Família
A família é a primeira instituição criada por Deus. Ele a projetou para ser escola de amor, fé e formação de caráter. A Bíblia honra a família e nos ensina a cuidar dela.
Eu e minha casa
Eu e minha casa serviremos ao Senhor. A família que serve a Deus juntos permanece unida e fortalecida em todas as circunstâncias.
ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು" ಎಂದನು.
ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು" ಎಂದನು.
ಅವರು; "ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು" ಎಂದು ಹೇಳಿ,
ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.
Criar os filhos
Instrui a criança no caminho em que deve andar. O lar é a primeira escola de fé e obediência.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
ಮುಪ್ಪಿನಲ್ಲಿಯೂ ಓರೆಯಾಗರು.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
ಮುಪ್ಪಿನಲ್ಲಿಯೂ ಓರೆಯಾಗರು.
ಪಾಪಿಗಳ ಕುರಿತು ಎಚ್ಚರಿಕೆಗಳು
ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು,
ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.
ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ,
ಕೊರಳಿಗೆ ಹಾರದಂತಿರುವುದು.
ಪರಸ್ತ್ರೀಯರ ಸಹವಾಸದ ಬಗ್ಗೆ ಎಚ್ಚರಿಕೆ
ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು,
ತಾಯಿಯ ಉಪದೇಶವನ್ನು ಬಿಡಬೇಡ.
ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ತಂದೆತಾಯಿಗಳೂ ಮಕ್ಕಳೂ
ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, "ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,
Honrar e amar
Honra teu pai e tua mãe. A família funciona com perdão, paciência e amor incondicional entre todos os seus membros.
"ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
"ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು" ಇವುಗಳೇ ಅಂದನು.
ಯೇಸು ವಿವಾಹ ವಿಚ್ಛೇದನ ವಿಷಯವಾಗಿ ಬೋಧಿಸಿದ್ದು
ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು. ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು.
ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, "ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?" ಎಂದು ಕೇಳಲು, ಆತನು ಪ್ರತ್ಯುತ್ತರವಾಗಿ, "ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು, ‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’ ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಅಂದನು.
ಅದಕ್ಕೆ ಅವರು ಆತನನ್ನು, "ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?" ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, "ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು. ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ" ಎಂದು ನಿಮಗೆ ಹೇಳುತ್ತೇನೆ ಅಂದನು. ಅದಕ್ಕೆ ಶಿಷ್ಯರು ಯೇಸುವಿಗೆ, "ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ" ಅಂದರು. ಆದರೆ ಯೇಸು ಅವರಿಗೆ, "ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು. ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ" ಎಂದು ಹೇಳಿದನು.
ಯೇಸು ಚಿಕ್ಕ ಮಕ್ಕಳನ್ನು ಆಶೀರ್ವದಿಸಿದ್ದು
ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು. ಆದರೆ ಯೇಸು, "ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ" ಎಂದು ಹೇಳಿದನು. ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.
ಐಶ್ವರ್ಯವಂತನಾದ ಯುವಕನು
ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, "ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?" ಎಂದು ಕೇಳಿದನು. ಆತನು ಅವನಿಗೆ, "ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ" ಎಂದು ಹೇಳಿದನು. ಅದಕ್ಕೆ ಅವನು, "ಅವು ಯಾವುವು?" ಎಂದು ಕೇಳಲು ಯೇಸು, "ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು. ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು" ಇವುಗಳೇ ಅಂದನು. ಆ ಯೌವನಸ್ಥನು ಆತನಿಗೆ, "ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?" ಎಂದು ಕೇಳಿದನು. ಯೇಸು ಅವನಿಗೆ, "ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು" ಎಂದು ಹೇಳಿದನು. ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.
ಆಗ ಯೇಸು ತನ್ನ ಶಿಷ್ಯರಿಗೆ, "ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ" ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. "ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ" ಅಂದನು. ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, "ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?" ಎಂದು ಕೇಳಿದರು. ಯೇಸು ಅವರನ್ನು ದೃಷ್ಟಿಸಿ ನೋಡಿ "ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ" ಅಂದನು.
ಪರಿತ್ಯಾಗಕ್ಕೆ ನೂರರಷ್ಟು ಪ್ರತಿಫಲ
ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು. ಯೇಸು ಅವರಿಗೆ, "ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ. ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು. ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.
ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
ಒಬ್ಬನು, "ತಾನು ದೇವರನ್ನು ಪ್ರೀತಿಸುತ್ತೇನೆ" ಎಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತನ್ನೊಂದಿಗೆ ಇರುವ ಸಹೋದರನನ್ನು ಪ್ರೀತಿಸದವನು, ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಬಲ್ಲನು?
Cuidar da família
Quem não cuida dos seus negou a fé. A família é responsabilidade sagrada — prover, proteger e abençoar é mandamento divino.
ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
ಯಾವನಾದರೂ ಸ್ವಂತ ಜನರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ಕ್ರಿಸ್ತ ನಂಬಿಕೆಯನ್ನು ತಿರಸ್ಕರಿಸಿದವನೂ ನಂಬದವನಿಗಿಂತ ಕೀಳಾದವನೂ ಆಗಿದ್ದಾನೆ.
ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ಕೊರಿಂಥ ಸಭೆಯಲ್ಲಿ ಉಂಟಾದ ಬೇಧಗಳು (1:10, 4:20)
ಪ್ರಿಯರೇ, ನೀವೆಲ್ಲರೂ ಹೊಂದಾಣಿಕೆಯುಳ್ಳವರಾಗಿರಬೇಕೆಂದು, ನಿಮ್ಮಲ್ಲಿ ಭಿನ್ನತೆಗಳಿರಬಾರದೆಂದು, ನೀವು ಒಂದೇ ಮನಸ್ಸೂ ಮತ್ತು ಒಂದೇ ಉದ್ದೇಶವುಳ್ಳವರಾಗಿದ್ದು ಐಕ್ಯತೆಯಿಂದಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬುದ್ಧಿ ಹೇಳುತ್ತೇನೆ.
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;
ಗರ್ಭಫಲವು ಆತನ ಬಹುಮಾನವೇ.
ಯೌವನದಲ್ಲಿ ಹುಟ್ಟಿದ ಮಕ್ಕಳು,
ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು.
ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ
ಅಂಥವರು ಅವಮಾನ ಹೊಂದುವುದಿಲ್ಲ.
ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ,
ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
ಆತನ ನಿಬಂಧನೆಗಳನ್ನು ಕೈಕೊಂಡು,
ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ
ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ,
ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.
ಆತನ ನಿಬಂಧನೆಗಳನ್ನು ಕೈಕೊಂಡು,
ಆತನ ವಿಧಿಗಳನ್ನು ನೆನಪಿನಲ್ಲಿಟ್ಟುಕೊಂಡು ನಡೆಯುವವರ
ಮಕ್ಕಳು ಮೊಮ್ಮಕ್ಕಳವರೆಗೂ ಆತನು ತನ್ನ ನೀತಿಯನ್ನು ಸಾಧಿಸುವನು.
ಐಕಮತ್ಯವು ಶ್ರೇಷ್ಠವಾದುದು
ಆಹಾ, ಸಹೋದರರು ಒಂದಾಗಿರುವುದು,
ಎಷ್ಟೋ ಒಳ್ಳೆಯದು, ಎಷ್ಟೋ ರಮ್ಯವಾದದ್ದು!
Unidade familiar
A coroa dos velhos são os filhos dos filhos. O casamento, os filhos e a comunhão familiar são bênçãos de Deus.
ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ,
ತಂದೆತಾಯಿಗಳು ಮಕ್ಕಳಿಗೆ ಭೂಷಣ.
ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ,
ತಂದೆತಾಯಿಗಳು ಮಕ್ಕಳಿಗೆ ಭೂಷಣ.
ಮಿತ್ರನ ಪ್ರೀತಿಯು ನಿರಂತರ,
ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.
ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ,
ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.
ನಿನಗೂ, ನಿನ್ನ ತಂದೆಗೂ ಮಿತ್ರನಾದವನನ್ನು ಬಿಡಬೇಡ,
ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು,
ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.
ಕಂದಾ, ನಿನ್ನ ಮನಸ್ಸಿಗೆ ಜ್ಞಾನವುಂಟಾದರೆ
ನನ್ನ ಮನಸ್ಸಿಗೂ ಉಲ್ಲಾಸವಾಗುವುದು.
ಧರ್ಮಿಯ ತಂದೆಯು ಅತಿ ಸಂತೋಷಪಡುವನು,
ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು.
ಸೊಲೊಮೋನನ ಜ್ಞಾನೋಕ್ತಿಗಳು
ಜ್ಞಾನಿಯಾದ ಮಗನಿಂದ ತಂದೆಗೆ ಆನಂದ,
ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.
ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು,
ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು,
ಆಮೇಲೆ ನಿನ್ನ ಮನೆಯನ್ನು ಕಟ್ಟು.
ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು.
ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು,
ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;
Casamento e família
O homem deixará pai e mãe e se unirá à sua mulher. A família começa no casamento — aliança sagrada diante de Deus.
ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, "ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ" ಎಂದು ಅವರಿಗೆ ಹೇಳಿದನು.
ಲೋಕದೊಳಗೆ ದೇವರು ನಿನಗೆ ನೇಮಿಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳೆಲ್ಲಾ ನಿನ್ನ ಪ್ರಿಯಪತ್ನಿಯೊಡನೆ ಸುಖದಿಂದ ಬದುಕು. ನಿನ್ನ ಬಾಳಿನಲ್ಲಿಯೂ, ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನ್ನ ಪಾಲಾಗಿದೆ.
ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ಉಂಟುಮಾಡಿದನು. ಈ ಕಾರಣದಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು. ಹೀಗಿರುವಲ್ಲಿ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದ್ದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು" ಎಂದು ಹೇಳಿದನು.
ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?" ಅಂದನು.
ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ?
ಒಂದು ವೇಳೆ ಮರೆತರು ಮರೆತಾಳು, ಆದರೆ ನಾನು ನಿನ್ನನ್ನು ಮರೆಯುವುದಿಲ್ಲ.
ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.