Fraqueza
A fraqueza humana não é fraqueza diante de Deus. Pelo contrário, é na nossa fragilidade que o poder de Cristo se aperfeiçoa. Deus escolhe os fracos para confundir os fortes.
Poder na fraqueza
A minha graça te basta, pois o meu poder se aperfeiçoa na fraqueza. Quando sou fraco, então é que sou forte.
ಅದಕ್ಕಾತನು, "ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ" ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.
ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.
ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.
ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
Deus cuida dos fracos
O Senhor está perto dos que têm o coração quebrantado. Ele dá poder aos fracos e renova a força dos cansados.
ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ.
ತನುಮನಗಳು ಕ್ಷಯಿಸಿದರೂ
ನನ್ನ ಆತ್ಮಕ್ಕೆ ಬಲವು
ನನ್ನ ಶಾಶ್ವತವಾದ ಪಾಲೂ ದೇವರೇ.
ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ,
ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ.
ಯೇಸುವಿನಿಂದ ವಿಶ್ರಾಂತಿಯ ಆಹ್ವಾನ
"ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.
Compaixão e intercessão
O Espírito intercede por nós com gemidos inexprimíveis. Jesus compreende nossas fraquezas porque foi tentado como nós.
ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.
ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ಆದರೆ ದೇಹವು ಬಲಹೀನವಾಗಿದೆ" ಎಂದು ಹೇಳಿದನು.
ಹರ್ಷಹೃದಯವು ಒಳ್ಳೆಯ ಔಷಧ,
ಕುಗ್ಗಿದ ಮನದಿಂದ ಅನಾರೋಗ್ಯ.
ಬಾಯಿಲ್ಲದವರಿಗೂ, ಹಾಳಾಗಿ ಹೋಗುತ್ತಿರುವವರೆಲ್ಲರಿಗೂ,
ನ್ಯಾಯವಾಗುವಂತೆ ಬಾಯಿ ತೆರೆ.