Filho do homem
Filho do Homem é o título que Jesus mais usou para si mesmo. Ele conecta sua humanidade plena com a visão profética de Daniel sobre o Messias glorioso que receberá domínio eterno.
A profecia de Daniel
Daniel viu alguém como o Filho do Homem vindo com as nuvens do céu. Foi-lhe dado domínio, glória e reino eterno.
ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. ಸಕಲ, ಜನಾಂಗ, ಕುಲ, ಭಾಷೆಗಳವರು ಅವನ ಸೇವೆ ಮಾಡಲೆಂದು ಅವನಿಗೆ ದೊರೆತನವೂ, ಘನತೆಯೂ, ರಾಜ್ಯವೂ ಕೊಡಲಾಯಿತು. ಅವನ ಆಳ್ವಿಕೆಯು ಅಂತ್ಯವಿಲ್ಲದ್ದು. ಶಾಶ್ವತವಾದದ್ದು, ಅವನ ರಾಜ್ಯವು ಎಂದಿಗೂ ಅಳಿಯದು.
ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
ಭೂಲೋಕದ ಸುಗ್ಗಿಕಾಲವನ್ನು ಕುರಿತದ್ದು
ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.
"ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ" ಎಂದು ಹೇಳಿದನು.
Jesus, o Filho do Homem
O Filho do Homem veio buscar e salvar o que se havia perdido. Ele tem autoridade para perdoar pecados e julgar.
ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, "ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.
ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.
ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂತಿಳಿಸಿದ್ದು
ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, "ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
"ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;
ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, "ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು" ಹೇಳಿದನು.
ಮನುಷ್ಯಕುಮಾರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಬರಲಿಲ್ಲ, ಸೇವೆಮಾಡುವುದಕ್ಕೂ ಅನೇಕರನ್ನು ಬಿಡಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಈಡುಕೊಡುವುದಕ್ಕಾಗಿ ಬಂದನು" ಎಂದು ಹೇಳಿದನು.
ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು" ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, "ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು" ಎಂದು ಹೇಳಿದನು.
ಆತನು ಅವನಿಗೆ, "ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ" ಎಂದು ಹೇಳಿದನು.
ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
Glória e autoridade
Quando o Filho do Homem for levantado, atrairá todos a si. Ele é plenamente humano e plenamente divino.
ಹೀಗಿರಲಾಗಿ ಯೇಸು ಅವರಿಗೆ, "ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.
ಯೇಸು "ನಾನು ನಿಮಗೆ ನಿಜ ನಿಜವಾಗಿ ಹೇಳುತ್ತೇನೆ. ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರುತ್ತಾ ಇಳಿಯುತ್ತಾ ಇರುವುದನ್ನೂ ನೀವು ನೋಡುವಿರಿ" ಎಂದು ಹೇಳಿದನು.
"ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು?
ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?