Filhos de Deus
Ser filho de Deus é o maior privilégio da existência humana. Pela fé em Cristo, recebemos o direito de ser chamados filhos de Deus — herdeiros de Deus e co-herdeiros com Cristo.
O direito de ser filho
A todos que creram no nome de Jesus, deu-lhes o poder de serem feitos filhos de Deus — nascidos não do sangue, mas de Deus.
ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು. ಇವರು ರಕ್ತಸಂಬಂಧದಿಂದಾಗಲಿ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.
ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.
ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ. ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿರಿ.
ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು. ಹೀಗೆ ದೇವರು ನಿಯಮಕ್ಕೆ ಒಳಗಾದ ನಮ್ಮನ್ನು ವಿಮೋಚಿಸಿ, ನಾವು ಪುತ್ರರ ಸ್ಥಾನವನ್ನು ಹೊಂದುವಂತೆ ಮಾಡಿದರು.
ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ ಪುತ್ರನಾಗಿದ್ದೀ. ನೀನು ದೇವರ ಮಗು ಎಂದ ಮೇಲೆ ದೇವರ ಮೂಲಕ ವಾರಸುದಾರನೂ ಆಗಿದ್ದೀ.
A identidade dos filhos
O Espírito testifica com nosso espírito que somos filhos de Deus. E se filhos, também herdeiros — herdeiros de Deus.
ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ. ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, "ಅಪ್ಪಾ, ತಂದೆಯೇ," ಎಂದು ಕರೆಯುತ್ತೇವೆ.
ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ.
ಇದರ ಅರ್ಥ, ಶರೀರಸಂಬಂಧದ ಮಕ್ಕಳು ದೇವರ ಮಕ್ಕಳಾಗಿರದೆ ವಾಗ್ದಾನದ ಮಕ್ಕಳೇ ಅಬ್ರಹಾಮನ ಮಕ್ಕಳೆಂದು ಎನಿಸಿಕೊಳ್ಳುವರು ಎಂಬುದು.
"ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.
ಶುದ್ಧ ಮತ್ತು ಅಶುದ್ಧವಾದ ಆಹಾರ
ನೀವು ನಿಮ್ಮ ದೇವರಾದ ಯೆಹೋವ ದೇವರ ಮಕ್ಕಳು. ನೀವು ಸತ್ತವರಿಗೋಸ್ಕರ ಗಾಯಮಾಡಿಕೊಳ್ಳಬಾರದು. ಮುಂದಲೆಯನ್ನು ಬೋಳಿಸಿಕೊಳ್ಳಬಾರದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.
Viver como filhos
Vede que grande amor o Pai nos concedeu: que fôssemos chamados filhos de Deus! E é isso que somos.
ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.
ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.
ಸಮಾಧಾನ ಪಡಿಸುವವರು ಧನ್ಯರು,
ಅವರು ದೇವರ ಮಕ್ಕಳೆನಿಸಿಕೊಳ್ಳುವರು.
ಯೇಸು ಅವರಿಗೆ, "ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?" ಎಂದು ಕೇಳಿದರು.
ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, "ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ," ಎಂದು ಉತ್ತರಕೊಟ್ಟನು.
ಯೇಸು ಅವನಿಗೆ, "ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.
ಶಿಸ್ತಿಗಾಗಿ ಕಷ್ಟವನ್ನು ನೀವು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳೆಂದು ನಡೆಸಿಕೊಳ್ಳುತ್ತಾರೆ. ಏಕೆಂದರೆ ತಂದೆಯಿಂದ ಶಿಸ್ತುಹೊಂದದ ಮಕ್ಕಳೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರರಾಗಿರದಿದ್ದರೆ, ನೀವು ಅಕ್ರಮವಾಗಿ ಹುಟ್ಟಿದ ಮಕ್ಕಳೇ ಹೊರತು ನಿಜ ಮಕ್ಕಳಲ್ಲ.