕರ್ತವ್ಯಗಳು
ವೃದ್ಧರನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ, ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು.
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ. ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.
ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.