Filho de Deus
Jesus é o Filho de Deus — a revelação suprema do Pai. Nele habita toda a plenitude da divindade e por Ele temos acesso ao Pai, à salvação e à vida eterna.
A revelação do Filho
O Filho é o resplendor da glória de Deus. Quem vê o Filho vê o Pai. Jesus é a imagem perfeita do Deus invisível.
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
ಯೇಸು ದೇವರ ಮಗನಾಗಿದ್ದು ದೇವದೂತರಿಗಿಂತಲೂ ಶ್ರೇಷ್ಠನು
ಈತನು ದೇವದೂತರಿಗಿಂತಲೂ ಉನ್ನತನಾಗಿದ್ದು. ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನು.
ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.
ಅದಕ್ಕೆ ಯೇಸು ಅವರಿಗೆ, "ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ" ಎಂದು ಹೇಳಿದನು. ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.
Confissão e fé
Tu és o Cristo, o Filho do Deus vivo! Quem confessa que Jesus é o Filho de Deus, Deus permanece nele.
ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು
ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, "ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ" ಎಂದು ತನ್ನ ಶಿಷ್ಯರನ್ನು ಕೇಳಿದನು. ಅವರು, "ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು" ಅನ್ನುತ್ತಾರೆ ಎಂದು ಹೇಳಿದರು. ಆತನು ಅವರನ್ನು, "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?" ಆಗ ಸೀಮೋನ ಪೇತ್ರನು, "ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು" ಎಂದು ಉತ್ತರ ಕೊಟ್ಟನು.
ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು. ಆಗ "ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ" ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.
ಯೇಸುಕ್ರಿಸ್ತನು ದೇವರ ಮಗನಾಗಿದ್ದಾನೆಂದು ಯಾರು ಒಪ್ಪಿಕೊಳ್ಳುತ್ತಾರೋ ಅವರಲ್ಲಿ ದೇವರು ನೆಲೆಗೊಂಡಿರುತ್ತಾನೆ, ಹಾಗೂ ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿಲ್ಲ, ಆದರೂ ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟಿದ್ದರಲ್ಲಿಯೇ ಆತನ ನಿಜವಾದ ಪ್ರೀತಿಯು ತೋರಿಬರುತ್ತದೆ.
ಪಾಪಮಾಡುವವನು ಸೈತಾನನಿಗೆ ಸಂಬಂಧಪಟ್ಟವನಾಗಿದ್ದಾನೆ. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ಸೈತಾನನ ಕೆಲಸಗಳನ್ನು ನಾಶಮಾಡುವುದಕ್ಕೋಸ್ಕರ ದೇವಕುಮಾರನು ಪ್ರತ್ಯಕ್ಷನಾದನು.
ಯಾರು ದೇವರ ಮಗನನ್ನು ನಂಬುತ್ತಾರೋ ಅವರಲ್ಲಿ ಆ ಜೀವ ಉಂಟು, ಆದರೆ ಯಾರು ದೇವರ ಮಗನನ್ನು ನಂಬುವುದಿಲ್ಲವೋ ಅವರಲ್ಲಿ ಆ ಜೀವವಿಲ್ಲ.
Vida no Filho
Deus enviou seu Filho ao mundo para que vivêssemos por Ele. O Filho dá vida, julga e reconcilia os pecadores com o Pai.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆ. ಇದಲ್ಲದೆ ತಂದೆಯು ಯಾರಿಗೂ ತೀರ್ಪುಮಾಡುವುದಿಲ್ಲ, ಆದರೆ ಎಲ್ಲಾ ತೀರ್ಪನ್ನು ಮಗನಿಗೆ ಕೊಟ್ಟಿದ್ದಾನೆ. ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.
ನಿಮಗೆ ನಿಜನಿಜವಾಗಿ ಹೇಳುತ್ತೇನೆ ಸತ್ತವರು ದೇವಕುಮಾರನ ಸ್ವರವನ್ನು ಕೇಳುವ ಕಾಲ ಬರುತ್ತದೆ, ಅದು ಈಗಾಗಲೇ ಬಂದಿದೆ, ಕೇಳಿದವರು ಬದುಕುವರು. ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.
ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು. ನೀವು ಪುತ್ರರಾಗಿರುವುದರಿಂದ ದೇವರು, "ಅಪ್ಪಾ ತಂದೆಯೇ" ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
ನಾವು ದೇವರಿಗೆ ಶತ್ರುಗಳಾಗಿದ್ದಾಗಲೇ ನಮಗೆ ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಂಧಾನವಾಯಿತು ಆತನ ಕೂಡ ಸಂಧಾನವಾದ ನಮಗೆ ಮಗನ ಜೀವದಿಂದ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ,
ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು;
ಅದ್ಭುತ ಸ್ವರೂಪನು, ಆಲೋಚನಾ ಕರ್ತನು,
ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ,
ಸಮಾಧಾನದ ಪ್ರಭು ಎಂಬುದು ಆತನ ಹೆಸರು.