Fim do mundo
A Bíblia fala sobre o fim do mundo como evento certo e definitivo. Céus e terra passarão, mas as palavras de Jesus jamais passarão. A questão não é se, mas quando.
Os céus passarão
Os céus e a terra passarão, mas as palavras de Jesus permanecerão para sempre. O mundo presente é temporário.
ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
"ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.
ಮನುಷ್ಯಕುಮಾರನು ಬರುವ ಸಮಯ ತಿಳಿಯದ ಕಾರಣ ಎಚ್ಚರವಾಗಿರಬೇಕೆಂದು ಯೇಸು ಬೋಧಿಸಿದ್ದು
"ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,
ಆ ದಿನವೂ ಗಳಿಗೆಯೂ ಯಾರಿಗೂ ತಿಳಿಯದು
"ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
O dia do Senhor
O dia do Senhor virá como ladrão. Os céus passarão com grande estrondo, e os elementos se dissolverão no fogo.
ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.
ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.
ಲೋಕಾಂತ್ಯವನ್ನು ಎದುರುನೋಡುತ್ತಾ ಪರಿಶುದ್ಧರಾಗಿ ನಡೆಯಿರಿ ಎಂಬ ಬೋಧನೆ
ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
ಸಹೋದರರೇ, ಈ ಸಂಗತಿಗಳು ನಡೆಯಬೇಕಾಗಿರುವ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯುವುದು ಅಗತ್ಯವಿಲ್ಲ. ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. "ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು" ಜನರು ಹೇಳುತ್ತಿರುವಾಗಲೇ ನಾಶನವು ಅವರ ಮೇಲೆ ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವುದು, ಅವರು ಹೇಗೂ ತಪ್ಪಿಸಿಕೊಳ್ಳಲಾರರು. ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ. ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.
ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ. ನೀವೆಲ್ಲರೂ ‘ಬೆಳಕಿನ ಮಕ್ಕಳು’ ಹಾಗೂ ‘ಹಗಲಿನ ಮಕ್ಕಳು’ ಆಗಿದ್ದೀರಷ್ಟೆ, ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ. ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿರೋಣ. ನಿದ್ರೆಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ, ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರಷ್ಟೆ. ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ. ಯಾಕೆಂದರೆ ದೇವರು ನಮ್ಮನ್ನು ತನ್ನ ಕೋಪಕ್ಕೆ ಗುರಿಯಾಗಬೇಕೆಂದು ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದಿಕೊಳ್ಳಬೇಕೆಂದು ನೇಮಿಸಿದನು.
Destruição e renovação
O Dia do Senhor trará juízo sobre os ímpios, mas também novos céus e nova terra onde habita a justiça.
ಯೆಹೋವನ ದಿನದ ವಿವರಣೆ
ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ;
ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!
ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ,
ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ,
ಕಾರ್ಮುಗಿಲ ಕಗ್ಗತ್ತಲ ದಿನ!
ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು,
ಆರ್ಭಟಿಸಿ ಕೊಂಬೂದುವ ದಿನ.
ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ
ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು;
ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!
ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು;
ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು;
ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!
ಇಗೋ, ಯೆಹೋವನ ದಿನವು ಬರುತ್ತಿದೆ. ಅದು ಭೂಮಿಯನ್ನು ಹಾಳು ಮಾಡಿ,
ಪಾಪಿಗಳನ್ನು ನಿರ್ಮೂಲಮಾಡುವುದಕ್ಕೆ ಆತನ ಕೋಪೋದ್ರೇಕದಿಂದಲೂ, ತೀಕ್ಷ್ಣವಾದ ರೋಷದಿಂದಲೂ ಕ್ರೂರವಾಗಿರುವುದು.
ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು. ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
ಮನುಷ್ಯಕುಮಾರನು ಪುನರಾಗಮನ
"ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.
ಆದರೆ ಅಂದು ಬರುವುದಕ್ಕಿರುವ ಇವೆಲ್ಲವುಗಳಿಂದ ತಪ್ಪಿಸಿಕೊಳ್ಳುವುದಕ್ಕೂ, ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವುದಕ್ಕೂ, ನೀವು ಪೂರ್ಣ ಶಕ್ತರಾಗುವಂತೆ, ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆಮಾಡಿಕೊಳ್ಳುತ್ತಾ ಎಚ್ಚರವಾಗಿರಿ" ಅಂದನು.
ನೂತನ ಭೂಮ್ಯಾಕಾಶಗಳು
ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, "ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು. ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು" ಎಂದು ಹೇಳಿತು.
ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, "ಇಗೋ, ನಾನು ಎಲ್ಲವನ್ನು ನೂತನಗೊಳಿಸುತ್ತೇನೆ" ಎಂದನು. ಮತ್ತು ಒಬ್ಬನು ನನಗೆ, "ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ, ಸತ್ಯವಾದವೂ ಆಗಿವೆ" ಎಂದು ಹೇಳಿದನು.