Filho do homem
Filho do Homem é o título que Jesus mais usou para si mesmo. Ele conecta sua humanidade plena com a visão profética de Daniel sobre o Messias glorioso que receberá domínio eterno.
A profecia de Daniel
Daniel viu alguém como o Filho do Homem vindo com as nuvens do céu. Foi-lhe dado domínio, glória e reino eterno.
"ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.
ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಪುತ್ರ ಇವರ ಹಾಗೆ ಒಬ್ಬ ವ್ಯಕ್ತಿ ಇರುವವರನ್ನೂ ಕಂಡೆನು. ಅವರು ಪಾದದವರೆಗೆ ಮುಚ್ಚುವ ನಿಲುವಂಗಿಯನ್ನು ತೊಟ್ಟು, ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದರು.
ಭೂಲೋಕದ ಸುಗ್ಗಿಕಾಲ
ನಾನು ನೋಡಲಾಗಿ, ಒಂದು ಬಿಳಿ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯಪುತ್ರರಂತೆ ಒಬ್ಬರು ಕುಳಿತಿರುವುದನ್ನು ಕಂಡೆನು. ಅವರ ತಲೆಯ ಮೇಲೆ ಚಿನ್ನದ ಕಿರೀಟವೂ ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.
"ನೋಡಿರಿ, ಪರಲೋಕ ತೆರೆದಿರುವುದನ್ನೂ ಮನುಷ್ಯಪುತ್ರ ಆಗಿರುವ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ಕಾಣುತ್ತಿದ್ದೇನೆ," ಎಂದನು.
Jesus, o Filho do Homem
O Filho do Homem veio buscar e salvar o que se havia perdido. Ele tem autoridade para perdoar pecados e julgar.
ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು," ಎಂದು ಹೇಳಿದರು.
ಯೇಸು ಉತ್ತರವಾಗಿ ಅವರಿಗೆ, "ಒಳ್ಳೆಯ ಬೀಜ ಬಿತ್ತುವವನು ಮನುಷ್ಯಪುತ್ರನು.
ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.
ಯೇಸು ತಮ್ಮ ಮರಣವನ್ನು ಎರಡನೆಯ ಬಾರಿ ಮುಂತಿಳಿಸಿದ್ದು
ಅವರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದಾಗ ಯೇಸು ಅವರಿಗೆ, "ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು.
ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ.
ಕುರಿ ಆಡುಗಳ ಸಾಮ್ಯ
"ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.
ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, "ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು," ಎಂದು ಬೋಧಿಸುತ್ತಿದ್ದರು.
ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ," ಎಂದು ಹೇಳಿದರು.
ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು," ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, "ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ," ಎಂದರು.
ಯೇಸು ಅವನಿಗೆ, "ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ," ಎಂದರು.
ಏಕೆಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಪುತ್ರನಾದ ನಾನು ಬರುವ ದಿನದಲ್ಲಿ ಕಾಣಿಸಿಕೊಳ್ಳುವೆನು.
Glória e autoridade
Quando o Filho do Homem for levantado, atrairá todos a si. Ele é plenamente humano e plenamente divino.
ಯೇಸು ಅವರಿಗೆ, "ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.
ಯೇಸು ಅವನಿಗೆ, "ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ," ಎಂದು ಹೇಳಿದರು.
ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ:
"ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು?
ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು?