Filhos
Os filhos são herança do Senhor — bênção e responsabilidade sagrada. A Bíblia orienta sobre a criação dos filhos com amor, disciplina e instrução nos caminhos de Deus.
Herança do Senhor
Os filhos são herança do Senhor e o fruto do ventre é seu galardão. Bem-aventurado o homem que enche deles a sua aljava.
ಪುತ್ರಸಂತಾನವು ಯೆಹೋವನಿಂದ ಬಂದ ಸ್ವತ್ತು;
ಗರ್ಭಫಲವು ಆತನ ಬಹುಮಾನವೇ.
ಯೌವನದಲ್ಲಿ ಹುಟ್ಟಿದ ಮಕ್ಕಳು,
ಯುದ್ಧವೀರನ ಕೈಯಲ್ಲಿರುವ ಅಂಬುಗಳಂತಿದ್ದಾರೆ;
ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು.
ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ
ಅಂಥವರು ಅವಮಾನ ಹೊಂದುವುದಿಲ್ಲ.
ಭಕ್ತನ ಭಾಗ್ಯ
ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ,
ನೀನು ಧನ್ಯನು, ನಿನಗೆ ಶುಭವಿರುವುದು.
ಅಂತಃಪುರದಲ್ಲಿರುವ ನಿನ್ನ ಹೆಂಡತಿಯು,
ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು;
ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು,
ಎಣ್ಣೇಮರದ ಸಸಿಗಳ ಹಾಗೆ ಇರುವರು.
ಇಗೋ, ಯೆಹೋವನಲ್ಲಿ ಭಯಭಕ್ತಿಯುಳ್ಳ ಪುರುಷನು,
ಈ ರೀತಿಯಾಗಿ ಆಶೀರ್ವಾದ ಹೊಂದುವನು.
ಭಕ್ತನ ಭಾಗ್ಯ
ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ,
ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.
ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ,
ನೀನು ಧನ್ಯನು, ನಿನಗೆ ಶುಭವಿರುವುದು.
ಅಂತಃಪುರದಲ್ಲಿರುವ ನಿನ್ನ ಹೆಂಡತಿಯು,
ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು;
ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು,
ಎಣ್ಣೇಮರದ ಸಸಿಗಳ ಹಾಗೆ ಇರುವರು.
ಯೌವನಸ್ಥರಾದ ನಮ್ಮ ಗಂಡುಮಕ್ಕಳು
ಸಮೃದ್ಧಿಯಾಗಿ ಬೆಳದಿರುವ ಸಸಿಗಳಂತಿರುವರು,
ಹೆಣ್ಣುಮಕ್ಕಳು ಅರಮನೆಯಲ್ಲಿ ಕೆತ್ತಿದ ಮೂಲೆಗಂಬದಂತೆ ಇರುವರು.
ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು;
ನೀತಿವಂತನ ವಂಶವು ಶುಭಹೊಂದುವುದು.
ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, "ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ" ಎಂದು ಅವರಿಗೆ ಹೇಳಿದನು.
ನಿಮ್ಮ ಸಂತಾನದವರಿಗೂ, ವ್ಯವಸಾಯಗಳಿಗೂ, ದನ, ಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.
ನೀವು ಎಲ್ಲಾ ಜನಗಳಿಗಿಂತಲೂ ಹೆಚ್ಚಾಗಿ ದೇವರ ಅನುಗ್ರಹವನ್ನು ಹೊಂದಿದವರಾಗಿರುವಿರಿ. ನಿಮ್ಮೊಳಗೆ ಸ್ತ್ರೀಪುರುಷರಲ್ಲಿಯಾಗಲಿ, ಹೆಣ್ಣುಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.
Instruir e disciplinar
Instrui a criança no caminho em que deve andar, e quando envelhecer não se desviará dele. Disciplina é amor em ação.
ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು,
ಮುಪ್ಪಿನಲ್ಲಿಯೂ ಓರೆಯಾಗರು.
ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ,
ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು,
ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
ಬೆತ್ತ ಮತ್ತು ಬೆದರಿಕೆಗಳಿಂದ ಜ್ಞಾನವುಂಟಾಗುವುದು,
ಶಿಕ್ಷಿಸದೆ ಬಿಟ್ಟ ಹುಡುಗನು ತಾಯಿಯ ಮಾನವನ್ನು ಕಳೆಯುವನು.
ಹುಡುಗನ ಶಿಕ್ಷೆಗೆ ಹಿಂತೆಗೆಯಬೇಡ,
ಅವನು ಬೆತ್ತದ ಏಟಿಗೆ ಸಾಯನು.
ಜ್ಞಾನವು ಪರಮೋನ್ನತವಾದದ್ದು
ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ,
ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ.
ಸೊಲೊಮೋನನ ಜ್ಞಾನೋಕ್ತಿಗಳು
ಜ್ಞಾನಿಯಾದ ಮಗನಿಂದ ತಂದೆಗೆ ಆನಂದ,
ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.
ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
O amor de Deus por crianças
Deixai vir a mim as crianças. Jesus acolheu, abençoou e honrou as crianças como modelo de fé e humildade.
ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, "ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆಯುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ಕೃಪೆಯು ಆತನ ಮೇಲೆ ಹೆಚ್ಚಾಗುತ್ತಾ ಬಂದಿತು.
ತಂದೆಯು ಮಕ್ಕಳನ್ನು ಕನಿಕರಿಸುವಂತೆ,
ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.
ದೇವರ ಮಕ್ಕಳೂ ಮತ್ತು ಸೈತಾನನ ಮಕ್ಕಳನ್ನು ಕುರಿತದ್ದು
ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.
Bênção e promessa
O Senhor te abençoe e te guarde. Os filhos dos justos serão abençoados e suas gerações caminharão na retidão.
ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ; ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
ದೇವರು ನಿನಗೆ ಆಕಾಶದ ಮಂಜನ್ನೂ,
ಸಾರವುಳ್ಳ ಭೂಮಿಯನ್ನೂ ಕೊಟ್ಟು
ದವಸಧಾನ್ಯಗಳನ್ನೂ, ದ್ರಾಕ್ಷಾರಸವನ್ನೂ ಹೇರಳವಾಗಿ ಅನುಗ್ರಹಿಸಲಿ.
ಜನಗಳು ನಿನ್ನನ್ನು ಆರಾಧಿಸಲಿ,
ಜನಾಂಗಗಳು ನಿನಗೆ ಅಧೀನವಾಗಲಿ.
ನಿನ್ನ ಅಣ್ಣತಮ್ಮಂದಿರಿಗೆ ನೀನು ದೊರೆಯಾಗಿರು,
ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ.
ನಿನ್ನನ್ನು ಶಪಿಸುವವರಿಗೆ ಶಾಪವೂ,
ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ" ಎಂದನು.
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು,
ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.
ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
"ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ" ಎಂಬ ವಾಕ್ಯವನ್ನು ದಯಪಾಲಿಸಿದನು.
ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು. ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
ನನ್ನ ಅಂತರಿಂದ್ರಿಯಗಳನ್ನು ಉಂಟುಮಾಡಿದವನೂ,
ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನಲ್ಲವೋ?
ನೀನು ನನ್ನನ್ನು ಅದ್ಭುತವಾಗಿಯೂ, ವಿಚಿತ್ರವಾಗಿಯೂ ರಚಿಸಿದ್ದರಿಂದ,
ನಿನ್ನನ್ನು ಕೊಂಡಾಡುತ್ತೇನೆ.
ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು,
ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.
ನಾನು ಗುಪ್ತಸ್ಥಳದಲ್ಲಿ ಏರ್ಪಡುತ್ತಾ,
ಭೂಗರ್ಭದಲ್ಲಿ ರಚಿಸಲ್ಪಡುತ್ತಾ ಇದ್ದಾಗ,
ನನ್ನ ಅಸ್ಥಿಪಂಜರವು ನಿನಗೆ ಮರೆಯಾಗಿದ್ದಿಲ್ಲ.
ನಾನು ಇನ್ನೂ ಕೇವಲ ಪಿಂಡವಾಗಿರುವಾಗ,
ನಿನ್ನ ಕಣ್ಣುಗಳು ನನ್ನನ್ನು ನೋಡಿದವು,
ನನ್ನ ಆಯುಷ್ಕಾಲದ ಪ್ರಥಮದಿನವು ಪ್ರಾರಂಭವಾಗುವ ಮೊದಲೇ,
ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.
ಹುಟ್ಟಿದಂದಿನಿಂದ ನೀನೇ ನನಗೆ ಆಧಾರ;
ತಾಯಿ ಹೆತ್ತಂದಿನಿಂದ ನನ್ನ ದೇವರು ನೀನೇ.
ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ;
ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ,
ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ;
ಅವನ ಸಂತತಿಯವರು ಆಶೀರ್ವಾದ ಹೊಂದುವರು.
ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು,
ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.
ಮಕ್ಕಳ ಸಂತತಿಯವರು ವೃದ್ಧರಿಗೆ ಕಿರೀಟ,
ತಂದೆತಾಯಿಗಳು ಮಕ್ಕಳಿಗೆ ಭೂಷಣ.
ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು,
ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.
Criação e obediência
Pais, criai vossos filhos na disciplina e instrução do Senhor. Filhos, obedecei a vossos pais — isto é justo e agradável a Deus.
ತಂದೆತಾಯಿಗಳೂ ಮಕ್ಕಳೂ
ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, "ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ."
ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.
ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.
"ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
ನಿಮ್ಮ ಶಿಸ್ತಿಗಾಗಿಯೇ, ನಿಮಗೆ ಶಿಕ್ಷೆಯಾಗುತ್ತದೆಂದು ಅದನ್ನು ಸಹಿಸಿಕೊಳ್ಳಿರಿ. ದೇವರು ನಿಮ್ಮನ್ನು ಮಕ್ಕಳೆಂದು ನಡೆಸುತ್ತಾನೆ. ಯಾಕೆಂದರೆ ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿದ್ದಾನೆ? ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.
ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯವರಿಗೆ ಭಕ್ತಿತೋರಿಸುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲವು ಬಂದಿತೆಂದು ತಿಳಿದು ಆಕೆಗೆ ದುಃಖವಾಗುತ್ತದೆ, ಆದರೆ ಆಕೆಯು ಕೂಸನ್ನು ಹೆತ್ತ ಮೇಲೆ, ಲೋಕದಲ್ಲಿ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಪುನಃ ನೆನಸಿಕೊಳ್ಳುವುದಿಲ್ಲ.
ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರೂ ಹಾಗು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿಯದ ನಿಮ್ಮ ಮಕ್ಕಳೂ ಅಲ್ಲಿಗೆ ಸೇರುವರು. ಅವರಿಗೇ ಆ ದೇಶವನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.