Filhos de Deus
Ser filho de Deus é o maior privilégio da existência humana. Pela fé em Cristo, recebemos o direito de ser chamados filhos de Deus — herdeiros de Deus e co-herdeiros com Cristo.
O direito de ser filho
A todos que creram no nome de Jesus, deu-lhes o poder de serem feitos filhos de Deus — nascidos não do sangue, mas de Deus.
ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.
"ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.
ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.
ಹೀಗಿರುವಲ್ಲಿ ಇನ್ನು ನೀನು ಸೇವಕನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ವಾರಸುದಾರನು ಆಗಿದ್ದೀ.
A identidade dos filhos
O Espírito testifica com nosso espírito que somos filhos de Deus. E se filhos, também herdeiros — herdeiros de Deus.
ಯಾರು ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು ದೇವರ ಮಕ್ಕಳಾಗಿದ್ದಾರೆ. ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
ನಾವು ದೇವರ ಮಕ್ಕಳಾಗಿದ್ದೇವೆಂಬುದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.
ಇಸ್ರಾಯೇಲಿನ ಮುಂದಿನ ಸುಸ್ಥಿತಿ
ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು.
ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
ಶುದ್ಧ ಮತ್ತು ಅಶುದ್ಧ ಆಹಾರ
ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು. ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
Viver como filhos
Vede que grande amor o Pai nos concedeu: que fôssemos chamados filhos de Deus! E é isso que somos.
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
ಆದ್ದರಿಂದ ದೇವರ ಮಕ್ಕಳು ಯಾರೆಂಬುದು ಹಾಗೂ ಸೈತಾನನ ಮಕ್ಕಳು ಯಾರೆಂಬುದು ಇದರಿಂದ ತಿಳಿದುಬರುತ್ತದೆ. ನೀತಿಯನ್ನು ಅನುಸರಿಸದವರೂ ತನ್ನ ಸಹೋದರನನ್ನು ಪ್ರೀತಿಸದವರೂ ದೇವರಿಗೆ ಸಂಬಂಧಪಟ್ಟವರಲ್ಲ.
ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.
ಆತನು ಅವರನ್ನು, "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?" ಆಗ ಸೀಮೋನ ಪೇತ್ರನು, "ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು" ಎಂದು ಉತ್ತರ ಕೊಟ್ಟನು. ಅದಕ್ಕೆ ಯೇಸು, "ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು" ಎಂದು ಹೇಳಿದನು.
ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.